ಜಮ್ಮು-ಕಾಶ್ಮೀರ: ಬಂಡಿಪೋರಾದಲ್ಲಿ ಎನ್ಕೌಂಟರ್; ಉಗ್ರರು-ಸೇನಾಪಡೆ ನಡುವೆ ಭಾರೀ ಗುಂಡಿನ ಕಾಳಗ, ಇಬ್ಬರು ಯೋಧರಿಗೆ ಗಾಯ

ಬಂಡಿಪೋರಾ ಜಿಲ್ಲೆಯ ಕುಲ್ನರ್ ಬಾಜಿಪೋರಾ ಪ್ರದೇಶದಲ್ಲಿ ಉಗ್ರರು ಇರುವ ಬಗ್ಗೆ ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಸ್ಥಳದಲ್ಲಿ ಕಾರ್ಯಾಚರಣೆ ಆರಂಭಿಸಿತ್ತು.
ಅನಂತನಾಗ್ ಎನ್ಕೌಂಟರ್
ಅನಂತನಾಗ್ ಎನ್ಕೌಂಟರ್
Updated on: 

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಎನ್ಕೌಂಟರ್ ಆರಂಭವಾಗಿದ್ದು, ಅಡಗಿ ಕುಳಿತಿರುವ ಉಗ್ರರು ಹಾಗೂ ಭಾರತೀಯ ಸೇನಾಪಡೆಗಳ ನಡುವೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ಶುಕ್ರವಾರ ತಿಳಿದುಬಂದಿದೆ.

ಬಂಡಿಪೋರಾ ಜಿಲ್ಲೆಯ ಕುಲ್ನರ್ ಬಾಜಿಪೋರಾ ಪ್ರದೇಶದಲ್ಲಿ ಉಗ್ರರು ಇರುವ ಬಗ್ಗೆ ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಸ್ಥಳದಲ್ಲಿ ಕಾರ್ಯಾಚರಣೆ ಆರಂಭಿಸಿತ್ತು. ಈ ವೇಳೆ ಅಡಗಿ ಕುಳಿತಿದ್ದ ಉಗ್ರರು ಏಕಾಏಕಿ ಸೇನಾಪಡೆ ಮೇಲೆ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದಾರೆ. ಪರಿಣಾಮ ಇಬ್ಬರು ಯೋಧರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಉಗ್ರರ ದಾಳಿ ಹಿನ್ನೆಲೆಯಲ್ಲಿ ಸ್ಥಳವನ್ನು ಸುತ್ತುವರೆದಿರುವ ಸೇನಾಪಡೆ ಕಾರ್ಯಾಚರಣೆಯನ್ನು ಎನ್ಕೌಂಟರ್ ಆಗಿ ಬದಲಾಯಿಸಿದ್ದು, ದಾಳಿಗೆ ತಕ್ಕ ಉತ್ತರ ನೀಡುತ್ತಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅನಂತನಾಗ್ ಎನ್ಕೌಂಟರ್
ಜಮ್ಮು-ಕಾಶ್ಮೀರ, ಉಧಂಪುರ: ಉಗ್ರರೊಂದಿಗೆ ಗುಂಡಿನ ಚಕಮಕಿ, ಸೇನಾ ಯೋಧ ಹುತಾತ್ಮ!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com