ಪಹಲ್ಗಾಮ್ ಉಗ್ರರ ದಾಳಿ: ಸೌದಿ ಪ್ರವಾಸ ಮೊಟಕುಗೊಳಿಸಿ ಭಾರತಕ್ಕೆ ಮರಳಿದ ಮೋದಿ; PM ನೇತೃತ್ವದಲ್ಲಿ ತುರ್ತು ಭದ್ರತಾ ಸಮಿತಿ ಸಭೆ

ನಿಗದಿತ ವೇಳಾಪಟ್ಟಿಯಂತೆ ಮೋದಿ ಬುಧವಾರ ರಾತ್ರಿ ನವದೆಹಲಿಗೆ ಮರಳಬೇಕಿತ್ತು. ಆದರೆ, ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ ಹಿನ್ನೆಲೆ ಅವರು ಮುಂಚಿತವಾಗಿ ದೇಶಕ್ಕೆ ವಾಪಸ್ ಆಗಿದ್ದಾರೆ.
PM Modi holds urgent meeting with NSA
ಪ್ರಧಾನಿ ಮೋದಿಯಿಂದ ಭದ್ರತಾ ಸಮಿತಿ ಸಭೆ
Updated on

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಎರಡು ದಿನಗಳ ಸೌದಿ ಅರೇಬಿಯಾ ಪ್ರವಾಸವನ್ನು ಮೊಟಕುಗೊಳಿಸಿ ಮಂಗಳವಾರ ರಾತ್ರಿ ಭಾರತಕ್ಕೆ ವಾಪಸ್ ಆಗಿದ್ದಾರೆ.

ನಿಗದಿತ ವೇಳಾಪಟ್ಟಿಯಂತೆ ಮೋದಿ ಬುಧವಾರ ರಾತ್ರಿ ನವದೆಹಲಿಗೆ ಮರಳಬೇಕಿತ್ತು. ಆದರೆ, ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ ಹಿನ್ನೆಲೆ ಅವರು ಮುಂಚಿತವಾಗಿ ದೇಶಕ್ಕೆ ವಾಪಸ್ ಆಗಿದ್ದಾರೆ. ಮೋದಿ, ತಮಗಾಗಿ ಏರ್ಪಡಿಸಿದ್ದ ಅಧಿಕೃತ ಔತಣಕೂಟವನ್ನು ಬಿಟ್ಟು ತಮ್ಮ ಪ್ರವಾಸ ಮೊಟಕುಗೊಳಿಸಿ ಮಂಗಳವಾರ ರಾತ್ರಿ ದೇಶಕ್ಕೆ ಮರಳಿದ್ದಾರೆ.

ಇನ್ನು ಪ್ರಧಾನಿ ಮೋದಿ ಅವರ ತ್ವರಿತ ಮರಳುವಿಕೆ ಕುರಿತು ವಿದೇಶಾಂಗ ಸಚಿವ ಎಸ್. ಜೈಶಂಕರ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು, ರಾಯಲ್ ಪ್ಯಾಲೇಸ್‌ಗೆ ಭೇಟಿ ನೀಡಿ ಸೌದಿ ನಾಯಕರಿಗೆ ಮಾಹಿತಿ ನೀಡಿದ್ದಾರೆ. ಸೌದಿ ನಾಯಕರೂ ಕೂಡ ಪ್ರವಾಸಿಗರ ಮೇಲಿನ ಭಯೋತ್ಪಾದಕರ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ.

ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಭಾರತಕ್ಕೆ ಮರಳಿದ್ದು, ಈ ಬಗ್ಗೆ ಸೌದಿ ಆಡಳಿತಕ್ಕೆ ಮಾಹಿತಿ ನೀಡಲಾಗಿದೆ. ಸೌದಿ ರಾಜಕುಮಾರ ಭಯೋತ್ಪಾದಕ ದಾಳಿಯನ್ನು ಖಂಡಿಸಿದ್ದು, ಭಾರತಕ್ಕೆ ಯಾವುದೇ ಸಹಾಯ ಮಾಡಲು ಸಿದ್ಧ ಎಂದು ಭರವಸೆ ನೀಡಿದ್ದಾರೆ. ಭಯೋತ್ಪಾದನೆಗೆ ಸಂಬಂಧಿಸಿದ ವಿಷಯಗಳಲ್ಲಿ ಭಾರತ ಮತ್ತು ಸೌದಿ ಅರೇಬಿಯಾ ಸಹಕಾರ ಹೊಂದಿವೆ. ನಾವು ಒಟ್ಟಿಗೆ ಕೆಲಸ ಮಾಡುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ದಾಳಿಯಲ್ಲಿ 28 ಜನರು ಮೃತಪಟ್ಟಿದ್ದು, ಅವರಲ್ಲಿ ಹೆಚ್ಚಿನವರು ಇತರ ರಾಜ್ಯಗಳಿಂದ ಬಂದವರು. 2019ರಲ್ಲಿ ಪುಲ್ವಾಮಾ ದಾಳಿಯ ನಂತರ ಕಣಿವೆಯಲ್ಲಿ ನಡೆದ ಅತ್ಯಂತ ಭೀಕರ ದಾಳಿ ಇದಾಗಿದೆ.

PM Modi holds urgent meeting with NSA
ಜಮ್ಮು ಮತ್ತು ಕಾಶ್ಮೀರ: ಪಹಲ್ಗಾಮ್‌ನಲ್ಲಿ ಉಗ್ರರ ಗುಂಡಿನ ದಾಳಿ, 12 ಪ್ರವಾಸಿಗರಿಗೆ ಗಾಯ

ಇನ್ನೂ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿ ಹಿನ್ನೆಲೆಯಲ್ಲಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಉನ್ನತ ಮಟ್ಟದ ಭದ್ರತಾ ಮಾಹಿತಿ ಸಭೆ ನಡೆಸಿದ್ದಾರೆ. ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ನಡೆದ ಈ ಸಭೆಯಲ್ಲಿ ಪ್ರಧಾನಿ ಮೋದಿ ಅವರಿಗೆ ದಾಳಿಯ ಕುರಿತು ವಿಸ್ತೃತ ಮಾಹಿತಿ ನೀಡಲಾಯಿತು. ಅಲ್ಲದೇ ಮುಂದಿನ ಕ್ರಮಗಳ ಬಗ್ಗೆ ಪ್ರಧಾನಿ ಮೋದಿ ಅವರಿಂದ ಸೂಚನೆ ಸ್ವೀಕರಿಸಲಾಯಿತು ಎಂದು ಮೂಲಗಳು ಖಚಿತಪಡಿಸಿವೆ.

ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಈ ಉನ್ನತ ಮಟ್ಟದ ಭದ್ರತಾ ಸಮಿತಿ ಸಭೆಯಲ್ಲಿ, ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಮತ್ತು ಇತರ ಹಿರಿಯ ಭದ್ರತಾ ಸಲಹೆಗಾರರು ಹಾಗೂ ಪ್ರಮುಖ ಅಧಿಕಾರಿಗಳು ಭಾಗವಹಿಸಿದ್ದರು ಎಂದು ಮೂಲಗಳು ಖಚಿತಪಡಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com