
ರಾಂಚಿ: ತಮ್ಮ ನಿವಾಸದ ಸ್ನಾನಗೃಹದಲ್ಲಿ ಬಿದ್ದು ತಲೆಗೆ ಪೆಟ್ಟಾಗಿದ್ದ ಜಾರ್ಖಂಡ್ ಶಿಕ್ಷಣ ಸಚಿವ ರಾಮದಾಸ್ ಸೊರೆನ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ದೆಹಲಿ ಆಸ್ಪತ್ರೆಗೆ ಏರ್ ಲಿಫ್ಟ್ ಮಾಡಲಾಗುತ್ತಿದೆ ಎಂದು ರಾಜ್ಯ ಸಚಿವ ಇರ್ಫಾನ್ ಅನ್ಸಾರಿ ತಿಳಿಸಿದ್ದಾರೆ.
ಸೋರೆನ್ ಅವರನ್ನು ಇಂದು ಬೆಳಿಗ್ಗೆ ಜೆಮ್ ಶೆಡ್ ಪುರ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಅವರು ಹೇಳಿದರು. ರಾಮದಾಸ್ ಸೊರೆನ್ ಜಿ ಅವರ ಆರೋಗ್ಯ ಹದಗೆಟ್ಟಿದೆ. ಅವರು ಸ್ನಾನಗೃಹದಲ್ಲಿ ಬಿದ್ದು, ಮೆದುಳಿಗೆ ತೀವ್ರ ಗಾಯವಾಗಿದೆ ಮತ್ತು ರಕ್ತ ಹೆಪ್ಪುಗಟ್ಟಿದೆ ಎಂದು ರಾಜ್ಯ ಆರೋಗ್ಯ ಸಚಿವ ಅನ್ಸಾರಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ನಂತರ, ಸೋರೆನ್ ಅವರನ್ನು ಜಮ್ ಶೆಜ್ ಪುರ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದರು, ಅಲ್ಲಿ ವೈದ್ಯರು ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿರುವುದು ತಿಳಿದು ಬಂದಿದೆ. ನಾವು ಅವರನ್ನು ಏರ್ ಲಿಫ್ಟ್ ಮಾಡಲು ತಯಾರಿ ನಡೆಸುತ್ತಿದ್ದೇವೆ. ನಾನು ನಿರಂತರವಾಗಿ ಸಂಪರ್ಕದಲ್ಲಿದ್ದೇನೆ ಮತ್ತು ಅವರ ಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದೇನೆ" ಎಂದು ಅವರು ಹೇಳಿದರು.
Advertisement