ವಕ್ಫ್ ತಿದ್ದುಪಡಿ ಕಾಯ್ದೆ 2025: ಸುಪ್ರೀಂ ಕೋರ್ಟ್ ನಲ್ಲಿ ಇಂದು ಅರ್ಜಿಗಳ ವಿಚಾರಣೆ

ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಕೆ ವಿ ವಿಶ್ವನಾಥನ್ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು ಇಲ್ಲಿಯವರೆಗೆ ಈ ವಿಷಯದ ಕುರಿತು 10 ಅರ್ಜಿಗಳನ್ನು ಪಟ್ಟಿ ಮಾಡಿದೆ.
Representational image
ಸಾಂದರ್ಭಿಕ ಚಿತ್ರ
Updated on

ನವದೆಹಲಿ: ವಕ್ಫ್ (ತಿದ್ದುಪಡಿ) ಕಾಯ್ದೆ, 2025 ರ ಸಾಂವಿಧಾನಿಕ ಸಿಂಧುತ್ವದ ವಿರುದ್ಧ ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಅವರು ಸಲ್ಲಿಸಿರುವ ಅರ್ಜಿ ಸೇರಿದಂತೆ ಹಲವಾರು ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಬುಧವಾರ ವಿಚಾರಣೆಗೆ ಕೈಗೆತ್ತಿಕೊಳ್ಳುವ ಸಾಧ್ಯತೆಯಿದೆ.

ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಕೆ ವಿ ವಿಶ್ವನಾಥನ್ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು ಇಲ್ಲಿಯವರೆಗೆ ಈ ವಿಷಯದ ಕುರಿತು 10 ಅರ್ಜಿಗಳನ್ನು ಪಟ್ಟಿ ಮಾಡಿದೆ.

ಓವೈಸಿ ಅವರ ಅರ್ಜಿಯ ಜೊತೆಗೆ, ಎಎಪಿ ನಾಯಕ ಅಮಾನತುಲ್ಲಾ ಖಾನ್, ನಾಗರಿಕ ಹಕ್ಕುಗಳ ರಕ್ಷಣಾ ಸಂಘ, ಅರ್ಷದ್ ಮದನಿ, ಸಮಸ್ತ ಕೇರಳ ಜಮಿಯತುಲ್ ಉಲೇಮಾ, ಅಂಜುಮ್ ಕದರಿ, ತೈಯಬ್ ಖಾನ್ ಸಲ್ಮಾನಿ, ಮೊಹಮ್ಮದ್ ಶಫಿ, ಮೊಹಮ್ಮದ್ ಫಜ್ಲುರ್ರಹೀಮ್ ಮತ್ತು ಆರ್‌ಜೆಡಿ ನಾಯಕ ಮನೋಜ್ ಕುಮಾರ್ ಝಾ ಅವರು ಸಲ್ಲಿಸಿರುವ ಅರ್ಜಿಗಳನ್ನು ವಿಚಾರಣೆಗೆ ಸುಪ್ರೀಂ ಕೋರ್ಟ್ ಪಟ್ಟಿ ಮಾಡಿದೆ.

ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ, ಸಂಭಾಲ್‌ನ ಸಮಾಜವಾದಿ ಪಕ್ಷದ ಸಂಸದ ಜಿಯಾ-ಉರ್-ರೆಹಮಾನ್ ಬಾರ್ಕ್ ಸಲ್ಲಿಸಿದ ಅರ್ಜಿಗಳು ಸೇರಿದಂತೆ ಹಲವಾರು ಹೊಸ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಕೆಯಾಗಿದೆ.

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್‌ಆರ್‌ಸಿಪಿ, ಭಾರತೀಯ ಕಮ್ಯುನಿಸ್ಟ್ ಪಕ್ಷ (ಸಿಪಿಐ), ತಮಿಳಗ ವೆಟ್ರಿ ಕಳಗಂ ಮುಖ್ಯಸ್ಥ ಮತ್ತು ನಟ-ರಾಜಕಾರಣಿ ವಿಜಯ್ ಕೂಡ ಈ ವಿಷಯದ ಬಗ್ಗೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಕಾನೂನಿನ ಹಲವಾರು ನಿಬಂಧನೆಗಳು ಮುಸ್ಲಿಮೇತರರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತವೆ ಎಂಬ ಕಾರಣಕ್ಕೆ ಅವುಗಳ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ವಕೀಲ ಹರಿಶಂಕರ್ ಜೈನ್ ಮತ್ತು ಮಣಿ ಮುಂಜಾಲ್ ಪ್ರತ್ಯೇಕ ಅರ್ಜಿ ಸಲ್ಲಿಸಿದ್ದಾರೆ.

Representational image
ತಿದ್ದುಪಡಿ ಮಾಡಿದ ವಕ್ಫ್ ಕಾಯ್ದೆ ಮುಸಲ್ಮಾನರ ವಿರುದ್ಧವಲ್ಲ, ಪೂರಕವಾಗಿದೆ: ಕೇಂದ್ರ ಸಚಿವ ಕಿರಣ್ ರಿಜಿಜು

ಕೇಂದ್ರ ಸರ್ಕಾರವು ಏಪ್ರಿಲ್ 8 ರಂದು ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿ ಈ ವಿಷಯದಲ್ಲಿ ಯಾವುದೇ ಆದೇಶವನ್ನು ಅಂಗೀಕರಿಸುವ ಮೊದಲು ವಿಚಾರಣೆಯನ್ನು ಕೋರಿತು. ಹೈಕೋರ್ಟ್‌ಗಳು ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿ ಅದನ್ನು ವಿಚಾರಣೆ ಮಾಡದೆ ಯಾವುದೇ ಆದೇಶಗಳನ್ನು ಹೊರಡಿಸದಂತೆ ನೋಡಿಕೊಳ್ಳುತ್ತದೆ.

ಕೇಂದ್ರವು ಇತ್ತೀಚೆಗೆ ವಕ್ಫ್ (ತಿದ್ದುಪಡಿ) ಕಾಯ್ದೆ, 2025 ಅಧಿಸೂಚನೆ ಹೊರಡಿಸಿದೆ. ಇದು ಎರಡೂ ಸದನಗಳಲ್ಲಿ ಬಿಸಿ ಚರ್ಚೆಗಳ ನಂತರ ಸಂಸತ್ತಿನಲ್ಲಿ ಅಂಗೀಕಾರವಾದ ನಂತರ ಏಪ್ರಿಲ್ 5 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಒಪ್ಪಿಗೆಯನ್ನು ಪಡೆಯಿತು.

ರಾಜ್ಯಸಭೆಯಲ್ಲಿ 128 ಸದಸ್ಯರು ಪರವಾಗಿ ಮತ್ತು 95 ಸದಸ್ಯರು ವಿರೋಧಿಸಿ ಮತ ಚಲಾಯಿಸುವ ಮೂಲಕ ಮಸೂದೆಯನ್ನು ಅಂಗೀಕರಿಸಲಾಯಿತು. ಲೋಕಸಭೆಯಲ್ಲಿ 288 ಸದಸ್ಯರು ಬೆಂಬಲಿಸಿ 232 ಸದಸ್ಯರು ವಿರುದ್ಧವಾಗಿ ಮತ ಚಲಾಯಿಸಿದರು.

ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (AIMPLB), ಜಮಿಯತ್ ಉಲಮಾ-ಇ-ಹಿಂದ್, ದ್ರಾವಿಡ ಮುನ್ನೇತ್ರ ಕಳಗಂ (DMK), ಕಾಂಗ್ರೆಸ್ ಸಂಸದರಾದ ಇಮ್ರಾನ್ ಪ್ರತಾಪ್‌ಗಢಿ ಮತ್ತು ಮೊಹಮ್ಮದ್ ಜಾವೇದ್ ಇತರ ಪ್ರಮುಖ ಅರ್ಜಿದಾರರಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com