ಮುಂದಿನ ವಾರ ಪ್ರಧಾನಿ ಮೋದಿ ಸೌದಿ ಅರೇಬಿಯಾಗೆ ಭೇಟಿ

ಮೋದಿ ಮತ್ತು ಸೌದಿ ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಅಲ್ ಸೌದ್ ನಡುವಿನ ದ್ವಿಪಕ್ಷೀಯ ಮಾತುಕತೆಯ ನಂತರ ಉಭಯ ನಾಯಕರು ಹಲವು ಒಪ್ಪಂದಗಳಿಗೆ ಸಹಿ ಹಾಕಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ
Updated on: 

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮಂಗಳವಾರದಿಂದ ಎರಡು ದಿನಗಳ ಸೌದಿ ಅರೇಬಿಯಾ ಭೇಟಿ ನೀಡಲಿದ್ದು, ಇಂಧನ, ವ್ಯಾಪಾರ ಮತ್ತು ರಕ್ಷಣೆ ಸೇರಿದಂತೆ ಹಲವು ಪ್ರಮುಖ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರವನ್ನು ಮತ್ತಷ್ಟು ವಿಸ್ತರಿಸುವತ್ತ ಗಮನ ಹರಿಸಲಿದ್ದಾರೆ.

ಪ್ರಧಾನಿ ಮೋದಿ ಏಪ್ರಿಲ್ 22 ಮತ್ತು 23ರಂದು ಸೌದಿ ಅರೇಬಿಯಾಕ್ಕೆ ಅಧಿಕೃತ ಭೇಟಿ ನೀಡುತ್ತಿದ್ದು, ಮೋದಿ ಸೌದಿ ಅರೇಬಿಯಾಕ್ಕೆ ನೀಡುವ ಮೂರನೇ ಭೇಟಿ ಇದಾಗಿದೆ.

ಮೋದಿ ಮತ್ತು ಸೌದಿ ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಅಲ್ ಸೌದ್ ನಡುವಿನ ದ್ವಿಪಕ್ಷೀಯ ಮಾತುಕತೆಯ ನಂತರ ಉಭಯ ನಾಯಕರು ಹಲವು ಒಪ್ಪಂದಗಳಿಗೆ ಸಹಿ ಹಾಕಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ
'ಅಮೆರಿಕ ಜೊತೆ ನಮ್ಮ ಸಹಭಾಗಿತ್ವ ಮುನ್ನಡೆಸಲು ಭಾರತ ಬದ್ಧ': ಎಲಾನ್ ಮಸ್ಕ್ ಜೊತೆ ಪ್ರಧಾನಿ ಮೋದಿ ಸಂಭಾಷಣೆ

ಈ ಭೇಟಿಯು ಉಭಯ ದೇಶಗಳ ನಡುವೆ ಬಲವಾದ ಕಾರ್ಯತಂತ್ರದ ಪಾಲುದಾರಿಕೆಯನ್ನು ನಿರ್ಮಿಸಲು ಅವಕಾಶವನ್ನು ಒದಗಿಸುತ್ತದೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com