ಅಮೆರಿಕದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ
ಅಮೆರಿಕದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ

ಮಹಾರಾಷ್ಟ್ರ ಚುನಾವಣೆಯಲ್ಲಿ ಮತದಾನ ಪ್ರಮಾಣ: EC ಮೇಲೆ ರಾಹುಲ್ ಗಾಂಧಿ 'ಅನುಮಾನ'; 'ದೇಶದ್ರೋಹಿ' ಎಂದು ಕರೆದ ಬಿಜೆಪಿ

ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರ, 'ನೀವು ಚುನಾವಣಾ ಆಯೋಗದ ಮೇಲೆ ಜಾರಿ ನಿರ್ದೇಶನಾಲಯದ (ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕ್ರಮ) ಬಗ್ಗೆ ಕೋಪವನ್ನು ಹೊರಹಾಕುತ್ತಿದ್ದೀರಿ. ಹಾಗೆ ಮಾಡುವುದರಿಂದ ಏನೂ ಆಗುವುದಿಲ್ಲ' ಎಂದರು.
Published on

ನವದೆಹಲಿ: ಭಾರತದ ಚುನಾವಣಾ ಆಯೋಗವು 'ರಾಜಿ ಮಾಡಿಕೊಂಡಿದೆ' ಮತ್ತು 'ವ್ಯವಸ್ಥೆಯಲ್ಲಿ ಏನೋ ತಪ್ಪಾಗಿದೆ' ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದು, ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಮತದಾನದ ಪ್ರಮಾಣ ಕುರಿತು ಭಾರತೀಯ ಚುನಾವಣಾ ಆಯೋಗ (ECI) ಸ್ಪಷ್ಟ ಚಿತ್ರಣವನ್ನು ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಭಾನುವಾರ ಅಮೆರಿಕದ ಬೋಸ್ಟನ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ರಾಹುಲ್ ಗಾಂಧಿ, 'ಮಹಾರಾಷ್ಟ್ರ ಚುನಾವಣೆಯಲ್ಲಿ ಸಂಜೆ 5.30 ರಿಂದ 7.30ರ ನಡುವೆ ಒಟ್ಟು 65 ಲಕ್ಷ ಮತಗಳು ಎಣಿಕೆಗೆ ಸೇರ್ಪಡೆಯಾಗಿವೆ. ಚುನಾವಣಾ ಆಯೋಗವು ಸಂಜೆ ನಮಗೆ ಮತ ಪ್ರಮಾಣದ ಕುರಿತು ಅಂಕಿ ಅಂಶವನ್ನು ನೀಡಿತ್ತು. ಆದರೆ, ಕೇವಲ ಎರಡು ಗಂಟೆಗಳ ಅವಧಿಯಲ್ಲಿ ಹೆಚ್ಚುವರಿಯಾಗಿ 65 ಲಕ್ಷ ಮತದಾರರು ಮತ ಚಲಾಯಿಸಿದ್ದಾರೆ. ಇದು ಅಸಾಧ್ಯದ ಸಂಗತಿಯಾಗಿದೆ' ಎಂದು ಅವರು ಹೇಳಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ವ್ಯಕ್ತಿಯೊಬ್ಬ ಮತ ಚಲಾಯಿಸಲು ಕನಿಷ್ಠ ಮೂರು ನಿಮಿಷವಾದರೂ ಬೇಕು. 65 ಲಕ್ಷ ಮತಗಳು ಹೆಚ್ಚಾಗಿವೆ ಎಂದರೆ ಬೆಳಗಿನ ಜಾವ 2 ಗಂಟೆಯವರೆಗೂ ಮತದಾರರ ಸಾಲು ಇರಬೇಕಿತ್ತು. ಹೀಗಾಗಿ, ಎರಡು ಗಂಟೆಗಳ ಅವಧಿಯಲ್ಲಿ ಇಷ್ಟೊಂದು ಮತದಾರರು ಏರಿಕೆಯಾಗಲು ಸಾಧ್ಯವಿಲ್ಲ. ವಿಡಿಯೋ ಚಿತ್ರೀಕರಣ ಮಾಡಿರುವುದನ್ನು ಕೇಳಿದರೆ, ಅವರು ನೀಡಲು ನಿರಾಕರಿಸಿದರು. ಇಷ್ಟೇ ಅಲ್ಲದೆ ಕಾನೂನನ್ನು ಸಹ ಬದಲಾಯಿಸಿದ್ದರು. ಆದ್ದರಿಂದ ಈಗ ನಮಗೆ ವಿಡಿಯೋವನ್ನು ಕೇಳಲು ಅವಕಾಶವಿಲ್ಲ ಎಂದು ಆರೋಪಿಸಿದ್ದಾರೆ.

ಈಮಧ್ಯೆ, ಚುನಾವಣಾ ಆಯೋಗದ ವಿರುದ್ಧ ರಾಹುಲ್ ಗಾಂಧಿ ಮಾಡಿರುವ ಆರೋಪಗಳಿಗೆ ಸೋಮವಾರ ಪ್ರತಿಕ್ರಿಯಿಸಿರುವ ಬಿಜೆಪಿ ಅವರನ್ನು 'ದೇಶದ್ರೋಹಿ' ಎಂದು ಕರೆದಿದೆ ಮತ್ತು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ತಮ್ಮ ವಿರುದ್ಧ ಕ್ರಮ ಕೈಗೊಂಡಿರುವುದಕ್ಕೆ ಚುನಾವಣಾ ಆಯೋಗದ ಮೇಲೆ ತಮ್ಮ ಹತಾಶೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ಆರೋಪಿಸಿದೆ.

ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರ, 'ನೀವು ಚುನಾವಣಾ ಆಯೋಗದ ಮೇಲೆ ಜಾರಿ ನಿರ್ದೇಶನಾಲಯದ (ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕ್ರಮ) ಬಗ್ಗೆ ಕೋಪವನ್ನು ಹೊರಹಾಕುತ್ತಿದ್ದೀರಿ. ಹಾಗೆ ಮಾಡುವುದರಿಂದ ಏನೂ ಆಗುವುದಿಲ್ಲ' ಎಂದರು.

'ತನಿಖಾ ಸಂಸ್ಥೆಗಳು ಸತ್ಯಗಳ ಆಧಾರದ ಮೇಲೆ ಕೆಲಸ ಮಾಡುವುದರಿಂದ ಮತ್ತು ನ್ಯಾಷನಲ್ ಹೆರಾಲ್ಡ್ ವಿಷಯವು ಮುಕ್ತ ಮತ್ತು ಮುಚ್ಚಿದ ಪ್ರಕರಣವಾಗಿರುವುದರಿಂದ ಇಡಿ ನಿಮ್ಮನ್ನು ಬಿಡುವುದಿಲ್ಲ. ನೀವು ಮತ್ತು ನಿಮ್ಮ ತಾಯಿ ಅಪರಾಧದಲ್ಲಿ ಸಿಕ್ಕಿಹಾಕಿಕೊಳ್ಳುವಿರಿ ಮತ್ತು ನಿಮ್ಮನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗುತ್ತದೆ' ಎಂದು ಅವರು ಇಲ್ಲಿನ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಮತ್ತು ಅವರ ತಾಯಿ ಸೋನಿಯಾ ಗಾಂಧಿ ಇಬ್ಬರೂ ಜೈಲಿಗೆ ಹೋಗುತ್ತಾರೆ ಎಂದು ಅವರು ಪ್ರತಿಪಾದಿಸಿದರು.

'ವಿದೇಶಿ ನೆಲದಲ್ಲಿ ಭಾರತೀಯ ಸಂಸ್ಥೆಗಳು ಮತ್ತು ಭಾರತೀಯ ಪ್ರಜಾಪ್ರಭುತ್ವವನ್ನು ಅವಮಾನಿಸುವುದರಿಂದ ಮತ್ತು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ನೀವು ಮತ್ತು ನಿಮ್ಮ ತಾಯಿ ದೇಶದ ಕೋಟ್ಯಂತರ ರೂಪಾಯಿಗಳನ್ನು ದುರುಪಯೋಗಪಡಿಸಿಕೊಂಡಿರುವುದ ನೀವು ದೇಶದ್ರೋಹಿಯಾಗಿದ್ದೀರಿ. ನೀವು ಮತ್ತು ನಿಮ್ಮ ತಾಯಿ ಇದರಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ' ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Google Preferred source

Advertisement

X
Kannada Prabha
www.kannadaprabha.com