ಆಂಧ್ರಪ್ರದೇಶ: ಸಿಂಹಾಚಲ ದೇವಸ್ಥಾನ ಚಂದನೋತ್ಸವ ವೇಳೆ ಗೋಡೆ ಕುಸಿತ, 8 ಸಾವು; ತಲಾ 25 ಲಕ್ಷ ರೂ ಪರಿಹಾರ ಘೋಷಣೆ; Video

ವಿಶಾಖಪಟ್ಟಣಂನ ಶ್ರೀ ವರಾಹಲಕ್ಷ್ಮಿ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಚಂದನೋತ್ಸವ ಕಾರ್ಯಕ್ರಮ ನಡೆಯತ್ತಿತ್ತು. ಉತ್ಸವ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಅಪಾರ ಸಂಖ್ಯೆಯಲ್ಲಿ ಜನರ ಸೇರಿದ್ದರು. ಈ ವೇಳೆ ಗೋಡೆ ಕುಸಿದು ಬಿದ್ದಿದೆ.
ರಕ್ಷಣಾ ಕಾರ್ಯಾಚರಣೆ ನಡೆಯುತ್ತಿರುವುದು.
ರಕ್ಷಣಾ ಕಾರ್ಯಾಚರಣೆ ನಡೆಯುತ್ತಿರುವುದು.
Updated on

ವಿಶಾಖಪಟ್ಟಣ: ಶ್ರೀ ವರಾಹಲಕ್ಷ್ಮಿ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಚಂದನೋತ್ಸವ ಉತ್ಸವದ ವೇಳೆ ಗೋಡೆ ಕುಸಿದು ಬಿದ್ದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಾಯವಾಗಿರುವ ಘಟನೆ ಆಂಧ್ರಪ್ರದೇಶ ವಿಶಾಖಪಟ್ಟಣದಲ್ಲಿ ಬುಧವಾರ ನಡೆದಿದೆ.

ವಿಶಾಖಪಟ್ಟಣಂನ ಶ್ರೀ ವರಾಹಲಕ್ಷ್ಮಿ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಚಂದನೋತ್ಸವ ಕಾರ್ಯಕ್ರಮ ನಡೆಯತ್ತಿತ್ತು. ಉತ್ಸವ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಅಪಾರ ಸಂಖ್ಯೆಯಲ್ಲಿ ಜನರ ಸೇರಿದ್ದರು. ಈ ವೇಳೆ ಗೋಡೆ ಕುಸಿದು ಬಿದ್ದಿದೆ. ಪರಿಣಾಮ 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವಶೇಷಗಳಡಿ ಹಲವರು ಸಿಲುಕಿರುವ ಸಾಧ್ಯತೆಗಳಿದ್ದು, ಸ್ಥಳಕ್ಕಾಗಿಮಿಸಿರುವ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಘಟನೆ ಮಾಹಿತಿ ತಿಳಿದು ಸ್ಥಳಕ್ಕೆ ಜಿಲ್ಲಾಧಿಕಾರಿಗಳು, ಪೊಲೀಸರು ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ಆಂಧ್ರ ಪ್ರದೇಶದ ರಾಜ್ಯ ವಿಪತ್ತು ರಕ್ಷಣಾ ಸಿಬ್ಬಂದಿ (SDRF) ಹಾಗೂ ರಾಷ್ಟ್ರೀಯ ನೈಸರ್ಗಿಕ ರಕ್ಷಣಾ ಸಿಬ್ಬಂದಿ (NDRF) ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳು ನಡೆಸುತ್ತಿವೆ.

ಸ್ಥಳಕ್ಕೆ ಆಂಧ್ರಪ್ರದೇಶದ ಗೃಹ ಸಚಿವೆ ಮತ್ತು ವಿಪತ್ತು ನಿರ್ವಹಣಾ ಸಚಿವೆ ವಂಗಲಪುಡಿ ಅನಿತಾ ಇಂದು ಬೆಳಗ್ಗೆ ಭೇಟಿ ನೀಡಿದ್ದು, ಈ ಘಟನೆ ದುರದೃಷ್ಟಕರ ಘಟನೆ ನಡೆಯಬಾರದಿತ್ತು. ರಕ್ಷಣಾ ಕಾರ್ಯಾಚರಣೆ ತೀವ್ರಗತಿಯಲ್ಲಿ ಸಾಗುತ್ತಿದ್ದು, ಗಾಯಾಳು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ಪ್ರಸ್ತುತ ಕುಸಿತಗೊಂಡಿರುವ ಗೋಡೆಯನ್ನು 20 ದಿನಗಳ ಹಿಂದಷ್ಟೇ ನಿರ್ಮಿಸಲಾಗಿತ್ತು ಎಂದು ತಿಳಿದುಬಂದಿದೆ. ದೇವಾಲಯದ ಟ್ರಸ್ಟಿ ಅಶೋಕ್ ಗಜಪತಿ ರಾಜು ಅವರು ಸಾಂಪ್ರದಾಯಿಕ ಆಚರಣೆಯ ಭಾಗವಾಗಿ ದೇವರಿಗೆ ರೇಷ್ಮೆ ವಸ್ತ್ರಗಳನ್ನು ಅರ್ಪಿಸಿದ ಸ್ವಲ್ಪ ಸಮಯದ ನಂತರ ದುರ್ಘಟನೆ ಸಂಭವಿಸಿದೆ.

ಘಟನೆಯಲ್ಲಿ ಮೂವರು ಮಹಿಳೆಯರು ಸೇರಿ 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ, ಆಧಾರ್ ಕಾರ್ಡ್‌ಗಳ ಮೂಲಕ ಮೃತಪಟ್ಟಿರುವ 8 ಮಂದಿ ಪೈಕಿ ಮೂವರನ್ನು ಗುರುತಿಸಲಾಗಿದೆ. ಉಳಿದ ಶವಗಳನ್ನು ಇನ್ನೂ ಗುರುತಿಸಲಾಗಿಲ್ಲ. ಶವಾಗಾರದಲ್ಲಿ ಇರಿಸಲಾಗಿದೆ. ಅವರ ಕುಟುಂಬಗಳು ಗುರುತುಗಳನ್ನು ದೃಢಪಡಿಸಿದ ನಂತರ ಮರಣೋತ್ತರ ಪರೀಕ್ಷೆ ಆರಂಭವಾಗಲಿದೆ ಎಂದು ಕಿಂಗ್ ಜಾರ್ಜ್ ಆಸ್ಪತ್ರೆಯ ಅಧೀಕ್ಷಕ ಕೆ. ಶಿವಾನಂದ್ ಅವರು ಹೇಳಿದ್ದಾರೆ.

ಮೂವರನ್ನು ವೈ. ವೆಂಕಟ್ ರಾವ್ (55), ಪಿ. ಸ್ವಾಮಿ ನಾಯ್ಡು (33), ಮತ್ತು ಕೆ. ಮಣಿಕಂಠ ಈಶ್ವರ್ (28) ಎಂದು ಗುರುತಿಸಲಾಗಿದೆ.

ಘಟನೆಗೆ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಗಾಯಾಳುಗಳಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಒದಗಿಸುವತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಅಲ್ಲದೆ. ಘಟನೆಯ ಬಗ್ಗೆ ವಿವರವಾದ ತನಿಖೆ ನಡೆಸಲು ಮೂವರು ಸದಸ್ಯರ ಸಮಿತಿಯನ್ನು ರಚಿಸುವುದಾಗಿ ಘೋಷಿಸಿದ್ದಾರೆ.

ರಕ್ಷಣಾ ಕಾರ್ಯಾಚರಣೆ ನಡೆಯುತ್ತಿರುವುದು.
Watch | ಕೋಲ್ಕತ ಹೋಟೆಲ್​ನಲ್ಲಿ ಅಗ್ನಿ ಅವಘಡ: 15 ಮಂದಿ ಸಜೀವ ದಹನ

ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ರೂ. ಮತ್ತು ಗಾಯಗೊಂಡ ಪ್ರತಿಯೊಬ್ಬ ವ್ಯಕ್ತಿಗೆ 3 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ ಹೆಚ್ಚುವರಿಯಾಗಿ ಮೃತರ ಕುಟುಂಬದ ಅರ್ಹ ಸದಸ್ಯರಿಗೆ ದತ್ತಿ ಇಲಾಖೆಯಡಿಯಲ್ಲಿ ಹೊರಗುತ್ತಿಗೆ ಉದ್ಯೋಗ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಇನ್ನು ಘಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರೂ ಕೂಡ ಸಂತಾಪ ಸೂಚಿಸಿದ್ದು, ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ಪ್ರತಿ ಮೃತರಿಗೆ 2 ಲಕ್ಷ ರೂ. ಮತ್ತು ಗಾಯಾಳುಗಳಿಗೆ 50,000 ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com