
ಗಡ್ಚಿರೋಲಿ: ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಗುರುವಾರ ರಸ್ತೆ ಬದಿ ಕುಳಿತಿದ್ದ ಬಾಲಕರಿಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಅಪ್ರಾಪ್ತ ಬಾಲಕರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಅರ್ಮೋರಿ-ಗಡ್ಚಿರೋಲಿ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ 5 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ ಎಂದು ಅವರು ಹೇಳಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಜಿಲ್ಲಾ ಕೇಂದ್ರದಿಂದ 12 ಕಿ.ಮೀ ದೂರದಲ್ಲಿರುವ ಕಟ್ಲಿ ಗ್ರಾಮದಲ್ಲಿ 12 ರಿಂದ 16 ವರ್ಷ ವಯಸ್ಸಿನ ಆರು ಅಪ್ರಾಪ್ತ ಬಾಲಕರು ರಸ್ತೆಬದಿಯಲ್ಲಿ ಕುಳಿತಿದ್ದಾಗ, ಟ್ರಕ್ ಡಿಕ್ಕಿ ಹೊಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅವರಲ್ಲಿ ನಾಲ್ವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.
ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು, ಇದು ಅತ್ಯಂತ ದುರದೃಷ್ಟಕರ ಮತ್ತು ಭೀಕರ ಅಪಘಾತದಿಂದ ತೀವ್ರ ನೋವಾಗಿದೆ ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
"ಮೃತರಿಗೆ ತೀವ್ರ ಸಂತಾಪ ಸೂಚಿಸಿದ ಸಿಎಂ, ದುಃಖ ಮತ್ತು ನಷ್ಟದ ಈ ಕಠಿಣ ಕ್ಷಣದಲ್ಲಿ ನಾವು ದುಃಖಿತ ಕುಟುಂಬಗಳೊಂದಿಗೆ ನಿಲ್ಲುತ್ತೇವೆ" ಎಂದು ಹೇಳಿದ್ದಾರೆ.
ಗಾಯಗೊಂಡ ಇಬ್ಬರು ಬಾಲಕರು ಗಡ್ಚಿರೋಲಿ ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ನಾಗ್ಪುರಕ್ಕೆ ಏರ್ ಲಿಫ್ಟ್ ಹೆಲಿಕಾಪ್ಟರ್ ವ್ಯವಸ್ಥೆ ಮಾಡಲಾಗಿದೆ" ಎಂದು ತಿಳಿಸಿದ್ದಾರೆ.
"ಮೃತರ ಕುಟುಂಬಗಳಿಗೆ ತಲಾ 4 ಲಕ್ಷ ರೂ.ಗಳ ಪರಿಹಾರ ನೀಡಲಾಗುವುದು ಮತ್ತು ಗಾಯಾಳುಗಳ ವೈದ್ಯಕೀಯ ಚಿಕಿತ್ಸೆಗೆ ಸಂಬಂಧಿಸಿದ ಎಲ್ಲಾ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸುತ್ತದೆ" ಎಂದು ಫಡ್ನವೀಸ್ ಹೇಳಿದ್ದಾರೆ.
Advertisement