
ಜೈಪುರ: ರಾಜಸ್ಥಾನದ ಜೈಪುರ ಜಿಲ್ಲೆಯ ಬಂಡಿಕುಯಿ ಪ್ರದೇಶದಲ್ಲಿ ಏಳು ವರ್ಷದ ಕಿವುಡ ಮತ್ತು ಮೂಕ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಭಾನುವಾರ ಮಧ್ಯಾಹ್ನ ಮನೆಯಿಂದ ಕಾಣೆಯಾದ ಬಾಲಕಿ ಸಂಜೆ ಆಕೆಯ ಮನೆಯ ಬಳಿ ಪತ್ತೆಯಾಗಿದ್ದಾಳೆ. ಆಕೆಯನ್ನು ಮನೆಗೆ ಕರೆತಂದಾಗ, ನೋವಿನಿಂದ ನಡುಗುತ್ತಿರುವುದು ಕಂಡುಬಂದಿದೆ ಎಂದು ಅವರು ಹೇಳಿದ್ದಾರೆ.
ಬಾಲಕಿಯನ್ನು ರಾತ್ರಿ ಬಂಡಿಕುಯಿ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ಈ ವೇಳೆ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವುದು ಕಂಡುಬಂದಿದೆ.
ಸಂತ್ರಸ್ತೆಯ ತಂದೆ ನೀಡಿದ ದೂರಿನ ಆಧಾರದ ಮೇಲೆ ಅಪರಿಚಿತ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿರುವುದಾಗಿ ಬಸ್ವಾ ಪೊಲೀಸ್ ಠಾಣೆಯ ಉಸ್ತುವಾರಿ ಸಚಿನ್ ಶರ್ಮಾ ತಿಳಿಸಿದ್ದಾರೆ.
ಭಾನುವಾರ ತಮ್ಮ ಮಗಳು ಮನೆಯಿಂದ ಕಾಣೆಯಾಗಿದ್ದಳು. ಸಾಕಷ್ಟು ಹುಡುಕಾಟದ ನಂತರ, ಬಾಲಕಿ ಮನೆಯಿಂದ ಸ್ವಲ್ಪ ದೂರದಲ್ಲಿ ಕುಳಿತಿರುವುದು ಕಂಡುಬಂದಿದೆ ಎಂದು ಪೋಷಕರು ತಿಳಿಸಿದ್ದಾರೆ.
ಬಾಲಕಿಗೆ ಮಾತು ಬರುವುದಿಲ್ಲ ಮತ್ತು ಕೀವಿ ಸಹ ಕೇಳುವುದಿಲ್ಲ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಮತ್ತು ಆರೋಪಿಯನ್ನು ಹುಡುಕಲಾಗುತ್ತಿದೆ ಎಂದು ಶರ್ಮಾ ಹೇಳಿದ್ದಾರೆ.
Advertisement