
ನವದೆಹಲಿ: ವಕ್ಫ್ ಕಾಯ್ದೆಯಲ್ಲಿನ ತಿದ್ದುಪಡಿಗಳು ಮುಸ್ಲಿಂ ಸಮುದಾಯವನ್ನು ಗುರಿಯಾಗಿರಿಸಿಕೊಂಡಿಲ್ಲ, ಬದಲಾಗಿ ಹಿಂದಿನ ತಪ್ಪುಗಳನ್ನು ಸರಿಪಡಿಸುವ ಉದ್ದೇಶವನ್ನು ಹೊಂದಿವೆ ಎಂದು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತದಲ್ಲಿ ಯಾರೊಬ್ಬರೂ ಬಲವಂತವಾಗಿ ಮತ್ತು ಏಕಪಕ್ಷೀಯವಾಗಿ ಯಾರೊಬ್ಬರ ಭೂಮಿಯನ್ನು ಕಸಿದುಕೊಳ್ಳಲು ಅವಕಾಶವಿಲ್ಲ ಎಂದು ಖಾತ್ರಿಪಡಿಸುವುದು ನಮ್ಮ ಸರ್ಕಾರದ ಉದ್ದೇಶವಾಗಿದೆ.
ವಕ್ಫ್ ಕಾನೂನನ್ನು ತಿದ್ದುಪಡಿ ಮಾಡಲಾಗಿದೆ. ಅದರಲ್ಲಿರುವ ಕೆಲವು ನಿಬಂಧನೆಗಳು ವಕ್ಫ್ ಮಂಡಳಿಗಳಿಗೆ ಅಧಿಕಾರವನ್ನು ನೀಡಿದೆ. ಇದು ಮುಸ್ಲಿಂ ಸಮುದಾಯವನ್ನು ಗುರಿಯಾಗಿರಿಸಿಕೊಂಡಿಲ್ಲ. ಹಿಂದಿನ ತಪ್ಪುಗಳನ್ನು ಸರಿಪಡಿಸುವುದು ನಮ್ಮ ಉದ್ದೇಶವಾಗಿದೆ ಎಂದರು.
ವಕ್ಫ್ ತಿದ್ದುಪಡಿಯ ನಂತರ, ಒಂದು ಭೂಮಿಯನ್ನು ವಕ್ಫ್ ಆಸ್ತಿ ಎಂದು ಅನಿಯಂತ್ರಿತವಾಗಿ ಘೋಷಿಸಲಾಗುವುದಿಲ್ಲ ಎಂದು ಹೇಳಿದರು. ಪಶ್ಚಿಮ ಬಂಗಾಳದ ಕೆಲವು ಭಾಗಗಳಲ್ಲಿ ಹಿಂಸಾತ್ಮಕವಾಗಿ ಮಾರ್ಪಟ್ಟಿರುವ ತಿದ್ದುಪಡಿಯ ವಿರುದ್ಧ ವಿವಿಧ ಮುಸ್ಲಿಂ ಗುಂಪುಗಳ ಪ್ರತಿಭಟನೆಗಳು ನಡೆಯುತ್ತಿವೆ.
ಸಂಸತ್ತು ಅಂಗೀಕರಿಸಿದ ವಕ್ಫ್ ಮಸೂದೆಗೆ ಏಪ್ರಿಲ್ 5 ರಂದು ರಾಷ್ಟ್ರಪತಿಗಳ ಒಪ್ಪಿಗೆ ಸಿಕ್ಕಿತು. ಆಡಳಿತ ಪಕ್ಷ ಎನ್‌ಡಿಎ ಈ ಕಾನೂನನ್ನು ಅಲ್ಪಸಂಖ್ಯಾತರಿಗೆ ಪ್ರಯೋಜನಕಾರಿ ಎಂದು ಬಲವಾಗಿ ಸಮರ್ಥಿಸಿಕೊಂಡರೆ, ವಿರೋಧ ಪಕ್ಷಗಳು ಇದನ್ನು ಮುಸ್ಲಿಂ ವಿರೋಧಿ ಎಂದು ಬಣ್ಣಿಸಿವೆ.
Advertisement