
ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಉಮ್ರೆರ್ ಪಟ್ಟಣದ ಅಲ್ಯೂಮಿನಿಯಂ ಫಾಯಿಲ್ ಕಾರ್ಖಾನೆಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ದುರ್ಘಟನೆಯಲ್ಲಿ ಐವರು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ.
ಕಾರ್ಖಾನೆಯಲ್ಲಿ ಅಲ್ಯೂಮಿನಿಯಂ ಫಾಯಿಲ್ ಮತ್ತು ಪೌಡರ್ ತಯಾರಿಸಲಾಗುತ್ತಿತ್ತು ಎನ್ನಲಾಗಿದ್ದು, ನಿನ್ನೆ ಸಂಜೆ ಕಾರ್ಖಾನೆಯಲ್ಲಿ ಈ ದಿಢೀರ್ ಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿದೆ.
ಸ್ಫೋಟದಲ್ಲಿ ಹಲವು ಕಾರ್ಮಿಕರು ಗಾಯಗೊಂಡಿದ್ದು, ಈ ಪೈಕಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆಂದು ವರದಿಗಳು ತಿಳಿಸಿವೆ.
ಕಾರ್ಖಾನೆಯಲ್ಲಿ ಅಲ್ಯೂಮಿನಿಯಂ ಪೌಡರ್ ಇದ್ದ ಕಾರಣ ಬೆಂಕಿಯನ್ನು ನಂದಿಸುವಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಡಬೇಕಾಯಿತು ಎಂದು ಉಮ್ರೆಡ್ ಪೊಲೀಸ್ ಇನ್ಸ್‌ಪೆಕ್ಟರ್ ಧನಾಜಿ ಜಲಕ್ ತಿಳಿಸಿದ್ದಾರೆ.
ಘಟನೆಯಲ್ಲಿ ಆರು ಜನರು ಗಾಯಗೊಂಡಿದ್ದು, ಈ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಅವರನ್ನು ನಾಗ್ಪುರ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಹೇಳಿದ್ದಾರೆ.
Advertisement