
ಪುಣೆ: ಪುಣೆಯ ಪಿಂಪ್ರಿ-ಚಿಂಚ್‌ವಾಡ್‌ನಲ್ಲಿರುವ ಜಿಮ್‌ನಲ್ಲಿ ಶುಕ್ರವಾರ ಬೆಳಿಗ್ಗೆ ವರ್ಕೌಟ್ ನಂತರ ವ್ಯಕ್ತಿಯೊಬ್ಬರು ತಮ್ಮ ಬಾಟಲಿಯಿಂದ ನೀರು ಕುಡಿದಿದ್ದಾರೆ. ಬಳಿಕ ಇದ್ದಕ್ಕಿದ್ದಂತೆ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಜಿಮ್‌ನಲ್ಲಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಈ ಘಟನೆಯು ಸೆರೆಯಾಗಿದೆ.
ಜಿಮ್‌ನಲ್ಲಿದ್ದ ಇತರರು ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, 37 ವರ್ಷದ ಮಿಲಿಂದ್ ಕುಲಕರ್ಣಿ ಅವರು ಆಸ್ಪತ್ರೆಗೆ ಬರುವಷ್ಟರಲ್ಲಿ ಮೃತಪಟ್ಟಿದ್ದಾರೆಂದು ವೈದ್ಯರು ಘೋಷಿಸಿದ್ದಾರೆ.
ವರದಿಗಳ ಪ್ರಕಾರ, ಕುಲಕರ್ಣಿ ಅವರ ಪತ್ನಿಯೂ ಈ ಹಿಂದೆ ಹೃದಯಾಘಾತದಿಂದ ನಿಧನರಾದರು. ಅವರು ವೈದ್ಯೆಯಾಗಿದ್ದರು.
65 ವರ್ಷಕ್ಕಿಂತ ಮೇಲ್ಪಟ್ಟ ಜನರು ಹೃದಯಾಘಾತದ ಅಪಾಯವನ್ನು ಹೊಂದಿರುತ್ತಾರೆ. ಆದರೆ, ಕಳೆದ ಕೆಲವು ವರ್ಷಗಳಿಂದ 50 ವರ್ಷಕ್ಕಿಂತ ಕಡಿಮೆ ವಯಸ್ಸಿನವರಲ್ಲಿ ಹೃದಯಾಘಾತದ ಪ್ರಮಾಣದಲ್ಲಿ ತೀವ್ರ ಏರಿಕೆ ಕಂಡುಬಂದಿದೆ. ಹಲವಾರು ಜಾಗತಿಕ ವೈದ್ಯಕೀಯ ವರದಿಗಳು 30 ಮತ್ತು 40ರ ಹರೆಯದ ಜನರಲ್ಲಿ ಹೃದಯಾಘಾತದ ಸಂಖ್ಯೆಯಲ್ಲಿ ಏರಿಕೆಯಾಗಿರುವುದನ್ನು ಎತ್ತಿ ತೋರಿಸಿವೆ.
Advertisement