
ನವದೆಹಲಿ: ನಿಜವಾದ ಭಾರತೀಯ ಯಾರೆಂದು ನಿರ್ಧರಿಸುವುದು ಸುಪ್ರೀಂಕೋರ್ಟ್ ನ್ಯಾಯಾಧೀಶರ ವ್ಯಾಪ್ತಿಗೆ ಬರುವುದಿಲ್ಲ ಎಂದು ಹೇಳುವ ಮೂಲಕ ಸಹೋದರ ರಾಹುಲ್ ಗಾಂಧಿಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಬೆಂಬಲ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಸಹೋದರನಿಗೆ ಸೇನೆಯ ಬಗ್ಗೆ ಅತ್ಯುನ್ನತ ಗೌರವವಿದೆ. ಸೇನೆಯ ವಿರುದ್ಧ ಎಂದಿಗೂ ಏನನ್ನೂ ಹೇಳುವುದಿಲ್ಲ ಎಂದು ಹೇಳಿದರು.
ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನಾಗಿ ಸರ್ಕಾರವನ್ನು ಪ್ರಶ್ನೆಗಳನ್ನು ಕೇಳುವುದು ರಾಹುಲ್ ಗಾಂಧಿ ಕರ್ತವ್ಯ. ನನ್ನ ಸಹೋದರ ಎಂದಿಗೂ ಸೈನ್ಯದ ವಿರುದ್ಧ ಏನನ್ನೂ ಹೇಳುವುದಿಲ್ಲ. ಸೈನ್ಯವನ್ನು ಅತ್ಯಂತ ಗೌರವದಿಂದ ಕಾಣುತ್ತಾನೆ. ರಾಹುಲ್ ಹೇಳಿಕೆಗಳನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ತಿಳಿಸಿದರು.
ಅಲ್ಲದೆ, ಸುಪ್ರೀಂ ಕೋರ್ಟ್ ನ್ಯಾಯಾಧೀಶರ ವಿರುದ್ಧ ಕಿಡಿಕಾರಿದ ಅವರು, ನಿಜವಾದ ಭಾರತೀಯರು ಯಾರು ಎಂದು ಸುಪ್ರೀಂ ಕೋರ್ಟ್ ನ್ಯಾಯಾಧೀಶರು ನಿರ್ಧರಿಸಲು ಸಾಧ್ಯವಿಲ್ಲ ಎಂದಿದ್ದಾರೆ.
Advertisement