
ನಾಶಿಕ್: ಮಹಾರಾಷ್ಟ್ರದ ನಾಸಿಕ್ ನಗರದಲ್ಲಿ ಅನಧಿಕೃತ ದರ್ಗಾವನ್ನು ಕೆಡವುದನ್ನು ವಿರೋಧಿಸುತ್ತಿದ್ದವರ ಮೇಲೆ ಗುಂಪೊಂದು ನಡೆಸಿದ ದಾಳಿಯಲ್ಲಿ ಇಪ್ಪತ್ತೊಂದು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದು, ಮೂರು ಪೊಲೀಸ್ ವಾಹನಗಳಿಗೆ ಹಾನಿಯಾಗಿವೆ.
ನಿನ್ನೆ ಮಂಗಳವಾರ ತಡರಾತ್ರಿ ಈ ಘಟನೆ ನಡೆದಿದ್ದು, ಉದ್ರಿಕ್ತ ಗುಂಪು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮತ್ತು ಅಶ್ರುವಾಯು ಶೆಲ್‌ಗಳನ್ನು ಪ್ರಯೋಗಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು, ಹಿಂಸಾಚಾರಕ್ಕೆ ಸಂಬಂಧಿಸಿದಂತೆ 15 ಜನರನ್ನು ಬಂಧಿಸಲಾಗಿದೆ.
ಗಾಯಗೊಂಡ ಪೊಲೀಸ್ ಸಿಬ್ಬಂದಿ ಸ್ಥಳದಲ್ಲಿ ಅತಿಕ್ರಮಣ ವಿರೋಧಿ ಕಾರ್ಯಾಚರಣೆಯ ಸಮಯದಲ್ಲಿ ಭದ್ರತಾ ಕರ್ತವ್ಯದಲ್ಲಿದ್ದರು. ಪರಿಸ್ಥಿತಿ ಪ್ರಸ್ತುತ ಶಾಂತಸ್ಥಿತಿಗೆ ಬಂದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ, ಬಾಂಬೆ ಹೈಕೋರ್ಟ್‌ನ ಆದೇಶದ ನಂತರ, ನಾಸಿಕ್ ಮುನ್ಸಿಪಲ್ ಕಾರ್ಪೊರೇಷನ್ (NMC) ಸಿಬ್ಬಂದಿ ನಗರದ ಕಥೆ ಗಲ್ಲಿ ಪ್ರದೇಶದಲ್ಲಿರುವ ಅನಧಿಕೃತ ಸತ್ಪೀರ್ ಬಾಬಾ ದರ್ಗಾವನ್ನು ಕೆಡವಿದರು.
ಹೈಕೋರ್ಟ್ ಆದೇಶದಂತೆ, ಮಂಗಳವಾರ ರಾತ್ರಿ 11.30 ರ ಸುಮಾರಿಗೆ, ಸತ್ಪೀರ್ ದರ್ಗಾ ಟ್ರಸ್ಟಿಗಳು ದರ್ಗಾವನ್ನು ಕೆಡವಿ ಹಾಕುವ ಪ್ರಕ್ರಿಯೆಯನ್ನು ಪ್ರಾರಂಭಿಸಿದರು. ದರ್ಗಾ ಕೆಡವುದನ್ನು ವಿರೋಧಿಸಲು ಗುಂಪೊಂದು ಜಮಾಯಿಸಿ ಪ್ರತಿಭಟನಾಕಾರರನ್ನು ಸಮಾಧಾನಪಡಿಸಲು ಹೋದ ಪೊಲೀಸರು ಮತ್ತು ಮುಸ್ಲಿಂ ನಾಯಕರ ಮೇಲೆ ಕಲ್ಲು ತೂರಾಟ ನಡೆಸಿತು ಎಂದು ನಾಶಿಕ್ ಪೊಲೀಸ್ ಆಯುಕ್ತ ಸಂದೀಪ್ ಕಾರ್ಣಿಕ್ ತಿಳಿಸಿದ್ದಾರೆ.
ದಾಳಿಯಲ್ಲಿ ಮೂರು ಪೊಲೀಸ್ ವಾಹನಗಳು ಹಾನಿಗೊಳಗಾದವು ಮತ್ತು 21 ಪೊಲೀಸ್ ಸಿಬ್ಬಂದಿ ಗಾಯಗೊಂಡರು. ಇಂದು ಬೆಳಗ್ಗೆ ದರ್ಗಾವನ್ನು ಕೆಡವಲಾಯಿತು. ಎಫ್‌ಐಆರ್ ದಾಖಲಿಸುವ ಮತ್ತು ಹಿಂಸಾಚಾರದಲ್ಲಿ ಭಾಗಿಯಾಗಿರುವವರನ್ನು ಬಂಧಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಹೇಳಿದರು.
Advertisement