ಸಿಂಗಾಪುರದಲ್ಲಿ ಬೆಂಕಿ ಅವಘಡ: ಮಗನ ಆರೋಗ್ಯದ ಬಗ್ಗೆ ಮಾಹಿತಿ ಹಂಚಿಕೊಂಡ ಪವನ್ ಕಲ್ಯಾಣ್
ಅಮರಾವತಿ: ಸಿಂಗಾಪುರದ ಬೇಸಿಗೆ ಶಿಬಿರದಲ್ಲಿ ಇತ್ತೀಚೆಗೆ ಸಂಭವಿಸಿದ ಬೆಂಕಿ ಅವಘಡದಲ್ಲಿ ಗಾಯಗೊಂಡಿದ್ದ ತಮ್ಮ ಮಗ ಮಾರ್ಕ್ ಶಂಕರ್ ಈಗ ಸ್ಥಿರವಾಗಿದ್ದಾರೆ ಮತ್ತು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಭಾನುವಾರ ಹೇಳಿದ್ದಾರೆ.
'ಸಿಂಗಾಪುರದಲ್ಲಿ ನಡೆದ ದುರದೃಷ್ಟಕರ ಘಟನೆಯ ನಂತರ ನನ್ನ ಮಗ ಶಂಕರ್ ಸ್ಥಿರವಾಗಿದ್ದಾನೆ ಮತ್ತು ಚೇತರಿಸಿಕೊಳ್ಳುತ್ತಿದ್ದಾನೆ. ಅವನು ಚೇತರಿಸಿಕೊಳ್ಳುವಂತೆ ಪ್ರಾರ್ಥನೆ, ಕಾಳಜಿ ಮತ್ತು ಬೆಂಬಲ ನೀಡಿದ ಎಲ್ಲರಿಗೂ ನಾನು ಪ್ರಾಮಾಣಿಕವಾಗಿ ಧನ್ಯವಾದ ಹೇಳುತ್ತೇನೆ' ಎಂದು ಪವನ್ ಕಲ್ಯಾಣ್ 'X' ನಲ್ಲಿ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
ಏಪ್ರಿಲ್ 8 ರಂದು ಸಿಂಗಾಪುರದ ಕಟ್ಟಡವೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಬಾಲಕಿಯೊಬ್ಬರು ಮೃತಪಟ್ಟಿದ್ದರು ಮತ್ತು ಶಂಕರ್ ಸೇರಿದಂತೆ 20 ಮಂದಿ ಗಾಯಗೊಂಡಿದ್ದರು.
ಕಠಿಣ ಸಂದರ್ಭದಲ್ಲಿ ನಮ್ಮ ಕುಟುಂಬಕ್ಕೆ ಬೆಂಬಲವಾಗಿ ನಿಂತ ಪ್ರಧಾನಿ ನರೇಂದ್ರ ಮೋದಿ, ಆಂಧ್ರ ಪ್ರದೇಶದ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಸೇರಿದಂತೆ ಇತರರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ