
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಅವರ ತಾಯಿ, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್ ಸಾಗರೋತ್ತರ ಮುಖ್ಯಸ್ಥ ಸ್ಯಾಮ್ ಪಿತ್ರೋಡಾ ವಿರುದ್ಧ ಜಾರಿ ನಿರ್ದೇಶನಾಲಯ ಮಂಗಳವಾರ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದೆ.
ಇಡಿ ಅಧಿಕಾರಿಗಳು ಇಂದು ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದ್ದು, ಆರೋಪಪಟ್ಟಿಯಲ್ಲಿ ಸುಮನ್ ದುಬೆ ಮತ್ತು ಇತರರ ಹೆಸರುಗಳಿವೆ.
ನ್ಯಾಯಾಲಯವು ಇದೇ ಏಪ್ರಿಲ್ 25 ರಂದು ವಿಚಾರಣೆ ನಿಗದಿಪಡಿಸಿದೆ.
ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿದ ಖಾಸಗಿ ದೂರಿನ ಆಧಾರದ ಮೇಲೆ ನ್ಯಾಷನಲ್ ಹೆರಾಲ್ಡ್ ಪ್ರಕರಣ ದಾಖಲಾಗಿದ್ದು, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ ಮೂಲಕ 2000 ಕೋಟಿ ರೂ. ಮೌಲ್ಯದ ಎಜೆಎಲ್ ಆಸ್ತಿಗಳನ್ನು ಕೇವಲ 50 ಲಕ್ಷ ರೂ.ಗಳಿಗೆ ಸ್ವಾಧೀನಪಡಿಸಿಕೊಂಡಿದ್ದಾರೆ ಎಂದು ಇಡಿ ಆರೋಪಿಸಿದೆ.
Advertisement