
ನ್ಯೂಯಾರ್ಕ್: ಪ್ರಧಾನಿ ನರೇಂದ್ರ ಮೋದಿ ಚೀನಾಗೆ ಭೇಟಿ ನೀಡುವ ಕಾರ್ಯಕ್ರಮ ನಿಗದಿಯಾಗಿದೆ.
ಗಾಲ್ವಾನ್ ಘರ್ಷಣೆಯ ನಂತರ ಪ್ರಧಾನಿ ಚೀನಾಕ್ಕೆ ಭೇಟಿ ನೀಡುತ್ತಿರುವ ಮೊದಲ ಭೇಟಿ ಇದಾಗಿರಲಿದೆ. ಆಗಸ್ಟ್ 31 ರಿಂದ ಸೆಪ್ಟೆಂಬರ್ 1 ರವರೆಗೆ ಟಿಯಾಂಜಿನ್ ನಗರದಲ್ಲಿ ನಡೆಯಲಿರುವ SCO (ಶಾಂಘೈ ಸಹಕಾರ ಸಂಸ್ಥೆ) ಪ್ರಾದೇಶಿಕ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಚೀನಾಕ್ಕೆ ಭೇಟಿ ನೀಡಲಿದ್ದಾರೆ ಎಂದು NDTV ವರದಿ ಮಾಡಿದೆ.
2020 ರ ಗಾಲ್ವಾನ್ ಘರ್ಷಣೆಯ ಬಳಿಕ ಪ್ರಧಾನಿ ಮೋದಿ ಚೀನಾಗೆ ಭೇಟಿ ನೀಡಿರಲಿಲ್ಲ.
2019 ರಲ್ಲಿ ಪ್ರಧಾನಿ ಮೋದಿ ಚೀನಾಕ್ಕೆ ಭೇಟಿ ನೀಡಿದ್ದರು. SCO ಸದಸ್ಯ ರಾಷ್ಟ್ರಗಳೊಂದಿಗಿನ ಸಭೆಯಲ್ಲಿ ನಡೆಯಲಿರುವ ಚರ್ಚೆಗಳು ಪ್ರಾದೇಶಿಕ ಭದ್ರತೆ, ಭಯೋತ್ಪಾದನೆ ಮತ್ತು ವ್ಯಾಪಾರವನ್ನು ಒಳಗೊಂಡಿರುತ್ತವೆ. ಭಾರತ-ಚೀನಾ ಸಂಬಂಧಗಳಲ್ಲಿ ಸ್ಥಿರತೆ ಮತ್ತು ಸಂವಾದವನ್ನು ಪುನಃಸ್ಥಾಪಿಸಲು ಪ್ರಯತ್ನಗಳನ್ನು ಮಾಡಲಾಗುತ್ತದೆ.
ಶೃಂಗಸಭೆಯ ಸಮಯದಲ್ಲಿ ರಷ್ಯಾದ ಅಧ್ಯಕ್ಷ ಪುಟಿನ್ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರೊಂದಿಗೆ ಅನೌಪಚಾರಿಕ ಸಭೆಗಳ ಸಾಧ್ಯತೆಯಿದೆ.
ಇದಕ್ಕೂ ಮೊದಲು, ಅಕ್ಟೋಬರ್ 2024 ರಲ್ಲಿ, ಕಜಾನ್‌ನಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಮತ್ತು ಕ್ಸಿ ಜಿನ್‌ಪಿಂಗ್ ಭೇಟಿಯಾದರು. ಅದರ ನಂತರ, ಎರಡೂ ದೇಶಗಳ ನಡುವಿನ ಗಡಿ ಉದ್ವಿಗ್ನತೆಯನ್ನು ಕಡಿಮೆ ಮಾಡುವ ಪ್ರಯತ್ನಗಳು ವೇಗವನ್ನು ಪಡೆದಿತ್ತು.
Advertisement