ಜನಗಣತಿಯಲ್ಲಿ ಜಾತಿ ಎಣಿಕೆಯನ್ನು ಸೇರಿಸಲು ಕೇಂದ್ರ ಸಚಿವ ಸಂಪುಟ ಮಹತ್ವದ ನಿರ್ಧಾರ!

ರಾಜಕೀಯ ವ್ಯವಹಾರಗಳ ಸಂಪುಟ ಸಮಿತಿಯ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.
Caste census
ಜನಗಣತಿonline desk
Updated on

ನವದೆಹಲಿ: ಮುಂದಿನ ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ಜನಗಣತಿಯನ್ನು "ಪಾರದರ್ಶಕ ರೀತಿಯಲ್ಲಿ" ಸೇರಿಸಲಾಗುವುದು ಎಂದು ಕೇಂದ್ರ ಸಚಿವೆ ಅಶ್ವಿನಿ ವೈಷ್ಣವ್ ಬುಧವಾರ ಘೋಷಿಸಿದರು.

ರಾಜಕೀಯ ವ್ಯವಹಾರಗಳ ಸಂಪುಟ ಸಮಿತಿಯ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.

"ರಾಜಕೀಯ ವ್ಯವಹಾರಗಳ ಸಂಪುಟ ಸಮಿತಿಯು ಮುಂಬರುವ ಜನಗಣತಿಯಲ್ಲಿ ಜಾತಿ ಎಣಿಕೆಯನ್ನು ಸೇರಿಸಲು ನಿರ್ಧರಿಸಿದೆ" ಎಂದು ಕೇಂದ್ರ ಸಚಿವರು ಬುಧವಾರ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.

ಜನಗಣತಿ ಕಾರ್ಯ ಏಪ್ರಿಲ್ 2020 ರಲ್ಲಿ ಪ್ರಾರಂಭವಾಗಬೇಕಿತ್ತು ಆದರೆ ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ ವಿಳಂಬವಾಯಿತು. 10 ವರ್ಷಗಳ ವೇಳಾಪಟ್ಟಿಯ ಪ್ರಕಾರ ಈ ಕಾರ್ಯ ನಡೆದಿದ್ದರೆ, ವರದಿಯು 2021 ರಲ್ಲಿ ಪ್ರಕಟವಾಗುತ್ತಿತ್ತು.

ಸಂಪುಟದ ದೊಡ್ಡ ನಿರ್ಧಾರವನ್ನು ಘೋಷಿಸುವಾಗ, ವೈಷ್ಣವ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪಕ್ಷ ಯಾವಾಗಲೂ ಜಾತಿ ಜನಗಣತಿಯನ್ನು ವಿರೋಧಿಸುತ್ತದೆ ಎಂದು ಹೇಳಿದರು. ಅವರು ಇಂಡಿ ಬ್ಲಾಕ್ ಪಕ್ಷಗಳ ಮೇಲೆ ವಾಗ್ದಾಳಿ ಮಾಡಿದರು. ಅವರು ರಾಜಕೀಯ ಲಾಭಕ್ಕಾಗಿ ಜಾತಿ ಆಧಾರಿತ ಜನಸಂಖ್ಯಾ ಎಣಿಕೆಯನ್ನು ಬಳಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

"ಕಾಂಗ್ರೆಸ್ ಸರ್ಕಾರಗಳು ಯಾವಾಗಲೂ ಜಾತಿ ಜನಗಣತಿಯನ್ನು ವಿರೋಧಿಸಿವೆ. 2010 ರಲ್ಲಿ, ದಿವಂಗತ ಡಾ. ಮನಮೋಹನ್ ಸಿಂಗ್ ಸಂಸತ್ತಿನಲ್ಲಿ ಜಾತಿ ಜನಗಣತಿಯ ವಿಷಯವನ್ನು ಸಚಿವ ಸಂಪುಟದಲ್ಲಿ ಪರಿಗಣಿಸಬೇಕು ಎಂದು ಹೇಳಿದರು. ಈ ವಿಷಯವನ್ನು ಪರಿಗಣಿಸಲು ಸಚಿವರ ಗುಂಪನ್ನು ರಚಿಸಲಾಯಿತು. ಹೆಚ್ಚಿನ ರಾಜಕೀಯ ಪಕ್ಷಗಳು ಜಾತಿ ಜನಗಣತಿಯನ್ನು ಶಿಫಾರಸು ಮಾಡಿವೆ. ಇದರ ಹೊರತಾಗಿಯೂ, ಕಾಂಗ್ರೆಸ್ ಸರ್ಕಾರ SECC ಎಂದು ಕರೆಯಲ್ಪಡುವ ಸಮೀಕ್ಷೆಯನ್ನು ನಡೆಸುವುದು ಸೂಕ್ತವೆಂದು ಭಾವಿಸಿದೆ" ಎಂದು ವೈಷ್ಣವ್ ಹೇಳಿದರು.

Caste census
ಜಾತಿ ಗಣತಿ ಯಾವುದೇ ಸಮುದಾಯದ ವಿರುದ್ಧ ಅಲ್ಲ: ಸಿಎಂ ಸಿದ್ದರಾಮಯ್ಯ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com