
ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್(ಟಿಎಂಸಿ) ಮಂಗಳವಾರ ಕಲ್ಯಾಣ್ ಬ್ಯಾನರ್ಜಿ ಅವರು ಲೋಕಸಭೆಯ ಮುಖ್ಯ ಸಚೇತಕ ಹುದ್ದೆಗೆ ನೀಡಿದ್ದ ರಾಜೀನಾಮೆಯನ್ನು ಅಂಗೀಕರಿಸಿದ್ದು, ಕಾಕೋಲಿ ಘೋಷ್ ದಸ್ತಿದಾರ್ ಅವರನ್ನು ಲೋಕಸಭೆಯಲ್ಲಿ ಪಕ್ಷದ ಮುಖ್ಯ ಸಚೇತಕರನ್ನಾಗಿ ನಾಮನಿರ್ದೇಶನ ಮಾಡಿದೆ.
ತೃಣಮೂಲ ಕಾಂಗ್ರೆಸ್ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಅವರು, ಕಾಕೋಲಿ ಘೋಷ್ ದಸ್ತಿದಾರ್ ಬದಲಿಗೆ ಲೋಕಸಭೆಯಲ್ಲಿ ಪಕ್ಷದ ಉಪ ನಾಯಕಿಯಾಗಿ ಶತಾಬ್ದಿ ರಾಯ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿದ್ದಾರೆ ಎಂದು X ನಲ್ಲಿ ಪೋಸ್ಟ್ ಮಾಡಲಾಗಿದೆ.
"ಕಲ್ಯಾಣ್ ಬ್ಯಾನರ್ಜಿ ಅವರು ಲೋಕಸಭೆಯಲ್ಲಿ ಸಂಸದೀಯ ಪಕ್ಷದ ಮುಖ್ಯ ಸಚೇತಕ ಹುದ್ದೆಗೆ ನಿನ್ನೆ ಅಧ್ಯಕ್ಷರಿಗೆ ರಾಜೀನಾಮೆ ಸಲ್ಲಿಸಿದ್ದರು. ಅಧ್ಯಕ್ಷರು ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ ಮತ್ತು ಆ ಕೊಡುಗೆಗಳಿಗೆ ಧನ್ಯವಾದ ಅರ್ಪಿಸಿದ್ದಾರೆ" ಎಂದು ಟಿಎಂಸಿ ಪ್ರಕಟಣೆಯಲ್ಲಿ ತಿಳಿಸಿದೆ.
"ಹಿರಿಯ ಸಂಸದರೊಂದಿಗೆ ಸಮಾಲೋಚಿಸಿದ ನಂತರ ಟಿಎಂಸಿ ಅಧ್ಯಕ್ಷರು, ಲೋಕಸಭೆಯಲ್ಲಿ ಪಕ್ಷದ ಹೊಸ ಮುಖ್ಯ ಸಚೇತಕರನ್ನಾಗಿ ಡಾ. ಕಾಕೋಲಿ ಘೋಷ್ ದಸ್ತಿದಾರ್ ಅವರನ್ನು ಮತ್ತು ಶ್ರೀಮತಿ ಸತಾಬ್ದಿ ರಾಯ್ ಅವರನ್ನು ಲೋಕಸಭೆಯಲ್ಲಿ ಪಕ್ಷದ ಹೊಸ ಉಪ ನಾಯಕಿಯಾಗಿ ತಕ್ಷಣದಿಂದ ಜಾರಿಗೆ ಬರುವಂತೆ ನಾಮನಿರ್ದೇಶನ ಮಾಡಿದ್ದಾರೆ" ಎಂದು ಟಿಎಂಸಿ ತಿಳಿಸಿದೆ.
Advertisement