Casual Images
ಸಾಂದರ್ಭಿಕ ಚಿತ್ರ

ಗುಜರಾತ್: ತರಬೇತಿ ವಿಮಾನ ಪತನ; ಪೈಲಟ್ ಸಾವು

ಘಟನೆಯಲ್ಲಿ ಟ್ರೈನಿ ಪೈಲಟ್ ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ಅಮ್ರೇಲಿ ಪೊಲೀಸ್ ವರಿಷ್ಠಾಧಿಕಾರಿ ಸಂಜಯ್ ಖಾರತ್ ತಿಳಿಸಿದ್ದಾರೆ. ಅಪಘಾತ ಸಂಭವಿಸಿದಾಗ ಪೈಲಟ್ ಒಬ್ಬರೇ ವಿಮಾನದಲ್ಲಿದ್ದರು ಎನ್ನಲಾಗಿದೆ.
Published on

ಅಮ್ರೇಲಿ: ಖಾಸಗಿ ವಿಮಾನಯಾನ ಅಕಾಡೆಮಿಗೆ ಸೇರಿದ ತರಬೇತಿ ವಿಮಾನವೊಂದು ವಸತಿ ಪ್ರದೇಶದಲ್ಲಿ ಪತನಗೊಂಡು ಬೆಂಕಿ ಹೊತ್ತಿಕೊಂಡ ಪರಿಣಾಮ ಓರ್ವ ಟ್ರೈನಿ ಪೈಲಟ್ ಸಾವನ್ನಪ್ಪಿರುವ ಘಟನೆ ಗುಜರಾತ್ ನ ಅಮ್ರೇಲಿಯಲ್ಲಿ ನಡೆದಿದೆ

ಮಂಗಳವಾರ ಮಧ್ಯಾಹ್ನ 12:30 ರ ಸುಮಾರಿಗೆ ಅಮ್ರೇಲಿ ಪಟ್ಟಣದ ಗಿರಿಯಾ ರಸ್ತೆಯ ವಸತಿ ಪ್ರದೇಶದಲ್ಲಿನ ಮರವೊಂದರ ಮೇಲೆ ಬಿದ್ದ ವಿಮಾನ ತದನಂತರ ನೆಲಕ್ಕೆ ಬಿದ್ದು ಪತನಗೊಡಿದೆ. ಇದಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

ಘಟನೆಯಲ್ಲಿ ಟ್ರೈನಿ ಪೈಲಟ್ ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ಅಮ್ರೇಲಿ ಪೊಲೀಸ್ ವರಿಷ್ಠಾಧಿಕಾರಿ ಸಂಜಯ್ ಖಾರತ್ ತಿಳಿಸಿದ್ದಾರೆ. ಅಪಘಾತ ಸಂಭವಿಸಿದಾಗ ಪೈಲಟ್ ಒಬ್ಬರೇ ವಿಮಾನದಲ್ಲಿದ್ದರು ಎನ್ನಲಾಗಿದೆ.

ವಿಮಾನ ಅಮ್ರೇಲಿ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆಗಿತ್ತು. ಶಾಸ್ತ್ರಿನಗರದ ಬಳಿ ಬಳಿ ಪತನಗೊಂಡ ನಂತರ ಅದಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಧಗಧಗನೆ ಹೊತ್ತಿ ಉರಿದಿದೆ ಎಂದು ಕಾರತ್ ಮಾಹಿತಿ ನೀಡಿದ್ದಾರೆ.

ವಿಮಾನ ನಿಲ್ದಾಣದಿಂದ ಕಾರ್ಯನಿರ್ವಹಿಸುವ ಏವಿಯೇಷನ್ ​​​​ಅಕಾಡೆಮಿಯ ತರಬೇತಿ ವಿಮಾನ ವಸತಿ ಪ್ರದೇಶಕ್ಕೆ ಅಪ್ಪಳಿಸಿದೆ.

Casual Images
ಹರಿಯಾಣ: ವಾಯುಪಡೆಯ ಜಾಗ್ವಾರ್ ಯುದ್ಧ ವಿಮಾನ ಪತನ, ಪೈಲಟ್ ಪಾರು! ವಿಡಿಯೋ

ಪರಿಣಾಮ ಟ್ರೈನಿ ಪೈಲಟ್ ಅಪಘಾತದಲ್ಲಿ ಸಾವನ್ನಪ್ಪಿದ್ದು, ವಿಮಾನ ಬೆಂಕಿಯಲ್ಲಿ ಸುಟ್ಟು ಕರಕಲಾಗಿದೆ. ಅಪಘಾತದಲ್ಲಿ ಬೇರೆ ಯಾರಿಗೂ ಗಾಯವಾಗಿಲ್ಲ ಎಂದು ಖರತ್ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com