ನ್ಯಾಷನಲ್ ಹೆರಾಲ್ಡ್ ಕೇಸ್: ಕೇಂದ್ರ ಸರ್ಕಾರ, ಜಾರಿ ನಿರ್ದೇಶನಾಲಯ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಪ್ರತಿಭಟನೆಯಲ್ಲಿ ಹಾಜರಿದ್ದ ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನಾಟೆ, ಕೇಂದ್ರ ಸರ್ಕಾರದ ವಿರುದ್ಧ ಟೀಕೆ ಮಾಡಿದರು. ಇದು ಗಾಂಧಿ ಕುಟುಂಬ ಮತ್ತು ಕಾಂಗ್ರೆಸ್ ನ್ನು ಗುರಿಯಾಗಿಸುವ ಪ್ರಯತ್ನ ಎಂದು ಕರೆದರು.
Congress workers and leaders shouting slogans during their protest against the Enforcement Directorate filing charges against former Congress president Sonia Gandhi and Leader of Opposition in Lok Sabha Rahul Gandhi at AICC in New Delhi.
ದೆಹಲಿಯ ಎಐಸಿಸಿ ಆವರಣದಲ್ಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯ ಕೇಸು ದಾಖಲಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ನಾಯಕರು ಘೋಷಣೆಗಳನ್ನು ಕೂಗಿದರು
Updated on

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪಕ್ಷದ ಹಿರಿಯ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಇಡಿ ಆರೋಪಪಟ್ಟಿ ಸಲ್ಲಿಸಿದ ಹಿನ್ನೆಲೆಯಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಇಂದು ಬುಧವಾರ ದೆಹಲಿಯ ಅಕ್ಬರ್ ರಸ್ತೆಯಲ್ಲಿರುವ ಎಐಸಿಸಿ ಕಚೇರಿಯ ಹೊರಗೆ ಪ್ರತಿಭಟನೆ ನಡೆಸಿದರು.

ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಏಪ್ರಿಲ್ 9 ರಂದು ಆರೋಪಪಟ್ಟಿ ಸಲ್ಲಿಸಿರುವುದಾಗಿ ಜಾರಿ ನಿರ್ದೇಶನಾಲಯ ಹೇಳಿದೆ. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಲ್ಲದೆ, ಆರೋಪಪಟ್ಟಿಯಲ್ಲಿ ಹಿರಿಯ ಕಾಂಗ್ರೆಸ್ ನಾಯಕರಾದ ಸ್ಯಾಮ್ ಪಿತ್ರೋಡಾ ಮತ್ತು ಸುಮನ್ ದುಬೆ ಅವರನ್ನೂ ಕೂಡ ಆರೋಪಿಗಳಾಗಿ ಹೆಸರಿಸಲಾಗಿದೆ.

ಪ್ರತಿಭಟನೆಯಲ್ಲಿ ಹಾಜರಿದ್ದ ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನಾಟೆ, ಕೇಂದ್ರ ಸರ್ಕಾರದ ವಿರುದ್ಧ ಟೀಕೆ ಮಾಡಿದರು. ಇದು ಗಾಂಧಿ ಕುಟುಂಬ ಮತ್ತು ಕಾಂಗ್ರೆಸ್ ನ್ನು ಗುರಿಯಾಗಿಸುವ ಪ್ರಯತ್ನ ಎಂದು ಕರೆದರು.

ಕಳೆದ 12 ವರ್ಷಗಳಲ್ಲಿ ಏನೂ ನಡೆದಿಲ್ಲ, ಇದು 12 ವರ್ಷಗಳ ಹಳೆಯ ಪ್ರಕರಣ. ಇಲ್ಲಿ ಒಂದೇ ಒಂದು ಪೈಸೆ ವಿನಿಮಯವಾಗದ ಹಣ ವರ್ಗಾವಣೆ ಪ್ರಕರಣವನ್ನು ದಾಖಲಿಸಿದ್ದಾರೆ. ವಾಸ್ತವವೆಂದರೆ ಸರ್ಕಾರ ಗಾಂಧಿ ಕುಟುಂಬ ಮತ್ತು ಕಾಂಗ್ರೆಸ್ ನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ. ಇದರ ವಿರುದ್ಧ ನಾವು ಹೋರಾಟ ನಡೆಸುತ್ತೇವೆ ಎಂದು ಶ್ರೀನಾಟೆ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಸೆಕ್ಷನ್ 3 ಮತ್ತು 4 ರ ಅಡಿಯಲ್ಲಿ ಆರೋಪಗಳನ್ನು ದಾಖಲಿಸಲಾಗಿದೆ, ಇದು ಅಕ್ರಮ ಹಣ ವರ್ಗಾವಣೆ ಮತ್ತು ಅಪರಾಧಕ್ಕೆ ಶಿಕ್ಷೆಯ ಬಗ್ಗೆ ವಿಚಾರಣೆ ನಡೆಸುತ್ತದೆ.

ನ್ಯಾಷನಲ್ ಹೆರಾಲ್ಡ್ ಮತ್ತು ಅದರ ಪ್ರಕಾಶಕ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (ಎಜೆಎಲ್) ಗೆ ಸಂಬಂಧಿಸಿದ 661 ಕೋಟಿ ರೂಪಾಯಿ ಮೌಲ್ಯದ ಸ್ಥಿರ ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳಲು ಜಾರಿ ನಿರ್ದೇಶನಾಲಯವು ಕ್ರಮಗಳನ್ನು ಪ್ರಾರಂಭಿಸಿದ ಕೇವಲ ಎರಡು ದಿನಗಳ ನಂತರ ಈ ಬೆಳವಣಿಗೆ ನಡೆದಿದೆ.

Congress workers and leaders shouting slogans during their protest against the Enforcement Directorate filing charges against former Congress president Sonia Gandhi and Leader of Opposition in Lok Sabha Rahul Gandhi at AICC in New Delhi.
ನ್ಯಾಷನಲ್ ಹೆರಾಲ್ಡ್ ಕೇಸ್: ಲೂಟಿ ಹೊಡೆಯಲು ಯಾರಿಗೂ ಪರವಾನಗಿ ನೀಡಲ್ಲ; ಕಾಂಗ್ರೆಸ್ ಸೇಡಿನ ರಾಜಕಾರಣ ಆರೋಪ ನಿರಾಕರಿಸಿದ BJP

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com