ಪುಣೆ: 111 ಪಾಕ್ ಪ್ರಜೆಗಳು ಎರಡು ದಿನಗಳಲ್ಲಿ ಭಾರತ ತೊರೆಯುವಂತೆ ಸೂಚನೆ!

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಪಾಕ್ ನಾಗರಿಕರಿಗೆ ನೀಡಲಾದ ಎಲ್ಲಾ ರೀತಿಯ ವೀಸಾಗಳನ್ನು ಅಮಾನತುಗೊಳಿಸಿದ ನಂತರ ಈ ಕ್ರಮ ಕೈಗೊಂಡಿದೆ.
Indian citizens from Pakistan reach the Attari border which is now closed
ಅಟಾರಿ ಗಡಿಯಲ್ಲಿ ಪಾಕ್ ನಿಂದ ಮರಳಿದ ಭಾರತೀಯರು
Updated on

ಪುಣೆ: ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ವಾಸಿಸುತ್ತಿರುವ 111 ಪಾಕಿಸ್ತಾನಿ ಪ್ರಜೆಗಳಿಗೆ ಏ. 27 ರೊಳಗೆ ಭಾರತವನ್ನು ತೊರೆಯುವಂತೆ ಜಿಲ್ಲಾಡಳಿತ ಸೂಚಿಸಿದೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಪಾಕ್ ನಾಗರಿಕರಿಗೆ ನೀಡಲಾದ ಎಲ್ಲಾ ರೀತಿಯ ವೀಸಾಗಳನ್ನು ಅಮಾನತುಗೊಳಿಸಿದ ನಂತರ ಈ ಕ್ರಮ ಕೈಗೊಂಡಿದೆ.

ಆದರೆ ವೈದ್ಯಕೀಯ ವೀಸಾಗಳು ಹೆಚ್ಚುವರಿಯಾಗಿ ಎರಡು ದಿನಗಳವರೆಗೆ ಮಾನ್ಯವಾಗಿರುತ್ತವೆ. ವೀಸಾ ನೀಡುವ ಕೇಂದ್ರಗಳು ಮತ್ತು ಪಾಸ್‌ಪೋರ್ಟ್ ಕಚೇರಿಯಿಂದ ಪಾಕಿಸ್ತಾನಿ ಪ್ರಜೆಗಳ ಡೇಟಾವನ್ನು ಸಂಗ್ರಹಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಜಿತೇಂದ್ರ ದುಡಿ ಸುದ್ದಿಗಾರರಿಗೆ ತಿಳಿಸಿದರು.

"ಇದುವರೆಗೆ 111 ಪಾಕಿಸ್ತಾನಿ ಪ್ರಜೆಗಳ ಬಗ್ಗೆ ನಮಗೆ ಮಾಹಿತಿ ಸಿಕ್ಕಿದೆ. ಅವರೆಲ್ಲರೂ ನಿಗದಿತ ಗಡುವಿನೊಳಗೆ ದೇಶ ತೊರೆಯುವುದು ಕಡ್ಡಾಯ ಎಂದು ತಿಳಿಸಲಾಗಿದೆ. ಪ್ರವಾಸೋದ್ಯಮ, ವೈದ್ಯಕೀಯ ಚಿಕಿತ್ಸೆ ಸೇರಿದಂತೆ ವಿವಿಧ ಕಾರಣಗಳಿಗಾಗಿ ವೀಸಾಗಳನ್ನು ನೀಡಲಾಗಿದ್ದು, ‘ವೈದ್ಯಕೀಯ ಕಾರಣಕ್ಕಾಗಿ ಇಲ್ಲಿರುವವರು ಏಪ್ರಿಲ್ 29 ರೊಳಗೆ ಹೊರಡಲು ವಿನಾಯಿತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.

Indian citizens from Pakistan reach the Attari border which is now closed
'ನಿಮ್ಮ ರಾಜ್ಯಗಳಲ್ಲಿರುವ ಪಾಕಿಸ್ತಾನ ಪ್ರಜೆಗಳನ್ನು ಗುರುತಿಸಿ': ಮುಖ್ಯಮಂತ್ರಿಗಳಿಗೆ ಗೃಹ ಸಚಿವ ಅಮಿತ್ ಶಾ ಸೂಚನೆ

ಈ ಮಧ್ಯೆ ಛತ್ರಪತಿ ಸಂಭಾಜಿನಗರದ ಪೊಲೀಸರು 57 ಪಾಕಿಸ್ತಾನಿ ಪ್ರಜೆಗಳು ದೀರ್ಘಾವಧಿಯ ವೀಸಾದಲ್ಲಿ ನಗರದಲ್ಲಿದ್ದಾರೆ. ಈ ಪ್ರಕರಣದಲ್ಲಿ ಹೆಚ್ಚಿನ ಸೂಚನೆಗಳಿಗಾಗಿ ಜಿಲ್ಲಾಧಿಕಾರಿ ಕಚೇರಿ ಕಾಯುತ್ತಿರುವುದಾಗಿ ಜಿಲ್ಲಾ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com