
ಮುಂಬೈ: 2024ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಮುನ್ನ ಇಬ್ಬರು ವ್ಯಕ್ತಿಗಳು ತಮ್ಮನ್ನು ಭೇಟಿಯಾಗಿ 160 ಕ್ಷೇತ್ರಗಳಲ್ಲಿ ವಿರೋಧ ಪಕ್ಷಗಳು ಗೆಲುವು ಸಾಧಿಸಲಿದೆ ಎಂದು ಖಚಿತವಾಗಿ ಹೇಳಿದ್ದರು ಎಂದು ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷ-ಎಸ್‌ಪಿ ಮುಖ್ಯಸ್ಥ ಶರದ್ ಪವಾರ್ ಶನಿವಾರ ಹೇಳಿದ್ದಾರೆ.
ಚುನಾವಣೆಗೆ ಮುನ್ನ ದೆಹಲಿಯಲ್ಲಿ ತಮ್ಮನ್ನು ಭೇಟಿಯಾಗಿದ್ದ ಇಬ್ಬರು ವ್ಯಕ್ತಿಗಳು ಮಹಾರಾಷ್ಟ್ರದ 288 ಕ್ಷೇತ್ರಗಳ ಪೈಕಿ 160 ಕ್ಷೇತ್ರಗಳಲ್ಲಿ ವಿರೋಧ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸವ್ಯಕ್ತಪಡಿಸಿದ್ದರು. ಆದರೆ ಫಲಿತಾಂಶವೇ ಬೇರೆಯಾಗಿತ್ತು ಎಂದು ಶರದ್ ಪವಾರ್ ಆಘಾತ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಮತ್ತು ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ "ಮತ ಕಳ್ಳತನ" ಆರೋಪದ ಬೆನ್ನಲ್ಲೇ ಶರದ್ ಪವಾರ್ ಅವರ ಈ ಹೇಳಿಕೆ ವ್ಯಾಪಕ ಚರ್ಚೆಗೆ ಕಾರಣವಾಗಿದೆ.
ಶನಿವಾರ ನಾಗ್ಪುರದಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಪವಾರ್, 'ಮಹಾರಾಷ್ಟ್ರದಲ್ಲಿ 2024 ರ ವಿಧಾನಸಭಾ ಚುನಾವಣೆಗೆ ಮುನ್ನ ದೆಹಲಿಯಲ್ಲಿ ಇಬ್ಬರು ವ್ಯಕ್ತಿಗಳು ನನ್ನನ್ನು ಭೇಟಿಯಾದರು. ಅವರು ಪ್ರತಿಪಕ್ಷ (ಮಹಾ ವಿಕಾಸ್ ಅಘಾಡಿ) 288 ಸ್ಥಾನಗಳ ಪೈಕಿ 160 ಗೆಲ್ಲಲು ಗ್ಯಾರಂಟಿಯೊಂದಿಗೆ ಸಹಾಯ ಮಾಡಲು ಮುಂದಾದರು.
ಈ ಇಬ್ಬರು ವ್ಯಕ್ತಿಗಳು ಮಹಾರಾಷ್ಟ್ರದ 288 ಕ್ಷೇತ್ರಗಳ ಪೈಕಿ 160 ಕ್ಷೇತ್ರಗಳಲ್ಲಿ ವಿರೋಧ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸವ್ಯಕ್ತಪಡಿಸಿದ್ದರು. ನಾನು ಆ ಇಬ್ಬರನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಪರಿಚಯಿಸಿದ್ದೆ. ಆದರೆ ಈ ಇಬ್ಬರು ವ್ಯಕ್ತಿಗಳು ಮಾಡಿದ ಹೇಳಿಕೆಗಳಿಗೆ ಯಾವುದೇ ಪ್ರಾಮುಖ್ಯತೆ ನೀಡದ ಕಾರಣ, ಅವರ ಹೆಸರುಗಳು ಮತ್ತು ಸಂಪರ್ಕ ವಿವರಗಳು ತಮ್ಮ ಬಳಿ ಇಲ್ಲ ಎಂದು ಹೇಳಿದ್ದಾರೆ.
'ನಾನು ಅವರನ್ನು ರಾಹುಲ್ ಗಾಂಧಿಗೆ ಪರಿಚಯಿಸಿದೆ. ಅವರು ಅವರಿಗೆ ಹೇಳಿದ್ದನ್ನು ನಿರ್ಲಕ್ಷಿಸಿದರು. ನಾವು (ವಿರೋಧ ಪಕ್ಷ) ಅಂತಹ ವಿಷಯಗಳಲ್ಲಿ ಭಾಗಿಯಾಗಬಾರದು ಮತ್ತು ನೇರವಾಗಿ ಜನರ ಬಳಿಗೆ ಹೋಗಬಾರದು ಎಂಬ ಅಭಿಪ್ರಾಯವೂ ಅವರಿಗಿತ್ತು" ಎಂದು ಅವರು ಹೇಳಿದರು.
ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 132 ಸ್ಥಾನಗಳೊಂದಿಗೆ ಗೆದ್ದಿದ್ದು, ಮಿತ್ರಪಕ್ಷಗಳಾದ ಶಿವಸೇನೆ ಮತ್ತು ಎನ್‌ಸಿಪಿ ಕ್ರಮವಾಗಿ 57 ಮತ್ತು 41 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ ಮೈತ್ರಿಕೂಟ ಸರ್ಕಾರ ರಚನೆ ಮಾಡಿವೆ.
Advertisement