ಸೌರಶಕ್ತಿ ಉತ್ಪಾದನೆ: ಜಪಾನ್‌ ಹಿಂದಿಕ್ಕಿ, ವಿಶ್ವದ ಮೂರನೇ ಅತಿದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಿದ ಭಾರತ!

ಜಪಾನ್‌ ಸದ್ಯ 96,459 GWh ವಿದ್ಯುತ್‌ ಉತ್ಪಾದಿಸುತ್ತಿದ್ದರೆ ಭಾರತ 1,08,494 GWh ವಿದ್ಯುತ್‌ ಉತ್ಪಾದಿಸಿ ಮುಂಚೂಣಿಯಲ್ಲಿದೆ.
Casual Images
ಸಾಂದರ್ಭಿಕ ಚಿತ್ರ
Updated on

ನವದೆಹಲಿ: ಸೌರಶಕ್ತಿ ಉತ್ಪಾದನೆಯಲ್ಲಿ ಭಾರತ ಈಗ ಜಪಾನ್‌ಗಿಂತ ಮುಂದಿದ್ದು, 1,08,494 GWh (ಗಿಗಾವ್ಯಾಟ್‌ ಗಂಟೆ) ವಿದ್ಯುತ್‌ ಉತ್ಪಾದಿಸುತ್ತಿದೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.

ನವದೆಹಲಿಯಲ್ಲಿಂದು ಈ ಮಾಹಿತಿ ಹಂಚಿಕೊಂಡ ಸಚಿವರು, ಜಪಾನ್‌ ಸದ್ಯ 96,459 GWh ವಿದ್ಯುತ್‌ ಉತ್ಪಾದಿಸುತ್ತಿದ್ದರೆ ಭಾರತ 1,08,494 GWh ವಿದ್ಯುತ್‌ ಉತ್ಪಾದಿಸಿ ಮುಂಚೂಣಿಯಲ್ಲಿದೆ. ಪಳೆಯುಳಿಕೆಯೇತರ ವಿದ್ಯುತ್ ಉತ್ಪಾದನೆ ಸಾಮರ್ಥ್ಯದ ಶೇ.50ರಷ್ಟನ್ನು ಅದಾಗಲೇ ಸಾಧಿಸಿದೆ ಎಂದು ಹೇಳಿದರು.

ಸೌರಶಕ್ತಿ ಉತ್ಪಾದನೆಯಲ್ಲಿ ವಿಶ್ವದ 3ನೇ ಅತಿದೊಡ್ಡ ರಾಷ್ಟ್ರ: ಸೌರಶಕ್ತಿ ಉತ್ಪಾದನೆಯಲ್ಲಿ ಭಾರತವೀಗ ಜಪಾನ್‌ ಅನ್ನು ಹಿಂದಿಕ್ಕುವ ಮೂಲಕ ಮೂರನೇ ಅತಿದೊಡ್ಡ ದೇಶವಾಗಿ ಹೊರ ಹೊಮ್ಮಿದೆ. ಚೀನಾ ಮತ್ತು ಅಮೆರಿಕ ನಂತರದ ಸ್ಥಾನದಲ್ಲಿ ಭಾರತ ರಾರಾಜಿಸುತ್ತಿದೆ. ಭಾರತ ವಿಶ್ವದ ಮೂರನೇ ಅತಿದೊಡ್ಡ ಸೌರಶಕ್ತಿ ಉತ್ಪಾದಕ ರಾಷ್ಟ್ರವಾಗುವಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಬೆಂಬಲ, ಪ್ರೋತ್ಸಾಹ, ಮಾರ್ಗದರ್ಶನ ಅತ್ಯಮೂಲ್ಯವಾಗಿದೆ. ಮೋದಿ ಅವರ ದೂರದೃಷ್ಟಿಯಿಂದಾಗಿ ಭಾರತ ಶುದ್ಧ ಇಂಧನ ಕ್ರಾಂತಿಯಲ್ಲಿ ಜಾಗತಿಕವಾಗಿ ಮುಂಚೂಣಿ ಸಾಧಿಸಿದೆ ಎಂದು ಹೇಳಿದರು.

ಪ್ಯಾರಿಸ್‌ ಒಪ್ಪಂದ ಸಾಧಿಸಿದ ಭಾರತ: ಪ್ಯಾರಿಸ್ ಒಪ್ಪಂದಕ್ಕೆ ಅನುಗುಣವಾಗಿ ಭಾರತ ತನ್ನ ವಿದ್ಯುತ್ ಸಾಮರ್ಥ್ಯದ ಶೇ.50ರಷ್ಟು ಅನ್ನು ಪಳೆಯುಳಿಕೆಯೇತರ ಮೂಲಗಳಿಂದ 5 ವರ್ಷ ಮೊದಲೇ ಸಾಧಿಸಿದೆ. 2030ರ ವೇಳೆಗೆ ಪಳೆಯುಳಿಕೆಯೇತರ ಆಧಾರಿತ ವಿದ್ಯುತ್ ಉತ್ಪಾದನಾ ಸಾಮರ್ಥ್ಯದ ಶೇ.50ಕ್ಕೆ ಹೆಚ್ಚಿಸಲಿದೆ ಎಂದು ತಿಳಿಸಿದರು.

ಭಾರತದ ಇಂಧನ ಸಾಮರ್ಥ್ಯವೀಗ 484.8 GW: ಜೂನ್ 30ರ ಹೊತ್ತಿಗೆ ಭಾರತದ ಒಟ್ಟು ಇಂಧನ ಸಾಮರ್ಥ್ಯ 484.8 GW ಆಗಿದ್ದು, ಇದರಲ್ಲಿ 242.04 GW (ಶೇ.49.92) ಉಷ್ಣ-ಕಲ್ಲಿದ್ದಲಿನಿಂದ ಹಾಗೂ 8.78 GW (ಶೇ.1.81) ಪರಮಾಣುವಿನಿಂದ ಮತ್ತು 234.00 GW (ಶೇ.48.27) ನವೀಕರಿಸಬಹುದಾದ ಮೂಲಗಳಿಂದ ಸಾಧ್ಯವಾಗಿದೆ ಎಂದು ಸಚಿವ ಪ್ರಲ್ಹಾದ ಜೋಶಿ ವಿವರಿಸಿದರು.

ಗ್ಲ್ಯಾಸ್ಗೋದಲ್ಲಿ ನಡೆದ COP26ನಲ್ಲಿ ಭಾರತ ತನ್ನ ಬದ್ಧತೆಗಳನ್ನು ಪೂರೈಸುವ ಹಾದಿಯಲ್ಲಿದೆ. 2030ರ ವೇಳೆಗೆ ಪಳೆಯುಳಿಕೆಯೇತರ ಇಂಧನ ಸಾಮರ್ಥ್ಯವನ್ನು 500 GWಗೆ ಹೆಚ್ಚಿಸಲಿದೆ ಮತ್ತು ನವೀಕರಿಸಬಹುದಾದ ಇಂಧನ ಮೂಲಗಳಿಂದ ಶೇ.50ರಷ್ಟು ಇಂಧನ ಅಗತ್ಯಗಳನ್ನು ಪೂರೈಸಲಿದೆ ಎಂದು ಘೋಷಿಸಿದರು.

Casual Images
ಆರೋಗ್ಯ ಕೇಂದ್ರಗಳಲ್ಲಿ ಸೌರಶಕ್ತಿ ಬಳಕೆ; ದೇಶದಲ್ಲೇ ಮೊದಲ ಜಿಲ್ಲೆ ರಾಯಚೂರು!

1 ಶತಕೋಟಿ ಟನ್‌ ಇಂಗಾಲ ಹೊರಸೂಸುವಿಕೆ ಗುರಿ: ಭಾರತ ಒಂದು ಶತಕೋಟಿ ಟನ್‌ಗಳಷ್ಟು ಇಂಗಾಲದ ಹೊರಸೂಸುವಿಕೆ ಕಡಿಮೆ ಮಾಡುವ ಗುರಿ ಹೊಂದಿದ್ದು, 2030ರ ವೇಳೆಗೆ ಶೇ.45ರಷ್ಟು ಮತ್ತು 2070ರ ವೇಳೆಗೆ ನಿವ್ವಳ ಶೂನ್ಯ ಹೊರಸೂಸುವಿಕೆ ಗುರಿ ಸಾಧಿಸುವತ್ತ ಹೆಜ್ಜೆ ಹಾಕಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com