
ಶ್ರೀನಗರ: ‘ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರರನ್ನು ಸದೆಬಡಿಯಲು ಭಾರತೀಯ ಸೇನೆ ಆರಂಭಿಸಿರುವ ‘ಆಪರೇಷನ್ ಮಹಾದೇವ‘ ಕಾರ್ಯಾಚರಣೆ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಭಾನುವಾರ ಮತ್ತೋರ್ವ ಉಗ್ರನನ್ನು ಸದೆಬಡಿದಿದೆ.
ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಅಖಲ್ ದೇವ್ಸರ್ ಪ್ರದೇಶದಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ನಡೆಸಿದ್ದು, ಓರ್ವ ಉಗ್ರನ್ನು ಹತ್ಯೆ ಮಾಡಿರುವುದಾಗಿ ಸೇನೆ ತಿಳಿಸಿದೆ.
ಜಂಟಿ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆ, ಜಮ್ಮು ಮತ್ತು ಕಾಶ್ಮೀರ ಪೊಲೀಸ್, ಕೇಂದ್ರ ಮೀಸಲು ಪೊಲೀಸ್ ಪಡೆ ಮತ್ತು ವಿಶೇಷ ಕಾರ್ಯಾಚರಣೆ (SOG) ಪಡೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿದೆ.
ಜುಲೈ 30 ರಂದು ಜಮ್ಮು ಮತ್ತು ಕಾಶ್ಮೀರದ ಪೂಂಚ್ ಸೆಕ್ಟರ್‌ನಲ್ಲಿ ನಿಯಂತ್ರಣ ರೇಖೆ (LoC) ಉದ್ದಕ್ಕೂ ಪ್ರತ್ಯೇಕ ಎನ್‌ಕೌಂಟರ್ ನಡೆಯಿತು.
ಗಡಿ ಬೇಲಿಯ ಬಳಿ ಅನುಮಾನಾಸ್ಪದ ಚಲನೆಯನ್ನು ಪತ್ತೆಹಚ್ಚಲಾಗಿದೆ ಎಂದು ಭಾರತೀಯ ಸೇನೆಯ ವೈಟ್ ನೈಟ್ ಕಾರ್ಪ್ಸ್ ತಿಳಿಸಿದೆ.
Advertisement