ಜಮ್ಮು-ಕಾಶ್ಮೀರದ ಪೂಂಚ್‌ನಲ್ಲಿ ಗುಂಡಿನ ಚಕಮಕಿ; ಸೇನಾ ಸಿಬ್ಬಂದಿಗೆ ಗಾಯ

ಕಳೆದ ರಾತ್ರಿ ಸುರಂಕೋಟ್‌ನ ಲಸಾನಾದಲ್ಲಿ ಪೊಲೀಸರೊಂದಿಗೆ ಜಂಟಿ ಕಾರ್ಯಾಚರಣೆಯ ಸಮಯದಲ್ಲಿ ಭಯೋತ್ಪಾದಕರ ಚಟುವಟಿಕೆ ಬಗ್ಗೆ ಮಾಹಿತಿ ಸಿಕ್ಕಿ ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗಿದೆ.
Security personnel keep a strict vigil at Surankote in Poonch, Jammu and Kashmir.
ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನ ಸುರಂಕೋಟೆಯಲ್ಲಿ ಭದ್ರತಾ ಸಿಬ್ಬಂದಿ ಕಟ್ಟುನಿಟ್ಟಿನ ಕಣ್ಗಾವಲು ಇರಿಸಿದ್ದಾರೆ
Updated on

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಇಂದು ಮಂಗಳವಾರ ನಸುಕಿನ ಜಾವ ಗುಂಡಿನ ಚಕಮಕಿ ನಡೆದಿದೆ.

ಭಯೋತ್ಪಾದಕರ ಚಲನವಲನ ಬಗ್ಗೆ ಮಾಹಿತಿ ಬಂದ ನಂತರ ಭದ್ರತಾ ಪಡೆಗಳು ನಿನ್ನೆ ಸೋಮವಾರ ರಾತ್ರಿ ಸುರಂಕೋಟ್‌ನ ಲಸಾನಾ ಗ್ರಾಮದಲ್ಲಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದಾಗ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ರಾತ್ರಿ ಸುರಂಕೋಟ್‌ನ ಲಸಾನಾದಲ್ಲಿ ಪೊಲೀಸರೊಂದಿಗೆ ಜಂಟಿ ಕಾರ್ಯಾಚರಣೆಯ ಸಮಯದಲ್ಲಿ ಭಯೋತ್ಪಾದಕರ ಚಟುವಟಿಕೆ ಬಗ್ಗೆ ಮಾಹಿತಿ ಸಿಕ್ಕಿ ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಯಿತು.

ಭಯೋತ್ಪಾದಕರು ತಪ್ಪಿಸಿಕೊಳ್ಳದಂತೆ ಶೋಧ ಕಾರ್ಯಾಚರಣೆಗಳು ಮುಂದುವರೆದಿವೆ ಎಂದು ಸೇನೆಯ ಜಮ್ಮು ಮೂಲದ ವೈಟ್ ನೈಟ್ ಕಾರ್ಪ್ಸ್ ಎಕ್ಸ್ ಪೋಸ್ಟ್ ನಲ್ಲಿ ತಿಳಿಸಿದೆ. ಗುಂಡಿನ ದಾಳಿಯಲ್ಲಿ ಒಬ್ಬ ಸೇನಾ ಸಿಬ್ಬಂದಿ ಗಾಯಗೊಂಡಿದ್ದು, ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com