ಉತ್ತರ ಪ್ರದೇಶ: ಅಕ್ಕಿ ಗಿರಣಿಯ ಡ್ರೈಯರ್‌ ಹೊಗೆ ಸೇವಿಸಿ ಐವರು ಕಾರ್ಮಿಕರು ಸಾವು, ಮೂವರು ಅಸ್ವಸ್ಥ

ಡ್ರೈಯರ್ ಯಂತ್ರದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಹೊಗೆ ಹೊರಸೂಸಲು ಪ್ರಾರಂಭಿಸಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
The District Magistrate of Bahraich, Monica Rani meeting the injured at the district hospital.
ಅಸ್ವಸ್ಥರನ್ನು ಭೇಟಿ ಮಾಡಿದ ಜಿಲ್ಲಾಧಿಕಾರಿ
Updated on

ಬರೈಚ್: ಅಕ್ಕಿ ಗಿರಣಿಯಲ್ಲಿ ಕೆಟ್ಟು ನಿಂತ ಡ್ರೈಯರ್ ಯಂತ್ರದಿಂದ ಹೊರಹೊಮ್ಮಿದ ವಿಷಪೂರಿತ ಹೊಗೆ ಸೇವಿಸಿಗ ಐವರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹೊಗೆ ಸೇವಿಸಿದ ನಂತರ ಅಸ್ವಸ್ಥಗೊಂಡು ಮೂರ್ಛೆ ಹೋದ ಇತರ ಮೂವರು ಕಾರ್ಮಿಕರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಡ್ರೈಯರ್ ಯಂತ್ರದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಹೊಗೆ ಹೊರಸೂಸಲು ಪ್ರಾರಂಭಿಸಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ, ಇದನ್ನು ಕಾರ್ಮಿಕರು ಸೇವನೆ ಮಾಡಿದ್ದರಿಂದ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಜ್‌ಗರಿಯಾ ಅಕ್ಕಿ ಗಿರಣಿಯಲ್ಲಿ ಡ್ರೈಯರ್‌ನಿಂದ ಹೊರಹೊಮ್ಮುತ್ತಿದ್ದ ಹೊಗೆಯನ್ನು ಪರಿಶೀಲಿಸಲು ಇಂದು ಬೆಳಿಗ್ಗೆ ಹಲವಾರು ಕಾರ್ಮಿಕರು ಹೋಗಿದ್ದರು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಮಾನಂದ ಪ್ರಸಾದ್ ಕುಶ್ವಾಹ ತಿಳಿಸಿದ್ದಾರೆ. ಹೊಗೆ ತುಂಬಾ ಹೆಚ್ಚಾಗಿದ್ದರಿಂದ ಸ್ಥಳದಲ್ಲಿದ್ದ ಎಲ್ಲಾ ಕಾರ್ಮಿಕರು ಮೂರ್ಛೆ ಹೋದರು. ಮಾಹಿತಿ ಪಡೆದ ನಂತರ, ಅಗ್ನಿಶಾಮಕ ದಳದ ತಂಡವು ಸ್ಥಳಕ್ಕೆ ತಲುಪಿ ಅಸ್ವಸ್ಥಗೊಂಡವರನ್ನು ಸ್ಥಳಾಂತರಿಸಿತು. ಅವರನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಯಿತು. ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಐವರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಯಿತು. ಉಳಿದ ಮೂವರು ಗಾಯಗೊಂಡ ಕಾರ್ಮಿಕರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ಹೇಳಿದರು.

ಘಟನೆಯಲ್ಲಿ ಮೃತಪಟ್ಟವರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತ ಅಧಿಕಾರಿಗಳಿಗೆ ಆದಿತ್ಯನಾಥ್ ನಿರ್ದೇಶನ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ 'ಎಕ್ಸ್' ನಲ್ಲಿ ಪೋಸ್ಟ್ ಮಾಡಿದೆ. ಘಟನೆಗೆ ಕಾರಣವಾದ ಸಂದರ್ಭಗಳ ಕುರಿತು ಪೊಲೀಸರು ಹೆಚ್ಚಿನ ತನಿಖೆ ಆರಂಭಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com