ಪ್ರವಾಸಿಗರ ಮೇಲೆ ಉಗ್ರರ ಕ್ರೌರ್ಯ: ಯಾವ ಧರ್ಮ ಅಂತ ಕೇಳಿ ಉಗ್ರರಿಂದ ಗುಂಡಿನ ದಾಳಿ: ಕನ್ನಡಿಗ ಬಲಿ!

ಗುಂಡಿನ ದಾಳಿಯಲ್ಲಿ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದ ಮಂಜುನಾಥ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಆದರೆ ಗುಂಡಿನ ದಾಳಿಯಲ್ಲಿ ಮಂಜುನಾಥ್ ಅವರ ಪತ್ನಿ ಪಲ್ಲವಿ ಮತ್ತು ಮಗ ಸುರಕ್ಷಿತವಾಗಿದ್ದಾರೆ.
ಮಂಜುನಾಥ್, ಪತ್ನಿ ಪಲ್ಲವಿ ಮತ್ತು ಮಗ
ಮಂಜುನಾಥ್, ಪತ್ನಿ ಪಲ್ಲವಿ ಮತ್ತು ಮಗ
Updated on

ಪಹಲ್ಗಾಮ್(ಜಮ್ಮು ಮತ್ತು ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕ್ ಮೂಲದ ಭಯೋತ್ಪಾದಕರು ದುಷ್ಕೃತ್ಯ ಎಸಗಿದ್ದಾರೆ. ಯಾವ ಧರ್ಮ ಅಂತ ಕೇಳಿ ಹಿಂದೂ ಪ್ರವಾಸಿಗರ ಮೇಲೆ ಗುಂಡಿನ ದಾಳಿಯ ಮೂಲಕ ಕುಕೃತ್ಯ ಎಸಗಿದ್ದಾರೆ. ಮಿನಿ ಸ್ವಿಟ್ಜರ್ಲ್ಯಾಂಡ್ ಎಂದೇ ಹೆಸರಾಗಿರುವ ಪಹಲ್ಗಾಮ್ ನ ಬೈಸರನ್ ಕಣಿವೆಯಲ್ಲಿ ಟ್ರಕಿಂಗ್ ಗೆ ಹೋಗಿದ್ದ ಪ್ರವಾಸಿಗರ ಮೇಲೆ ಉಗ್ರರು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ.

ಗುಂಡಿನ ದಾಳಿಯಲ್ಲಿ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದ ಮಂಜುನಾಥ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಆದರೆ ಗುಂಡಿನ ದಾಳಿಯಲ್ಲಿ ಮಂಜುನಾಥ್ ಅವರ ಪತ್ನಿ ಪಲ್ಲವಿ ಮತ್ತು ಮಗ ಸುರಕ್ಷಿತವಾಗಿದ್ದಾರೆ. ಇನ್ನು ಏಳು ಮಂದಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳಾಂತರಿಸಲು ಆ್ಯಂಬುಲೆನ್ಸ್ ಗಳನ್ನು ರವಾನಿಸಲಾಗಿದೆ. ಉಗ್ರರಿಂದ ದಾಳಿಯಾಗುತ್ತಿದ್ದಂತೆ ಭಾರತೀಯ ಸೇನೆ ಪ್ರದೇಶವನ್ನು ಸುತ್ತುವರೆದಿದ್ದು ಕಾರ್ಯಾಚರಣೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com