ಟಿವಿ ಸಂದರ್ಶನದಲ್ಲಿ ಪ್ರಧಾನಿ ಮೋದಿ, RSS ನಿಂದನೆ ಆರೋಪ: ಕನ್ಹಯ್ಯಾ ಕುಮಾರ್ ವಿರುದ್ಧ ಪೊಲೀಸರಿಗೆ BJP ದೂರು

ಬಿಹಾರದ ಬಿಜೆಪಿಯ ಮಾಧ್ಯಮ ಉಸ್ತುವಾರಿ ಡ್ಯಾನಿಶ್ ಇಕ್ಬಾಲ್ ನೇತೃತ್ವದ ನಿಯೋಗ ಕೊತ್ವಾಲಿ ಪೊಲೀಸ್ ಠಾಣೆಗೆ ಭೇಟಿ ನೀಡಿ ದೂರು ದಾಖಲಿಸಿದೆ.
 Kanhaiya Kumar
ಕನ್ಹಯ್ಯಾ ಕುಮಾರ್
Updated on

ಪಾಟ್ನಾ: ಇತ್ತೀಚಿಗೆ ಟಿವಿ ಸಂದರ್ಶನವೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಆರ್‌ಎಸ್‌ಎಸ್ ವಿರುದ್ಧ ನಿಂದನಾತ್ಮಕ ಪದಗಳನ್ನು ಬಳಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡ ಕನ್ಹಯ್ಯಾ ಕುಮಾರ್ ವಿರುದ್ಧ ಬಿಜೆಪಿ ಶನಿವಾರ ಪಾಟ್ನಾದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.

ಬಿಹಾರದ ಬಿಜೆಪಿಯ ಮಾಧ್ಯಮ ಉಸ್ತುವಾರಿ ಡ್ಯಾನಿಶ್ ಇಕ್ಬಾಲ್ ನೇತೃತ್ವದ ನಿಯೋಗ ಕೊತ್ವಾಲಿ ಪೊಲೀಸ್ ಠಾಣೆಗೆ ಭೇಟಿ ನೀಡಿ ದೂರು ದಾಖಲಿಸಿದೆ. ಹೇಳಿಕೆಗಳ ಕುರಿತು ಕನ್ಹಯ್ಯಾ ಕುಮಾರ್ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಇಕ್ಬಾಲ್ ಪೊಲೀಸರನ್ನು ಒತ್ತಾಯಿಸಿದ್ದಾರೆ.

ಏಪ್ರಿಲ್ 11 ರಂದು ಟಿವಿ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ 'ತುಕ್ಡೆ ತುಕ್ಡೆ ಗ್ಯಾಂಗ್'ನ ಭಾಗವಾಗಿರುವ ಕನ್ಹಯ್ಯಾ ಕುಮಾರ್, ಪ್ರಧಾನಿ ಮೋದಿ ಮತ್ತು ಆರ್‌ಎಸ್‌ಎಸ್ ಮತ್ತು ಅದರ ಸಿದ್ಧಾಂತಗಳ ವಿರುದ್ಧ ನಿಂದನೀಯ ಭಾಷೆಯನ್ನು ಬಳಸಿದ್ದಾರೆ.

 Kanhaiya Kumar
ಫಡ್ನವೀಸ್ ಪತ್ನಿ ಕುರಿತು ಕನ್ಹಯ್ಯಾ ಕುಮಾರ್ ವಿವಾದಾತ್ಮಕ ಹೇಳಿಕೆ! ಬಿಜೆಪಿ ಖಂಡನೆ

ಸಂದರ್ಶನದಲ್ಲಿ ಅವರು ಬಳಸಿರುವ ಭಾಷೆ ಅತ್ಯಂತ ಆಕ್ಷೇಪಾರ್ಹ ಮತ್ತು ಸ್ವೀಕಾರಾರ್ಹವಲ್ಲ ಎಂದು ಇಕ್ಬಾಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕನ್ಹಯ್ಯಾ ಕುಮಾರ್ ವಿರುದ್ಧ ತಕ್ಷಣ ಎಫ್‌ಐಆರ್ ದಾಖಲಿಸುವಂತೆ ಪೊಲೀಸರಿಗೆ ದೂರು ನೀಡಿದ್ದೇವೆ. ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುವ ವಿಶ್ವಾಸವಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com