ಒಮರ್ ಅಬ್ದುಲ್ಲಾ
ಒಮರ್ ಅಬ್ದುಲ್ಲಾ

ಪೋನಿ ಮ್ಯಾನ್ ದಾಳಿ ತಡೆಯಲು ಯತ್ನಿಸಿದ್ದರೇ? ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದ ಸಿಎಂ ಒಮರ್ ಹೇಳಿದ್ದೇನು?

ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಹಪತ್ನಾರ್‌ನಲ್ಲಿ ಮೃತ ಸೈಯದ್ ಆದಿಲ್ ಹುಸೇನ್ ಶಾ ಅವರ ಕುಟುಂಬ ಸದಸ್ಯರೊಂದಿಗೆ ಸಿಎಂ ಒಮರ್ ಮಾತನಾಡಿ, ಸಾಂತ್ವನ ಹೇಳಿದರು.
Published on

ಶ್ರೀನಗರ: ಪಹಲ್ಗಾಮ್‌ನಲ್ಲಿ ಮಂಗಳವಾರ ನಡೆದ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ ಪೋನಿ ರೈಡ್ ಆಪರೇಟರ್‌ನ ಅಂತ್ಯಕ್ರಿಯೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಬುಧವಾರ ಭಾಗವಹಿಸಿದ್ದರು.

ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಹಪತ್ನಾರ್‌ನಲ್ಲಿ ಮೃತ ಸೈಯದ್ ಆದಿಲ್ ಹುಸೇನ್ ಶಾ ಅವರ ಕುಟುಂಬ ಸದಸ್ಯರೊಂದಿಗೆ ಸಿಎಂ ಒಮರ್ ಮಾತನಾಡಿ, ಸಾಂತ್ವನ ಹೇಳಿದರು ಮತ್ತು ಅವರಿಗೆ ಎಲ್ಲಾ ರೀತಿಯ ಬೆಂಬಲ ನೀಡುವ ಭರವಸೆ ನೀಡಿದರು.

"ಬಹುಶಃ ಸೈಯದ್ ಅವರು ಉಗ್ರರನ್ನು ತಡೆಯಲು ಪ್ರಯತ್ನಿಸಿರಬಹುದು ಮತ್ತು ಭಯೋತ್ಪಾದಕನ ಬಂದೂಕನ್ನು ಕಸಿದುಕೊಳ್ಳಲು ಪ್ರಯತ್ನಿಸಿರಬಹುದು. ಅದಕ್ಕಾಗಿಯೇ ಅವರನ್ನು ಹತ್ಯೆ ಮಾಡಲಾಗಿದೆ" ಎಂದು ಒಮರ್ ಅಬ್ದುಲ್ಲಾ ಅವರು ವರದಿಗಾರರಿಗೆ ತಿಳಿಸಿದ್ದಾರೆ.

ಒಮರ್ ಅಬ್ದುಲ್ಲಾ
Pahalgam terror attack: ಕುಟುಂಬಕ್ಕೆ ಏಕೈಕ ಆಧಾರವಾಗಿದ್ದ ಮಗನನ್ನು ಕಳೆದುಕೊಂಡು ದಿಕ್ಕೆಟ್ಟ ಮುಸ್ಲಿಂ ಕುಟುಂಬ!

"ನಾವು ಅವರ ಕುಟುಂಬವನ್ನು ನೋಡಿಕೊಳ್ಳಬೇಕು ಮತ್ತು ಅವರಿಗೆ ಸಹಾಯ ಮಾಡಬೇಕು. ಈ ಸಮಯದಲ್ಲಿ ಸರ್ಕಾರ ಅವರೊಂದಿಗೆ ನಿಂತಿದೆ ಮತ್ತು ನಾವು ಅವರಿಗೆ ನಮ್ಮಿಂದ ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ ಎಂದು ಅವರಿಗೆ ಭರವಸೆ ನೀಡಲು ಇಲ್ಲಿಗೆ ಬಂದಿದ್ದೇನೆ" ಎಂದು ಮುಖ್ಯಮಂತ್ರಿ ಹೇಳಿದರು.

ಪಹಲ್ಗಾಮ್ ನ ಬೈಸರನ್ ಹುಲ್ಲುಗಾವಲಿನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಸಾವನ್ನಪ್ಪಿದ ಏಕೈಕ ಸ್ಥಳೀಯ ವ್ಯಕ್ತಿ ಸೈಯದ್ ಆದಿಲ್ ಆಗಿದ್ದು, ಈ ದಾಳಿಯಲ್ಲಿ ಒಟ್ಟು 26 ಪ್ರವಾಸಿಗರನ್ನು ಹತ್ಯೆ ಮಾಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Google Preferred source

Advertisement

X
Kannada Prabha
www.kannadaprabha.com