ತಿರುವನಂತಪುರ: ಹಲವು ಹೊಟೇಲ್ ಗಳಿಗೆ ಬಾಂಬ್ ಬೆದರಿಕೆ ಇಮೇಲ್

ಬಾಂಬ್ ಬೆದರಿಕೆ ಬಂದ ಎಲ್ಲಾ ಹೋಟೆಲ್‌ಗಳಲ್ಲಿ ತಪಾಸಣೆ ನಡೆಸಲಾಗುತ್ತಿದೆ ಎಂದು ಕಂಟೋನ್ಮೆಂಟ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ
Representational image
ಸಾಂದರ್ಭಿಕ ಚಿತ್ರ
Updated on

ತಿರುವನಂತಪುರ: ಕೇರಳ ರಾಜ್ಯ ರಾಜಧಾನಿಯ ವಿವಿಧ ಹೋಟೆಲ್‌ಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶಗಳು ಬಂದಿದ್ದು, ಪೊಲೀಸರು ಬಾಂಬ್ ನಿಷ್ಕ್ರಿಯ ಘಟಕಗಳು ಮತ್ತು ಶ್ವಾನ ದಳಗಳನ್ನು ನಿಯೋಜಿಸಿ ತಪಾಸಣೆ ನಡೆಸಿದ್ದಾರೆ.

ಬಾಂಬ್ ಬೆದರಿಕೆ ಬಂದ ಎಲ್ಲಾ ಹೋಟೆಲ್‌ಗಳಲ್ಲಿ ತಪಾಸಣೆ ನಡೆಸಲಾಗುತ್ತಿದೆ ಎಂದು ಕಂಟೋನ್ಮೆಂಟ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಇಲ್ಲಿಯವರೆಗೆ ಏನೂ ಪತ್ತೆಯಾಗಿಲ್ಲ. ತಪಾಸಣೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

ತಿರುವನಂತಪುರ ನಗರದ ಹೃದಯಭಾಗದಲ್ಲಿರುವ ಹಿಲ್ಟನ್ ಹೋಟೆಲ್ ಸೇರಿದಂತೆ ವಿವಿಧ ಹೋಟೆಲ್‌ಗಳಲ್ಲಿ ಐಇಡಿ ಸ್ಫೋಟಗಳು ಸಂಭವಿಸುತ್ತವೆ ಎಂದು ಹೇಳಲಾದ ಬೆದರಿಕೆ ಇಮೇಲ್‌ನ ಮೂಲವನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

Representational image
ಬಿಡದಿ ರೈಲು ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ: ಬಾಂಬ್ ನಿಷ್ಕ್ರೀಯ ತಂಡ, ಶ್ವಾನ ದಳದಿಂದ ಪರಿಶೀಲನೆ; Video

ಕಳೆದ ಎರಡು ತಿಂಗಳುಗಳಲ್ಲಿ, ರಾಜ್ಯಾದ್ಯಂತ ಜಿಲ್ಲಾ ಕಲೆಕ್ಟರೇಟ್‌ಗಳು ಮತ್ತು ಕಂದಾಯ ವಿಭಾಗೀಯ ಅಧಿಕಾರಿಗಳ ಕಚೇರಿಗಳಿಗೆ ಮತ್ತು ಇತ್ತೀಚೆಗೆ ಕೇರಳ ಹೈಕೋರ್ಟ್‌ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶಗಳು ಬಂದಿವೆ.

ವ್ಯಾಪಕ ತಪಾಸಣೆ ನಡೆಸಿದ ನಂತರ ಈ ಎಲ್ಲಾ ಬೆದರಿಕೆಗಳನ್ನು ಪೊಲೀಸರು ಹುಸಿಕರೆ ಎಂದು ತಳ್ಳಿಹಾಕಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com