ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ: ಪ್ರವಾಸಿಗರ ಮೇಲೆ ಗುಂಡಿನ ದಾಳಿ; ಓರ್ವ ಸಾವು, ದಾಳಿಯ ಹೊಣೆ ಹೊತ್ತ LeT-TRF

ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕ್ ಮೂಲದ ಭಯೋತ್ಪಾದಕರು ದುಷ್ಕೃತ್ಯ ಎಸಗಿದ್ದಾರೆ. ಪ್ರವಾಸಿಗರ ಮೇಲೆ ಗುಂಡಿನ ದಾಳಿಯ ಮೂಲಕ ಕುಕೃತ್ಯ ಎಸಗಿದ್ದಾರೆ. ಮಿನಿ ಸ್ವಿಟ್ಜರ್ಲ್ಯಾಂಡ್ ಎಂದೇ ಹೆಸರಾಗಿರುವ ಪಹಲ್ಗಾಮ್ ನ ಬೈಸರನ್ ಕಣಿವೆಯಲ್ಲಿ ಟ್ರಕಿಂಗ್ ಗೆ ಹೋಗಿದ್ದ ಪ್ರವಾಸಿಗರ ಮೇಲೆ ಉಗ್ರರು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ.
ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ: ಪ್ರವಾಸಿಗರ ಮೇಲೆ ಗುಂಡಿನ ದಾಳಿ; ಓರ್ವ ಸಾವು, ದಾಳಿಯ ಹೊಣೆ ಹೊತ್ತ LeT-TRF
Updated on

ಪಹಲ್ಗಾಮ್(ಜಮ್ಮು ಮತ್ತು ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕ್ ಮೂಲದ ಭಯೋತ್ಪಾದಕರು ದುಷ್ಕೃತ್ಯ ಎಸಗಿದ್ದಾರೆ. ಪ್ರವಾಸಿಗರ ಮೇಲೆ ಗುಂಡಿನ ದಾಳಿಯ ಮೂಲಕ ಕುಕೃತ್ಯ ಎಸಗಿದ್ದಾರೆ. ಮಿನಿ ಸ್ವಿಟ್ಜರ್ಲ್ಯಾಂಡ್ ಎಂದೇ ಹೆಸರಾಗಿರುವ ಪಹಲ್ಗಾಮ್ ನ ಬೈಸರನ್ ಕಣಿವೆಯಲ್ಲಿ ಟ್ರಕಿಂಗ್ ಗೆ ಹೋಗಿದ್ದ ಪ್ರವಾಸಿಗರ ಮೇಲೆ ಉಗ್ರರು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ.

ಗುಂಡಿನ ದಾಳಿಯಲ್ಲಿ ಓರ್ವ ಪ್ರವಾಸಿಗ ಮೃತಪಟ್ಟಿರುವುದಾಗಿ ವರದಿಯಾಗಿದೆ. ಇನ್ನು ಏಳು ಮಂದಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳಾಂತರಿಸಲು ಆ್ಯಂಬುಲೆನ್ಸ್ ಗಳನ್ನು ರವಾನಿಸಲಾಗಿದೆ. ಉಗ್ರರಿಂದ ದಾಳಿಯಾಗುತ್ತಿದ್ದಂತೆ ಭಾರತೀಯ ಸೇನೆ ಪ್ರದೇಶವನ್ನು ಸುತ್ತುವರೆದಿದ್ದು ಕಾರ್ಯಾಚರಣೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com