Pahalgam terror attack: ಏಪ್ರಿಲ್ 30ರಂದು ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವ ಸಂಪುಟ ಸಭೆ!

ಕಳೆದ ವಾರ ಕೇಂದ್ರ ಸಚಿವ ಸಂಪುಟದ ಯಾವುದೇ ಸಭೆ ನಡೆದಿರಲಿಲ್ಲ. ಏಪ್ರಿಲ್ 23 ರಂದು ಭದ್ರತೆ ಕುರಿತ ಸಂಪುಟ ಸಮಿತಿ ಸಭೆ ನಡೆದಿತ್ತು. ಭಯೋತ್ಪಾದಕ ದಾಳಿಯನ್ನು ಖಂಡಿಸಲಾಗಿತ್ತು.
Cabinet Meeting
ಕೇಂದ್ರ ಸಚಿವ ಸಂಪುಟ ಸಭೆ ಸಾಂದರ್ಭಿಕ ಚಿತ್ರ
Updated on

ನವದೆಹಲಿ: ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಮೊದಲ ಬಾರಿಗೆ ಬುಧವಾರ ಕೇಂದ್ರ ಸಚಿವ ಸಂಪುಟ ಸಭೆ ಸೇರಲಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ಬೆಳಗ್ಗೆ 11 ಗಂಟೆಗೆ ಸಭೆ ಕರೆಯಲಾಗಿದೆ.

ಕಳೆದ ವಾರ ಕೇಂದ್ರ ಸಚಿವ ಸಂಪುಟದ ಯಾವುದೇ ಸಭೆ ನಡೆದಿರಲಿಲ್ಲ. ಏಪ್ರಿಲ್ 23 ರಂದು ಭದ್ರತೆ ಕುರಿತ ಸಂಪುಟ ಸಮಿತಿ ಸಭೆ ನಡೆದಿತ್ತು. ಭಯೋತ್ಪಾದಕ ದಾಳಿಯನ್ನು ಖಂಡಿಸಲಾಗಿತ್ತು.

ಭದ್ರತಾ ಕುರಿತ ಸಂಪುಟ ಸಮಿತಿ ಸಭೆ ನಂತರ ಭಾರತ ಪಾಕಿಸ್ತಾನದೊಂದಿಗಿನ ರಾಜತಾಂತ್ರಿಕ ಸಂಬಂಧಗಳನ್ನು ಕಡಿಮೆ ಮಾಡುವುದು ಸೇರಿದಂತೆ ಇನ್ನಿತರ ಹಲವು ಕ್ರಮಗಳನ್ನು ಘೋಷಿಸಿತ್ತು. ಆರು ದಶಕಗಳ ಹಳೆಯದಾದ ಸಿಂಧೂ ನದಿ ನೀರು ಒಪ್ಪಂದ ರದ್ದು, ಕೂಡಲೇ ಅಟ್ಟಾರಿ ಗಡಿ ಬಂದ್ ಕ್ರಮ ಕೈಗೊಳ್ಳಲಾಗಿತ್ತು.

Cabinet Meeting
ಪಹಲ್ಗಾಮ್ ದಾಳಿಯ ಶಂಕಿತರು: ಕಾಶ್ಮೀರ ಕಣಿವೆಯಲ್ಲಿ ಡಜನ್‌ಗೂ ಹೆಚ್ಚು ಸಕ್ರಿಯ ಭಯೋತ್ಪಾದಕರ ಗುರುತು

ಏಪ್ರಿಲ್ 22 ರಂದು ಕಾಶ್ಮೀರದ ಪಹಲ್ಗಾಮ್ ಬಳಿಯ ಜನಪ್ರಿಯ ಬೈಸರನ್ ಕಣಿವೆಯಲ್ಲಿ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ ಕನಿಷ್ಠ 6 ಜನರು, ಹೆಚ್ಚಾಗಿ ಪ್ರವಾಸಿಗರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಈ ಭಯೋತ್ಪಾದಕ ದಾಳಿಯು 2019 ರ ಪುಲ್ವಾಮಾ ದಾಳಿಯ ನಂತರ ಈ ಪ್ರದೇಶದಲ್ಲಿ ನಡೆದ ಅತ್ಯಂತ ಭೀಕರ ಘಟನೆಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com