LoCಯಲ್ಲಿ ಪಾಕ್ ಸೇನೆಯಿಂದ ದಾಳಿ: ಭಾರತ ಸೇನೆ ತಕ್ಕ ಪ್ರತ್ಯುತ್ತರ

ಪಾಕಿಸ್ತಾನ ಸೇನೆಯು ನಿಯಂತ್ರಣ ರೇಖೆಯ ಕೆಲವು ಸ್ಥಳಗಳಲ್ಲಿ ಸಣ್ಣ ಶಸ್ತ್ರಾಸ್ತ್ರಗಳಿಂದ ಗುಂಡು ಹಾರಿಸಿದೆ.
Representational image
ಸಾಂದರ್ಭಿಕ ಚಿತ್ರ
Updated on

ಶ್ರೀನಗರ: ಪಹಲ್ಗಾಮ್ ಭಯೋತ್ಪಾದಕ ದಾಳಿ ನಂತರ ಭಾರತ-ಪಾಕಿಸ್ತಾನ ಸಂಬಂಧ ಮತ್ತಷ್ಟು ಹದಗೆಟ್ಟಿದ್ದು, ಇಂದು ಶುಕ್ರವಾರ ಪಾಕಿಸ್ತಾನ ಸೇನಾ ಪಡೆಗಳು ಗಡಿ ನಿಯಂತ್ರಣ ರೇಖೆಯ (LoC) ಕೆಲವು ಸ್ಥಳಗಳಲ್ಲಿ ಗುಂಡು ಹಾರಿಸಿದ್ದು, ಭಾರತೀಯ ಸೇನೆ ಈ ಅಪ್ರಚೋದಿತ ದಾಳಿಗೆ ತಕ್ಷಣದ ಪ್ರತೀಕಾರ ನೀಡಿದೆ.

ಪಾಕಿಸ್ತಾನ ಸೇನೆಯು ನಿಯಂತ್ರಣ ರೇಖೆಯ ಕೆಲವು ಸ್ಥಳಗಳಲ್ಲಿ ಸಣ್ಣ ಶಸ್ತ್ರಾಸ್ತ್ರಗಳಿಂದ ಗುಂಡು ಹಾರಿಸಿದೆ. ಭಾರತೀಯ ಸೇನೆಯು ಪರಿಣಾಮಕಾರಿಯಾಗಿ ಅದಕ್ಕೆ ಪ್ರತಿಕ್ರಿಯಿಸಿದೆ. ಇದುವರೆಗೆ ಯಾವುದೇ ಸಾವುನೋವುಗಳಾಗಿಲ್ಲ ಎಂದು ಭಾರತೀಯ ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.

ಪಹಲ್ಗಾಮ್‌ ಭಯೋತ್ಪಾದಕ ದಾಳಿಯ ಬಳಿಕ ಇದೇ ಮೊದಲ ಬಾರಿಗೆ, ಭಾರತ ಮತ್ತು ಪಾಕಿಸ್ತಾನ ಸೇನೆಗಳು ಮುಖಾಮುಖಿಯಾಗಿವೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

Representational image
ಜಮ್ಮು-ಕಾಶ್ಮೀರ: LET ಟಾಪ್ ಕಮಾಂಡರ್​ ಹತ್ಯೆ; ಬಂಡಿಪೋರಾ ಎನ್ ಕೌಂಟರ್ ನಲ್ಲಿ ಅಲ್ತಾಫ್ ಲಲ್ಲಿ ಫಿನಿಶ್!

ಈ ಕುರಿತು ಮಾಹಿತಿ ನೀಡಿರುವ ಭಾರತೀಯ ಸೇನೆಯ ಹಿರಿಯ ಅಧಿಕಾರಿಗಳು, "ಗಡಿ ನಿಯಂತ್ರಣ ರೇಖೆಯ ಕೆಲವು ಸ್ಥಳಗಳಲ್ಲಿ ಪಾಕಿಸ್ತಾನ ಸೇನೆಯು ಗುಂಡಿನ ದಾಳಿ ನಡೆಸಿದೆ. ನಮ್ಮ ಸೈನಿಕರು ಕೂಡಲೇ ಪ್ರತಿಕ್ರಿಯೆ ನೀಡಿದ್ದು, ಯಾವುದೇ ಸಾವು-ನೋವು ಸಂಭವಿಸಿಲ್ಲ. ಹೆಚ್ಚಿನ ವಿವರಗಳನ್ನು ಖಚಿತಪಡಿಸಿಕೊಳ್ಳಲಾಗುತ್ತಿದೆ" ಎಂದು ಸ್ಪಷ್ಟಪಡಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com