ಮತಾಂತರ, ಮದುವೆಗೆ ನಿರಾಕರಣೆ; ಕತ್ತು ಸೀಳಿ Bhagyashree ಯನ್ನು ಹತ್ಯೆ ಮಾಡಿದ Sheikh Raees!

ನೇಪಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ನವರಾದಲ್ಲಿ ಹಿಂದೂ ಮಹಿಳೆಗೆ ಇಸ್ಲಾಂಗೆ ಮತಾಂತರವಾಗುವಂತೆ ರಯೀಸ್ ಒತ್ತಡ ಹಾಕುತ್ತಿದ್ದ, ಆಕೆ ನಿರಾಕರಿಸಿದ್ದಕ್ಕೆ ಕತ್ತು ಸೀಳಿ ಕೊಲೆ ಮಾಡಿದ್ದಾನೆ ಎಂದು ಹೇಳಲಾಗಿದೆ.
Man Slits Womans Throat At Her Home For Allegedly Refusing Conversion
ಮಹಿಳೆಯ ಕತ್ತು ಸೀಳಿ ಕೊಲೆ ಮಾಡಿದ ಆರೋಪಿ
Updated on

ಭೋಪಾಲ್: ಮಧ್ಯಪ್ರದೇಶದಲ್ಲಿ ಮತ್ತೊಂದು ಲವ್ ಜಿಹಾದ್ ಆರೋಪ ಕೇಳಿಬಂದಿದ್ದು, ಧಾರ್ಮಿಕ ಮತಾಂತರ ಮತ್ತು ಮದುವೆಗೆ ನಿರಾಕರಿಸಿದ್ದಕ್ಕೆ ಮಹಿಳೆಯೊಬ್ಬರನ್ನು ಧಾರುಣವಾಗಿ ಕತ್ತು ಸೀಳಿ ಕೊಲೆ ಮಾಡಲಾಗಿದೆ.

ಶೇಖ್ ರಯೀಸ್ ಎಂಬಾತ ಭಾಗ್ಯಶ್ರೀ ಎಂಬುವವರನ್ನು ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಇಲ್ಲಿನ ನೇಪಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ನವರಾದಲ್ಲಿ ಹಿಂದೂ ಮಹಿಳೆಗೆ ಇಸ್ಲಾಂಗೆ ಮತಾಂತರವಾಗುವಂತೆ ರಯೀಸ್ ಒತ್ತಡ ಹಾಕುತ್ತಿದ್ದ, ಆಕೆ ನಿರಾಕರಿಸಿದ್ದಕ್ಕೆ ಕತ್ತು ಸೀಳಿ ಕೊಲೆ ಮಾಡಿದ್ದಾನೆ ಎಂದು ಹೇಳಲಾಗಿದೆ.

ಸಂತ್ರಸ್ತೆ ಭಾಗ್ಯಶ್ರೀ ನಾಮದೇವ್ ಧನುಕ್ ಮನೆಯಲ್ಲಿದ್ದಾಗ ಆಕೆಯ ಮನೆಯೊಳಗೆ ನುಗ್ಗಿದ ಶೇಖ್ ರಯೀಸ್ (42) ಹಲ್ಲೆ ನಡೆಸಿ, ಆಕೆಯ ಕತ್ತು ಸೀಳಿ, ಹಲವು ಬಾರಿ ಇರಿದಿದ್ದಾನೆ.

ಈ ವೇಳೆ ತೀವ್ರ ರಕ್ತಸ್ರಾವದಿಂದಾಗಿ ಭಾಗ್ಯಶ್ರೀ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಭಾಗ್ಯಶ್ರೀ ಸಹೋದರಿ ಸುಭದ್ರಾ ಬಾಯಿ ರಯೀಸ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ರಯೀಸ್ ಆಕೆಯ ಕೂದಲನ್ನು ಹಿಡಿದು, ಹೊಡೆಯುತ್ತಿದ್ದ ಮತ್ತು ಕಿರುಕುಳ ನೀಡುತ್ತಿದ್ದ.

ಆತ ತುಂಬಾ ದಿನಗಳಿಂದ ತನ್ನ ಅಕ್ಕನ ಬಳಿ ಮದುವೆಯಾಗುವಂತೆ ಹಾಗೂ ಮತಾಂತರಗೊಳ್ಳುವಂತೆ ಆತ ಒತ್ತಡ ಹಾಕುತ್ತಿದ್ದ. ಆದರೆ ಆಕೆ ಒಪ್ಪಿಕೊಂಡಿರಲಿಲ್ಲ, ಹೀಗಾಗಿ ರಾತ್ರೋ ರಾತ್ರಿ ಆಕೆಯ ಮನೆಗೆ ನುಗ್ಗಿ ಕತ್ತು ಸೀಳಿ ಕೊಲೆ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ.

Man Slits Womans Throat At Her Home For Allegedly Refusing Conversion
'ಸರ್ವಾಧಿಕಾರ ಮತ್ತು ಸನಾತನದ ಸರಪಳಿ ಮುರಿಯುವ ಏಕೈಕ ಆಯುಧ ಶಿಕ್ಷಣ': ಕಮಲ್ ಹಾಸನ್; Video

ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ಇನ್ನು ಈ ವಿಚಾರ ತಿಳಿಯುತ್ತಲೇ ತುರ್ತು ಕಾರ್ಯಾಚರಣೆ ನಡೆಸಿದ ಪೊಲೀಸರು ಘಟನೆಯಾದ ಕೆಲವೇ ಗಂಟೆಗಳಲ್ಲಿ ಆರೋಪಿ ಶೇಖ್ ರಯೀಸ್ ನನ್ನು ಬಂಧಿಸಿದ್ದಾರೆ. ಬುರ್ಹಾನ್‌ಪುರದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬುರ್ಹಾನ್‌ಪುರ ಎಸ್‌ಪಿ ಅಂತರ್ ಸಿಂಗ್ ಕನೇಶ್ ಅವರು ಮಾತನಾಡಿ, 'ಆರೋಪಿಯ ವಿರುದ್ಧ ಕೊಲೆ ಮತ್ತು ದೌರ್ಜನ್ಯದ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆತನನ್ನು ಬಂಧಿಸಲಾಗಿದೆ' ಎಂದು ದೃಢಪಡಿಸಿದ್ದಾರೆ.

ಲವ್ ಜಿಹಾದ್ ಆರೋಪ

ಇನ್ನು ಈ ಘಟನೆ ಹಿಂದೂ ಸಮುದಾಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದು, ಹಿಂದೂಪರ ಸಂಘಟನೆಗಳು ವ್ಯಾಪಕ ಪ್ರತಿಭಟನೆ ನಡೆಸಿವೆ. ಪ್ರತಿಭಟನಾಕಾರರು ಇದನ್ನು ಲವ್ ಜಿಹಾದ್ ಎಂದು ಕರೆದಿದ್ದಾರೆ. ಅಲ್ಲದೆ ಸಾರ್ವನಿಕರಿಗೆ ಭದ್ರತೆ ಒದಗಿಸುವುದು ಪೊಲೀಸರ ಕರ್ತವ್ಯ. ಪೊಲೀಸರ ನಿರ್ಲಕ್ಷ್ಯದಿಂದಲೇ ಈ ಕೊಲೆಯಾಗಿದೆ. ಅವರು ಕೇವಲ ಮೂರು-ನಾಲ್ಕು ದಿನಗಳ ಹಿಂದೆ ದೂರು ನೀಡಿದ್ದರೂ ಈ ಬಗ್ಗೆ ಪೊಲೀಸರು ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com