ವಿಚ್ಛೇದನ ಪ್ರಕರಣ: ಒಟ್ಟಿಗೆ ಕುಳಿತು ಸಮಸ್ಯೆ ಬಗೆಹರಿಸಿಕೊಳ್ಳಿ; ಒಮರ್ ಅಬ್ದುಲ್ಲಾ, ಪತ್ನಿಗೆ ಸುಪ್ರೀಂ ಕೋರ್ಟ್ ಸೂಚನೆ

ವಿಚ್ಛೇದನಕ್ಕಾಗಿ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಒಟ್ಟಿಗೆ ಕುಳಿತು ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಸೂಚಿಸಿದೆ.
ಒಮರ್ ಅಬ್ದುಲ್ಲಾ
ಒಮರ್ ಅಬ್ದುಲ್ಲಾ
Updated on

ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮತ್ತು ಅವರಿಂದ ಬೇರೆಯಾದ ಪತ್ನಿ ಪಾಯಲ್ ಅಬ್ದುಲ್ಲಾ ಅವರಿಗೆ ತಮ್ಮ ವೈವಾಹಿಕ ಸಮಸ್ಯೆಗಳನ್ನು ಒಟ್ಟಿಗೆ ಕುಳಿತು ಪರಿಹರಿಸಲು ಯತ್ನಿಸುವಂತೆ ಸುಪ್ರೀಂ ಕೋರ್ಟ್ ಬುಧವಾರ ನಿರ್ದೇಶಿಸಿದೆ.

ವಿಚ್ಛೇದನಕ್ಕಾಗಿ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಒಟ್ಟಿಗೆ ಕುಳಿತು ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಸೂಚಿಸಿದೆ.

ನ್ಯಾಯಮೂರ್ತಿಗಳಾದ ಸುಧಾಂಶು ಧುಲಿಯಾ ಮತ್ತು ಕೆ. ವಿನೋದ್ ಚಂದ್ರನ್ ಅವರ ಪೀಠಕ್ಕೆ, ಈ ಪ್ರಕರಣದಲ್ಲಿ ಮಧ್ಯಸ್ಥಿಕೆ ಪ್ರಕ್ರಿಯೆಯು ವಿಫಲವಾಗಿದೆ ಎಂದು ತಿಳಿಸಲಾಯಿತು.

ಒಮರ್ ಅಬ್ದುಲ್ಲಾ
ಅಂಬೇಡ್ಕರ್ ಕುರಿತ ಹೇಳಿಕೆ: ಇಂಡಿಯಾ ಬಣ ಆಕ್ರೋಶದ ನಡುವೆ ಅಮಿತ್ ಶಾ ಭೇಟಿಯಾದ ಸಿಎಂ ಒಮರ್ ಅಬ್ದುಲ್ಲಾ!

"ಈ ಪ್ರಕರಣದಲ್ಲಿ ಮಧ್ಯಸ್ಥಿಕೆ ವಿಫಲವಾಗಿದ್ದರೂ, ಮತ್ತೊಂದು ಅವಕಾಶ ನೀಡುವ ಸಲುವಾಗಿ, ಕಕ್ಷಿದಾರರು ಒಟ್ಟಿಗೆ ಕುಳಿತು ತಮ್ಮ ವಿವಾದಗಳನ್ನು ಪರಿಹರಿಸಲು ಪ್ರಯತ್ನಿಸಬೇಕು. ಇದಕ್ಕೆ ಮೂರು ವಾರಗಳ ಕಾಲಾವಕಾಶ ನೀಡಲಾಗಿದೆ" ಎಂದು ಹೇಳಿ ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಮೇ 7ಕ್ಕೆ ಮುಂದೂಡಿದೆ.

15 ವರ್ಷಗಳಿಂದ ಪತ್ನಿಯಿಂದ ದೂರ ಇರುವ ಒಮರ್ ಅಬ್ದುಲ್ಲಾ ಅವರಿಗೆ ವಿಚ್ಛೇದನ ನೀಡಲು 2016 ರಲ್ಲಿ ಕೌಟುಂಬಿಕ ನ್ಯಾಯಾಲಯ ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಜಮ್ಮು ಮತ್ತು ಕಾಶ್ಮೀರ ಸಿಎಂ ಸಲ್ಲಿಸಿದ್ದ ಮೇಲ್ಮನವಿಯನ್ನು ಡಿಸೆಂಬರ್ 12, 2023 ರಂದು ದೆಹಲಿ ಹೈಕೋರ್ಟ್ ವಜಾಗೊಳಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com