
ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನ ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿರುವ ಆರೋಪಗಳಿಗೆ ಭಾರತೀಯ ಚುನಾವಣಾ ಆಯೋಗ ಶುಕ್ರವಾರ ಪ್ರತಿಕ್ರಿಯೆ ನೀಡಿದೆ. ದೇಶದಲ್ಲಿ ಚುನಾವಣಾ ಆಯೋಗದಿಂದ ದೊಡ್ಡ ಪ್ರಮಾಣದಲ್ಲಿ ಮತದಾರರ ವಂಚನೆ ನಡೆದಿದೆ ಎಂದು ಆರೋಪಿಸಿದೆ.
ಚುನಾವಣಾ ಆಯೋಗದಿಂದ ನಡೆದಿರುವ ಅಕ್ರಮಗಳ ಬಗ್ಗೆ ತಮ್ಮ ಬಳಿ ಸ್ಪಷ್ಟ ಪುರಾವೆಗಳಿವೆ, ಅದನ್ನು ಸಮಯ ಸಂದರ್ಭ ಬಂದಾಗ ಜನತೆ ಮುಂದಿಡುತ್ತೇವೆ ಎಂದು ರಾಹುಲ್ ಗಾಂಧಿ ಹೇಳಿದ್ದರು.
ರಾಹುಲ್ ಗಾಂಧಿಯವರ ಹೇಳಿಕೆಗೆ ಚುನಾವಣಾ ಸಂಸ್ಥೆ ಆಧಾರರಹಿತ ಮತ್ತು ಬೇಜವಾಬ್ದಾರಿ ಎಂದು ಟೀಕಿಸಿದೆ. ಇಂತಹ ದೈನಂದಿನ ಆರೋಪಗಳು ಮತ್ತು ಬೆದರಿಕೆಗಳಿಗೆ ಗಮನ ಕೊಡಬೇಡಿ ಎಂದು ಚುನಾವಣಾ ಆಯೋಗ ಅಧಿಕಾರಿಗಳಿಗೆ ಸಲಹೆ ನೀಡಿದೆ.
ಆಧಾರರಹಿತ ಆರೋಪ
ಪ್ರತಿದಿನ ಮಾಡಲಾಗುತ್ತಿರುವ ಇಂತಹ ಆಧಾರರಹಿತ ಆರೋಪಗಳನ್ನು ಚುನಾವಣಾ ಆಯೋಗವು ನಿರ್ಲಕ್ಷಿಸುತ್ತದೆ ಎಲ್ಲಾ ಚುನಾವಣಾ ಅಧಿಕಾರಿಗಳು ಇಂತಹ ಬೇಜವಾಬ್ದಾರಿ ಹೇಳಿಕೆಗಳನ್ನು ನಿರ್ಲಕ್ಷಿಸಿ, ನಿಷ್ಪಕ್ಷಪಾತವಾಗಿ, ನ್ಯಾಯಯುತವಾಗಿ ಮತ್ತು ಪಾರದರ್ಶಕವಾಗಿ ಕೆಲಸ ಮಾಡುವುದನ್ನು ಮುಂದುವರಿಸಬೇಕೆಂದು ಒತ್ತಾಯಿಸುತ್ತದೆ ಎಂದು ಕೇಂದ್ರ ಚುನಾವಣಾ ಆಯೋಗ ಹೇಳಿಕೆಯಲ್ಲಿ ತಿಳಿಸಿದೆ.
ಪ್ರಜಾಪ್ರಭುತ್ವ ಮೌಲ್ಯಗಳನ್ನು ಎತ್ತಿಹಿಡಿಯುವುದು, ದೇಶಾದ್ಯಂತ ಮುಕ್ತ ಮತ್ತು ನ್ಯಾಯಯುತ ಚುನಾವಣೆ ನಡೆಯುವಂತೆ ಖಚಿತಪಡಿಸಿಕೊಳ್ಳುವುದು ನಮ್ಮ ಮೊದಲ ಆದ್ಯತೆಯಾಗಿದೆ ಎಂದು ಹೇಳಿದೆ.
ಚುನಾವಣಾ ಆಯೋಗವು ಬಿಜೆಪಿಗೆ ಮತ ಕಳ್ಳತನದಲ್ಲಿ ತೊಡಗಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು. ಸಂಸತ್ತಿನ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ಬಿಹಾರದಲ್ಲಿ ನಡೆಯಲಿರುವ ಚುನಾವಣಾ ವಿವಾದಾತ್ಮಕ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಬಗ್ಗೆ ಕೇಳಿದಾಗ, ಮತ ಕಳ್ಳತನದಲ್ಲಿ ಇಸಿಐ ಭಾಗಿಯಾಗಿರುವುದಕ್ಕೆ ನಮ್ಮ ಬಳಿ ಸ್ಪಷ್ಟ ಪುರಾವೆಯಿದೆ ಎಂದು ಹೇಳಿದ್ದರು.
2023 ರ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ, ನಂತರ ಲೋಕಸಭಾ ಚುನಾವಣೆಯಲ್ಲಿ ಮತ್ತು ನಂತರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಚುನಾವಣಾ ಅಕ್ರಮಗಳ ಬಗ್ಗೆ ತಮ್ಮ ಪಕ್ಷಕ್ಕೆ ಅನುಮಾನಗಳಿವೆ ಎಂದು ರಾಹುಲ್ ಗಾಂಧಿ ಹೇಳಿದ್ದರು.
Advertisement