ಡಿಜಿಟಲ್ ಅರೆಸ್ಟ್ ಪ್ರಕರಣ: 12 ಕಡೆ ಸಿಬಿಐ ದಾಳಿ, ನಾಲ್ವರು ಸೈಬರ್ ಕಿಂಗ್‌ಪಿನ್‌ಗಳ ಬಂಧನ

ವಿವಿಧ ಕಾನೂನು ಜಾರಿ ಸಂಸ್ಥೆಗಳ ಅಧಿಕಾರಿಗಳಂತೆ ನಟಿಸಿ, ಹಲವು ಜನರನ್ನು ಡಿಜಿಟಲ್ ಅರೆಸ್ಟ್ ಮಾಡಿ, ಹಣ ಸುಲಿಗೆ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Digital Arrest
ಡಿಜಿಟಲ್ ಅರೆಸ್ಟ್ (ಸಾಂಕೇತಿಕ ಚಿತ್ರ) online desk
Updated on

ನವದೆಹಲಿ: ಸೈಬರ್ ಅಪರಾಧಿಗಳು ತಾವು ಕಾನೂನು ಜಾರಿ ಅಧಿಕಾರಿಗಳೆಂದು ಹೇಳಿಕೊಂಡು ಕಳೆದ ಮೂರು ತಿಂಗಳಲ್ಲಿ 42 ಬಾರಿ, ಒಟ್ಟು 7.67 ಕೋಟಿ ರೂ. ಸುಲಿಗೆ ಮಾಡಿರುವ ಪ್ರಮುಖ 'ಡಿಜಿಟಲ್ ಅರೆಸ್ಟ್' ಪ್ರಕರಣದಲ್ಲಿ ನಾಲ್ವರು ಕಿಂಗ್‌ಪಿನ್‌ಗಳನ್ನು ಬಂಧಿಸಿರುವುದಾಗಿ ಕೇಂದ್ರ ತನಿಖಾ ಸಂಸ್ಥೆ(ಸಿಬಿಐ) ಮಂಗಳವಾರ ತಿಳಿಸಿದೆ.

ಮೂಲತಃ ರಾಜಸ್ಥಾನದ ಜುನ್‌ಜುನುವಿನ ಸೈಬರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಈ ಪ್ರಕರಣವನ್ನು ರಾಜಸ್ಥಾನ ಸರ್ಕಾರದ ಕೋರಿಕೆಯ ಮೇರೆಗೆ ಸಿಬಿಐ ತನಿಖೆ ನಡೆಸುತ್ತಿದೆ. ವಿವಿಧ ಕಾನೂನು ಜಾರಿ ಸಂಸ್ಥೆಗಳ ಅಧಿಕಾರಿಗಳಂತೆ ನಟಿಸಿ, ಹಲವು ಜನರನ್ನು ಡಿಜಿಟಲ್ ಅರೆಸ್ಟ್ ಮಾಡಿ, ಹಣ ಸುಲಿಗೆ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಿಬಿಐ ನಡೆಸುತ್ತಿರುವ ಆಪರೇಷನ್ ಚಕ್ರ-ವಿ ಕಾರ್ಯಾಚರಣೆಯ ಭಾಗವಾಗಿ ಮುಂಬೈ ಮತ್ತು ಮೊರಾದಾಬಾದ್‌ನಿಂದ ತಲಾ ಇಬ್ಬರನ್ನು ಬಂಧಿಸಲಾಗಿದೆ. ಉತ್ತರ ಪ್ರದೇಶದ ಮೊರಾದಾಬಾದ್ ಮತ್ತು ಸಂಭಾಲ್, ಮಹಾರಾಷ್ಟ್ರದ ಮುಂಬೈ, ರಾಜಸ್ಥಾನದ ಜೈಪುರ ಮತ್ತು ಪಶ್ಚಿಮ ಬಂಗಾಳದ ಕೃಷ್ಣನಗರ ಸೇರಿದಂತೆ ದೇಶಾದ್ಯಂತ 12 ಸ್ಥಳಗಳಲ್ಲಿ ಸಿಬಿಐ ದಾಳಿ ನಡೆಸಿ, ಫಾಲೋ-ಅಪ್ ಶೋಧ ಕಾರ್ಯಾಚರಣೆ ನಡೆಸಿತು.

Digital Arrest
6 ಗಂಟೆ ಡಿಜಿಟಲ್​ ಅರೆಸ್ಟ್​: 19 ಲಕ್ಷ ರೂ ಕಳೆದುಕೊಂಡ ತುಮಕೂರಿನ ಸರ್ಕಾರಿ ನೌಕರ; ದೂರು ದಾಖಲು

ಸಿಬಿಐ ಅಧಿಕಾರಿಗಳು ವ್ಯಾಪಕವಾಗಿ ದತ್ತಾಂಶ ವಿಶ್ಲೇಷಣೆ ಮತ್ತು ಪ್ರೊಫೈಲಿಂಗ್ ಒಳಗೊಂಡ ಆಳವಾದ ತನಿಖೆ ನಡೆಸಿದರು. ಅಪರಾಧಿಗಳನ್ನು ಗುರುತಿಸಲು ಸುಧಾರಿತ ತನಿಖಾ ತಂತ್ರಗಳನ್ನು ಬಳಸಲಾಯಿತು" ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

"ತನಿಖೆಯ ಸಮಯದಲ್ಲಿ ದೊರೆತ ಸುಳಿವುಗಳ ಆಧಾರದ ಮೇಲೆ, ಸಿಬಿಐ ಇತ್ತೀಚೆಗೆ ಉತ್ತರ ಪ್ರದೇಶದ ಮೊರಾದಾಬಾದ್ ಮತ್ತು ಸಂಭಾಲ್, ಮಹಾರಾಷ್ಟ್ರದ ಮುಂಬೈ, ರಾಜಸ್ಥಾನದ ಜೈಪುರ ಮತ್ತು ಪಶ್ಚಿಮ ಬಂಗಾಳದ ಕೃಷ್ಣನಗರದ ಹನ್ನೆರಡು ಸ್ಥಳಗಳಲ್ಲಿ ವ್ಯಾಪಕ ಶೋಧ ನಡೆಸಿತು. ನಂತ ಈ ಹೆಚ್ಚು ಸಂಘಟಿತ ಅಪರಾಧ ಸಿಂಡಿಕೇಟ್‌ನಲ್ಲಿ ಭಾಗಿಯಾಗಿರುವ ನಾಲ್ವರು ಆರೋಪಿಗಳನ್ನು ಬಂಧಿಸಲಾಯಿತು" ಎಂದು ಅವರು ಹೇಳಿದ್ದಾರೆ.

ಶೋಧದ ಸಮಯದಲ್ಲಿ, ಬ್ಯಾಂಕ್ ಖಾತೆ ವಿವರಗಳು, ಡೆಬಿಟ್ ಕಾರ್ಡ್‌ಗಳು, ಚೆಕ್ ಪುಸ್ತಕಗಳು, ಠೇವಣಿ ಸ್ಲಿಪ್‌ಗಳು ಮತ್ತು ಡಿಜಿಟಲ್ ಸಾಧನಗಳು ಸೇರಿದಂತೆ ಗಣನೀಯ ಪುರಾವೆಗಳನ್ನು ಸಿಬಿಐ ವಶಪಡಿಸಿಕೊಂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com