ಪಹಲ್ಗಾಮ್ ಭಯೋತ್ಪಾದಕ ದಾಳಿ: ಜಮ್ಮುವಿನ ಕುಲ್ಗಾಮ್, ಶೋಪಿಯಾನ್ ನಲ್ಲಿ ಶಂಕಿತ ಉಗ್ರರ ಮನೆ ಧ್ವಂಸ; Video

ಕುಲ್ಗಾಮ್ ಜಿಲ್ಲೆಯ ಮುತಲ್ಹಾಮಾ ಗ್ರಾಮದಲ್ಲಿ ಜಕೀರ್ ಅಹ್ಮದ್ ಗಣಿ ಎಂದು ಗುರುತಿಸಲಾದ ಶಂಕಿತನ ಮನೆಯನ್ನು ಕೆಡವಲಾಗಿದೆ.
house in Chotipora village in Shopian district of Jammu and Kashmir
ಕುಲ್ಗಾಮ್ ಜಿಲ್ಲೆಯಲ್ಲಿ ಶಂಕಿತ ಉಗ್ರನ ಮನೆ ಧ್ವಂಸ
Updated on

ಶ್ರೀನಗರ: 26 ಜನರ ಪ್ರಾಣವನ್ನು ಬಲಿತೆಗೆದುಕೊಂಡ ಮತ್ತು ಅನೇಕರು ಗಾಯಗೊಂಡ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಶಂಕಿತನ ಮನೆಯನ್ನು ಭದ್ರತಾ ಪಡೆಗಳು ಮತ್ತು ಜಮ್ಮು ಮತ್ತು ಕಾಶ್ಮೀರ ಅಧಿಕಾರಿಗಳು ಶನಿವಾರ ಕೆಡವಿದ್ದಾರೆ.

ಕುಲ್ಗಾಮ್ ಜಿಲ್ಲೆಯ ಮುತಲ್ಹಾಮಾ ಗ್ರಾಮದಲ್ಲಿ ಜಕೀರ್ ಅಹ್ಮದ್ ಗಣಿ ಎಂದು ಗುರುತಿಸಲಾದ ಶಂಕಿತನ ಮನೆಯನ್ನು ಕೆಡವಲಾಗಿದೆ. ದೇಶಾದ್ಯಂತ ಆಘಾತಕಾರಿ ಅಲೆಗಳನ್ನು ಎಬ್ಬಿಸಿರುವ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಜಕೀರ್ ಅಹ್ಮದ್ ಗಣಿ ಭಾಗಿಯಾಗಿದ್ದಾನೆ ಎಂದು ನಂಬಲಾಗಿದೆ.

ನಿನ್ನೆ ಲಷ್ಕರ್-ಎ-ತೈಬಾ ಭಯೋತ್ಪಾದಕ ಆದಿಲ್ ಥೋಕರ್ ಅಲಿಯಾಸ್ ಆದಿಲ್ ಗುರಿ ಮನೆಯನ್ನು ಕೆಡವಲಾಗಿತ್ತು.

ಶೋಪಿಯಾನ್, ಕುಲ್ಗಾಮ್ ಮತ್ತು ಪುಲ್ವಾಮಾ ಜಿಲ್ಲೆಗಳಲ್ಲಿ ಭದ್ರತಾ ಪಡೆಗಳು ಎಲ್‌ಇಟಿ ಉಗ್ರರ ಮತ್ತು ದಾಳಿಗೆ ಸಂಬಂಧಿಸಿದ ಶಂಕಿತರ ವಿರುದ್ಧ ಕಾರ್ಯಾಚರಣೆಯನ್ನು ನಡೆಸಿದೆ. ಶೋಪಿಯಾನ್‌ನ ಚೋಟಿಪೋರಾ ಗ್ರಾಮದಲ್ಲಿ, ಎಲ್‌ಇಟಿ ಕಮಾಂಡರ್ ಶಾಹಿದ್ ಅಹ್ಮದ್ ಕುಟ್ಟೆ ಉಗ್ರನ ಮನೆಯನ್ನು ನೆಲಸಮಗೊಳಿಸಲಾಗಿದೆ.

ಈತ ಕಳೆದ ಮೂರ್ನಾಲ್ಕು ವರ್ಷಗಳಿಂದ ಭಯೋತ್ಪಾದನಾ ಸಂಬಂಧಿತ ಚಟುವಟಿಕೆಗಳಲ್ಲಿ ಸಕ್ರಿಯನಾಗಿದ್ದಾನೆ. ದೇಶ ವಿರೋಧಿ ಕಾರ್ಯಾಚರಣೆಗಳನ್ನು ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾನೆ. ಎಂದು ಹೇಳಲಾಗಿದೆ. ಕುಲ್ಗಾಮ್‌ನ ಮಾತಲಂ ಪ್ರದೇಶದಲ್ಲಿ ಸಕ್ರಿಯ ಭಯೋತ್ಪಾದಕ ಜಾಹಿದ್ ಅಹ್ಮದ್‌ನ ಮತ್ತೊಂದು ಮನೆಯನ್ನು ಕೆಡವಲಾಯಿತು.

ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಬಿಜ್‌ಬೆಹರಾ ಬ್ಲಾಕ್‌ನಲ್ಲಿರುವ ಗುರಿ ಗ್ರಾಮದ ನಿವಾಸಿ ಆದಿಲ್ ಗುರಿ, ನೇಪಾಳಿ ಪ್ರಜೆ ಸೇರಿದಂತೆ 26 ಜನರನ್ನು ಕೊಂದ ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದಾನೆ ಎಂದು ನಂಬಲಾಗಿದೆ, ಇದರಲ್ಲಿ ಹೆಚ್ಚಾಗಿ ಪ್ರವಾಸಿಗರು ಸೇರಿದ್ದಾರೆ.

ಆತನನ್ನು ಅತ್ಯಂತ ಬೇಕಾಗಿರುವ ವ್ಯಕ್ತಿ ಎಂದು ಘೋಷಿಸಲಾಗಿದ್ದು, ಆತನ ಬಂಧನಕ್ಕೆ ಕಾರಣವಾಗುವ ಯಾವುದೇ ನಿರ್ದಿಷ್ಟ ಮಾಹಿತಿ ನೀಡಿದವರಿಗೆ ಅನಂತ್‌ನಾಗ್ ಪೊಲೀಸರು 20 ಲಕ್ಷ ರೂ. ಬಹುಮಾನ ಘೋಷಿಸಿದ್ದಾರೆ.

house in Chotipora village in Shopian district of Jammu and Kashmir
Watch | ಪಹಲ್ಗಾಮ್ ದಾಳಿಯಲ್ಲಿ ಭಾಗಿ; ಇಬ್ಬರು ಉಗ್ರರ ಮನೆ ಸ್ಫೋಟದಲ್ಲಿ ಧ್ವಂಸ

ಪುಲ್ವಾಮಾದ ಮುರ್ರಾನ್ ಪ್ರದೇಶದಲ್ಲಿ, ಭಯೋತ್ಪಾದಕ ಅಹ್ಸಾನ್ ಉಲ್ ಹಕ್​​ನ ಮನೆ ಸ್ಫೋಟಿಸಿ ನೆಲಸಮ ಮಾಡಲಾಗಿದೆ. 2018 ರಲ್ಲಿ ಪಾಕಿಸ್ತಾನದಲ್ಲಿ ಭಯೋತ್ಪಾದಕ ತರಬೇತಿ ಪಡೆದು, ಇತ್ತೀಚೆಗೆ ಕಣಿವೆಗೆ ಮತ್ತೆ ಪ್ರವೇಶಿಸಿದ್ದ ಎಂದು ಹೇಳಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com