
ನವದೆಹಲಿ: ದೇಶದ ಮುಂದಿನ ಉಪ ರಾಷ್ಟ್ರಪತಿ ಆಯ್ಕೆಗಾಗಿ ಚುನಾವಣೆಯು ಸೆಪ್ಟೆಂಬರ್ 9ರಂದು ನಡೆಯಲಿದೆ ಎಂದು ಚುನಾವಣಾ ಆಯೋಗ ಆಗಸ್ಟ್ 1 ರಂದು ತಿಳಿಸಿದೆ. ಆಗಸ್ಟ್ 7ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು 21ರವರೆಗೆ ಅವಕಾಶವಿದೆ ಎಂದು ಚುನಾವಣಾ ಆಯೋಗ ಅಧಿಸೂಚನೆಯಲ್ಲಿ ಹೇಳಿದೆ.
ಆಗಸ್ಟ್ 22ರಂದು ನಾಮಪತ್ರಗಳ ಪರಿಶೀಲನೆ ಮಾಡಲಾಗುವುದು ಮತ್ತು ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ ಆಗಸ್ಟ್ 25 ಆಗಿದೆ. ಮತದಾನ ಸೆಪ್ಟೆಂಬರ್ 9ರಂದು ನಡೆಯಲಿದ್ದು ಅದೇ ದಿನ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.
ಉಪರಾಷ್ಟ್ರಪತಿ ಚುನಾವಣೆಯಲ್ಲಿ, ರಾಜ್ಯಸಭೆಯ 233 ಚುನಾಯಿತ ಸಂಸದರು, ರಾಜ್ಯಸಭೆಯ 12 ನಾಮನಿರ್ದೇಶಿತ ಸಂಸದರು ಮತ್ತು ಲೋಕಸಭೆಯ 543 ಸಂಸದರು ತಮ್ಮ ಮತಗಳನ್ನು ಚಲಾಯಿಸಬಹುದು. ಈ ರೀತಿಯಾಗಿ, ಒಟ್ಟು 788 ಜನರು ಮತ ಚಲಾಯಿಸಬಹುದು.
ಆರೋಗ್ಯದ ಕಾರಣ ನೀಡಿ 22 ರಂದು ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧಂಖರ್ ರಾಜೀನಾಮೆ ನೀಡಿದರು. 2022 ರಿಂದ ಈ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. 74 ವರ್ಷದ ಅವರು, ರಾಜ್ಯಸಭಾ ಅಧ್ಯಕ್ಷರಾಗಿ ಮಳೆಗಾಲದ ಅಧಿವೇಶನದ ಮೊದಲ ದಿನದ ಅಧ್ಯಕ್ಷತೆ ವಹಿಸಿದ ನಂತರ ಈ ಘೋಷಣೆ ಮಾಡಿದರು.
Advertisement