
ನವದೆಹಲಿ: ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ(ಎನ್ ಡಿಎ) ಗುರುವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಅವರಿಗೆ ಆಡಳಿತ ಪಕ್ಷದ ಉಪ ರಾಷ್ಟ್ರಪತಿ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಅಧಿಕಾರ ನೀಡಿದೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ.
ಸಂಸತ್ ಸಂಕೀರ್ಣದಲ್ಲಿ ನಡೆದ ಪ್ರಮುಖ ಬಿಜೆಪಿ ನಾಯಕರು ಮತ್ತು ಅದರ ಮಿತ್ರಪಕ್ಷಗಳ ನಾಯಕರ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಇದು ಸರ್ವಾನುಮತದ ನಿರ್ಧಾರ ಎಂದು ಸಂಸದೀಯ ವ್ಯವಹಾರಗಳ ಸಚಿವರು ಹೇಳಿದ್ದಾರೆ.
ನಡ್ಡಾ ಜೊತೆಗೆ ಕೇಂದ್ರ ಸಚಿವರಾದ ರಾಜನಾಥ್ ಸಿಂಗ್ ಮತ್ತು ಅಮಿತ್ ಶಾ, ಜೆಡಿ(ಯು)ನ ಲಾಲನ್ ಸಿಂಗ್, ಶಿವಸೇನೆಯ ಶ್ರೀಕಾಂತ್ ಶಿಂಧೆ, ಟಿಡಿಪಿಯ ಲಾವು ಶ್ರೀ ಕೃಷ್ಣ ದೇವರಾಯಲು ಮತ್ತು ಎಲ್‌ಜೆಪಿ (ರಾಮ್ ವಿಲಾಸ್) ನ ಚಿರಾಗ್ ಪಾಸ್ವಾನ್ ಅವರು ಈ ಸಭೆಯಲ್ಲಿ ಭಾಗವಹಿಸಿದ್ದರು. ರಾಜನಾಥ್ ಸಿಂಗ್ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಉಪ ರಾಷ್ಟ್ರಪತಿ ಜಗದೀಪ್ ಧನಕರ್ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಸೆಪ್ಟೆಂಬರ್ 9ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಆಗಸ್ಟ್ 1 ರಂದು ತಿಳಿಸಿದೆ. ಆಗಸ್ಟ್ 7ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು 21ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದೆ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
Advertisement