ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ ಆಘಾತಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

ಮುಗ್ಧ ನಾಗರಿಕರನ್ನು ಗುರಿಯಾಗಿಸಿಕೊಂಡು ನಡೆಸಿದ ಈ ಕೃತ್ಯವನ್ನು ಕ್ಷಮಿಸಲಾಗದು. ಇದು ನಿಸ್ಸಂದೇಹವಾಗಿ ಖಂಡಿಸಬೇಕಾದ ಹೇಯ ಮತ್ತು ಅಮಾನವೀಯ ಕೃತ್ಯ.
President Droupadi Murmu
ರಾಷ್ಟ್ರಪತಿ ದ್ರೌಪದಿ ಮುರ್ಮು
Updated on: 

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿ ಅತ್ಯಂತ ಆಘಾತಕಾರಿ ಮತ್ತು ನೋವಿನಿಂದ ಕೂಡಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಮಂಗಳವಾರ ಹೇಳಿದ್ದಾರೆ.

ಮುಗ್ಧ ನಾಗರಿಕರನ್ನು ಗುರಿಯಾಗಿಸಿಕೊಂಡು ನಡೆಸಿದ ಈ ಕೃತ್ಯವನ್ನು ಕ್ಷಮಿಸಲಾಗದು. ಇದು ನಿಸ್ಸಂದೇಹವಾಗಿ ಖಂಡಿಸಬೇಕಾದ ಹೇಯ ಮತ್ತು ಅಮಾನವೀಯ ಕೃತ್ಯವಾಗಿದೆ ಎಂದು ರಾಷ್ಟ್ರಪತಿಗಳು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಹೃತ್ಪೂರ್ವಕ ಸಂತಾಪ ಸೂಚಿಸಿದ್ದು, ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.

President Droupadi Murmu
ಕಾಶ್ಮೀರಕ್ಕೆ ಅಮಿತ್ ಶಾ ದೌಡು; ಉಗ್ರರನ್ನು ಬೇಟೆಯಾಡಲು ಪ್ರತಿಜ್ಞೆ

"ಮುಗ್ಧ ನಾಗರಿಕರ ಮೇಲೆ, ಈ ಸಂದರ್ಭದಲ್ಲಿ ಪ್ರವಾಸಿಗರ ಮೇಲೆ ದಾಳಿ ಮಾಡುವುದು ಸಂಪೂರ್ಣವಾಗಿ ಭಯಾನಕ ಮತ್ತು ಕ್ಷಮಿಸಲಾಗದು. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು ಮತ್ತು ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ" ಎಂದು ಮುರ್ಮು ಅವರು ಹೇಳಿದ್ದಾರೆ.

ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಬೈಸರನ್ ಕಣಿವೆಯಿಂದ ಇಳಿದು ಬಂದ ಭಯೋತ್ಪಾದಕರು, ಪ್ರವಾಸಿಗರ ಮೇಲೆ ಗುಂಡು ಹಾರಿಸಿದ್ದಾರೆ. ದಾಳಿಯಲ್ಲಿ 20ಕ್ಕೂ ಹೆಚ್ಚು ಜನ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com