ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಟ್ಟಣೆ: 350ಕ್ಕೂ ಹೆಚ್ಚು ವಿಮಾನಗಳು ವಿಳಂಬ

ಕೆಟ್ಟ ಹವಾಮಾನ ಮತ್ತು ದೆಹಲಿಯಲ್ಲಿ ಭಾರೀ ಸಂಚಾರ ದಟ್ಟಣೆಯಿಂದಾಗಿ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 350ಕ್ಕೂ ಹೆಚ್ಚು ವಿಮಾನಗಳು ವಿಳಂಬವಾಗಿವೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ನವದೆಹಲಿ: ಕೆಟ್ಟ ಹವಾಮಾನ ಮತ್ತು ದೆಹಲಿಯಲ್ಲಿ ಭಾರೀ ಸಂಚಾರ ದಟ್ಟಣೆಯಿಂದಾಗಿ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 350ಕ್ಕೂ ಹೆಚ್ಚು ವಿಮಾನಗಳು ವಿಳಂಬವಾಗಿವೆ. ಶುಕ್ರವಾರದಂದು ಧೂಳಿನ ಬಿರುಗಾಳಿಯಿಂದಾಗಿ, ಅನೇಕ ವಿಮಾನಗಳನ್ನು ರದ್ದುಗೊಳಿಸಲಾಗಿದ್ದು ಅವುಗಳ ಮಾರ್ಗಗಳನ್ನು ಬದಲಾಯಿಸಲಾಯಿತು. ಇದರ ಪರಿಣಾಮ ಶನಿವಾರದವರೆಗೂ ಮುಂದುವರೆಯಿತು. ಇದರಿಂದಾಗಿ ಪ್ರಯಾಣಿಕರು ತೀವ್ರ ತೊಂದರೆಯನ್ನು ಎದುರಿಸಬೇಕಾಯಿತು.

ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ ವಿಮಾನ ಕಾರ್ಯಾಚರಣೆಗಳು ಸಹಜ ಸ್ಥಿತಿಗೆ ಮರಳುತ್ತಿವೆ ಎಂದು ತಿಳಿಸಿದೆ. ಶುಕ್ರವಾರ ರಾತ್ರಿ ಹವಾಮಾನ ವೈಪರೀತ್ಯದಿಂದಾಗಿ ಕೆಲವು ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿದೆ. ಪ್ರಯಾಣಿಕರಿಗೆ ಅನುಕೂಲವನ್ನು ಒದಗಿಸಲು ವಿಮಾನ ನಿಲ್ದಾಣ ಆಡಳಿತವು ಎಲ್ಲಾ ಸಂಬಂಧಿತ ಸಂಸ್ಥೆಗಳ ಸಹಯೋಗದೊಂದಿಗೆ ಕಾರ್ಯನಿರ್ವಹಿಸುತ್ತಿದೆ.

ಫ್ಲೈಟ್ ಟ್ರ್ಯಾಕಿಂಗ್ ಪೋರ್ಟಲ್ Flightradar24 ಪ್ರಕಾರ, ಸರಾಸರಿ 40 ನಿಮಿಷಗಳಿಗಿಂತ ಹೆಚ್ಚು ವಿಳಂಬವಾಗಿದೆ. ದೆಹಲಿಯಲ್ಲಿ ಭಾರೀ ವಾಯು ಸಂಚಾರ ಒತ್ತಡದಿಂದಾಗಿ, ವಿಮಾನಗಳ ನಿರ್ಗಮನ ಮತ್ತು ಆಗಮನಕ್ಕೆ ಅನುಮತಿ ಪಡೆಯುವಲ್ಲಿ ವಿಳಂಬವಾಗುತ್ತಿದೆ. ಇದು ತನ್ನ ಸಂಪೂರ್ಣ ಜಾಲದ ಮೇಲೆ ಪರಿಣಾಮ ಬೀರಿದೆ ಎಂದು ಇಂಡಿಗೋ ತಿಳಿಸಿದೆ. ಪ್ರಸ್ತುತ, ವಿಮಾನ ನಿಲ್ದಾಣದಲ್ಲಿ ಕೇವಲ ಮೂರು ರನ್‌ವೇಗಳು ಕಾರ್ಯನಿರ್ವಹಿಸುತ್ತಿವೆ. ಏಕೆಂದರೆ ಒಂದು ರನ್‌ವೇ ನಿರ್ವಹಣೆಗಾಗಿ ಮುಚ್ಚಲಾಗಿದೆ. ವಿಳಂಬವಾದ ವಿಮಾನಗಳಿಗಾಗಿ ಕಾಯುತ್ತಿರುವ ಜನಸಂದಣಿ ಮತ್ತು ಅವ್ಯವಸ್ಥೆಯ ವೀಡಿಯೊಗಳನ್ನು ಅನೇಕ ಪ್ರಯಾಣಿಕರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

ಸಂಗ್ರಹ ಚಿತ್ರ
ದೆಹಲಿ ವಿಮಾನ ನಿಲ್ದಾಣ: ಬಿರುಗಾಳಿ, ಭಾರೀ ಧೂಳಿನಿಂದಾಗಿ 15 ವಿಮಾನಗಳ ಮಾರ್ಗ ಬದಲಾವಣೆ

CISF ಮತ್ತು ವಿಮಾನ ನಿಲ್ದಾಣದ ಅಧಿಕಾರಿಗಳು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಿದ್ದು ಪ್ರಯಾಣಿಕರ ದೂರುಗಳಿಗೆ ಸ್ಪಂದಿಸಲು ಪ್ರಯತ್ನಿಸಿದರು. ಧೂಳಿನ ಬಿರುಗಾಳಿಯಿಂದಾಗಿ ಹಲವಾರು ವಿಮಾನಗಳನ್ನು ಬೇರೆಡೆಗೆ ತಿರುಗಿಸಲಾಗಿದೆ ಅಥವಾ ರದ್ದುಗೊಳಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದರಿಂದಾಗಿ ಟರ್ಮಿನಲ್‌ನಲ್ಲಿ ಪ್ರಯಾಣಿಕರ ನೂಕು ನುಗ್ಗಲು ಉಂಟಾಯಿತು. ಹವಾಮಾನ ವೈಪರೀತ್ಯದಿಂದಾಗಿ 22 ವಿಮಾನಗಳ ಮಾರ್ಗ ಬದಲಾವಣೆ ಮಾಡಲಾಗಿದ್ದು, ಐದು ವಿಮಾನಗಳ ಹಾರಾಟ ರದ್ದಾಗಿದೆ ಎಂದು ಏರ್ ಇಂಡಿಯಾ ತಿಳಿಸಿದೆ. ವಿಮಾನ ನಿಲ್ದಾಣದ ಆಡಳಿತ ವ್ಯವಸ್ಥೆಗಳ ಬಗ್ಗೆ ಪ್ರಯಾಣಿಕರು ತೀವ್ರವಾಗಿ ಟೀಕಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com