
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಮಾಸಿಕ ರೇಡಿಯೋ ಕಾರ್ಯಕ್ರಮ 'ಮನ್ ಕಿ ಬಾತ್' ಆರಂಭವಾದಾಗಿನಿಂದ ಇಲ್ಲಿಯವರೆಗೆ 34.13 ಕೋಟಿ ರೂ. ಆದಾಯ ಗಳಿಸಿದೆ ಎಂದು ಕೇಂದ್ರ ಸರ್ಕಾರ ಶುಕ್ರವಾರ ರಾಜ್ಯಸಭೆಗೆ ತಿಳಿಸಿದೆ.
ಈ ಕುರಿತು ಇಂದು ಲೋಕಸಭೆಗೆ ಲಿಖಿತ ಉತ್ತರ ನೀಡಿದ ಮಾಹಿತಿ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಎಲ್ ಮುರುಗನ್, ಮನ್ ಕಿ ಬಾತ್ ಕಾರ್ಯಕ್ರಮವು ಹಲವು ಸಾಂಪ್ರದಾಯಿಕ ಮತ್ತು ಡಿಜಿಟಲ್ ವೇದಿಕೆಗಳ ಮೂಲಕ ಪ್ರೇಕ್ಷಕರನ್ನು ತಲುಪುತ್ತದೆ ಎಂದು ಹೇಳಿದರು.
"ಮನ್ ಕಿ ಬಾತ್ ಕಾರ್ಯಕ್ರಮವನ್ನು ಹೆಚ್ಚುವರಿ ವೆಚ್ಚವಿಲ್ಲದೆ ಅಸ್ತಿತ್ವದಲ್ಲಿರುವ ಆಂತರಿಕ ಸಂಪನ್ಮೂಲಗಳನ್ನು ಬಳಸಿಕೊಂಡು ಆಕಾಶವಾಣಿಯು ಈ ಕಾರ್ಯಕ್ರಮವನ್ನು ಪ್ರಸಾರ ಮಾಡುತ್ತಿದೆ ಮತ್ತು ಆರಂಭದಿಂದ ಇಲ್ಲಿಯವರೆಗೆ 34.13 ಕೋಟಿ ರೂ. ಆದಾಯ ಗಳಿಸಿದೆ" ಎಂದು ಅವರು ತಿಳಿಸಿದರು.
ಮನ್ ಕಿ ಬಾತ್ ಅನ್ನು ಮೊದಲು ಅಕ್ಟೋಬರ್ 3, 2014 ರಂದು ಪ್ರಸಾರ ಮಾಡಲಾಯಿತು ಮತ್ತು ಇದು ರಾಷ್ಟ್ರೀಯ ಮತ್ತು ಪ್ರಾದೇಶಿಕ ಜಾಲದಾದ್ಯಂತ ನೇರ ಪ್ರಸಾರವಾಗುತ್ತದೆ.
ಏಕಕಾಲದಲ್ಲಿ, ಈ ಕಾರ್ಯಕ್ರಮವನ್ನು ದೂರದರ್ಶನದ ವಿವಿಧ ರಾಷ್ಟ್ರೀಯ ಮತ್ತು ಪ್ರಾದೇಶಿಕ ಭಾಷಾ ವಾಹಿನಿಗಳಲ್ಲಿ ಪ್ರಸಾರ ಮಾಡಲಾಗುತ್ತದೆ ಎಂದು ಅವರು ಹೇಳಿದರು.
Advertisement