ಎರಡೆರಡು Voter ID: Bihar ಉಪಮುಖ್ಯಮಂತ್ರಿಗೆ ಚುನಾವಣಾ ಆಯೋಗ ಶಾಕ್; ನೋಟಿಸ್ ಜಾರಿ!

ಬಿಹಾರದ ಉಪಮುಖ್ಯಮಂತ್ರಿ ವಿಜಯ್ ಕುಮಾರ್ ಸಿನ್ಹಾ ಎರಡೆರಡು ಮತ ಗುರುತು ಪತ್ರ ಹೊಂದಿದ್ದಾರೆ ಎಂದು ಆರ್ ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಆರೋಪ ಮಾಡಿದ ಬೆನ್ನಲ್ಲೇ ಚುನಾವಣಾ ಆಯೋಗ ಈ ಕುರಿತು ವಿವರ ಕೋರಿ ನೋಟಿಸ್ ಜಾರಿ ಮಾಡಿದೆ.
Bihar Deputy Chief Minister In Double Voter ID Row
ಬಿಹಾರದ ಉಪ ಮುಖ್ಯಮಂತ್ರಿ ವಿಜಯ್ ಕುಮಾರ್ ಸಿನ್ಹಾ
Updated on

ಪಾಟ್ನಾ: ಮತಕಳ್ಳತನ ವಿವಾದದ ನಡುವೆಯೇ ಬಿಹಾರದ ಉಪ ಮುಖ್ಯಮಂತ್ರಿ ವಿಜಯ್ ಕುಮಾರ್ ಸಿನ್ಹಾಗೆ ಚುನಾವಣಾ ಆಯೋಗ ಶಾಕ್ ನೀಡಿದ್ದು, ನೋಟಿಸ್ ಜಾರಿ ಮಾಡಿದೆ.

ಹೌದು.. ಬಿಹಾರದ ಉಪಮುಖ್ಯಮಂತ್ರಿ ವಿಜಯ್ ಕುಮಾರ್ ಸಿನ್ಹಾ ಎರಡೆರಡು ಮತ ಗುರುತು ಪತ್ರ ಹೊಂದಿದ್ದಾರೆ ಎಂದು ಆರ್ ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಆರೋಪ ಮಾಡಿದ ಬೆನ್ನಲ್ಲೇ ಚುನಾವಣಾ ಆಯೋಗ ಈ ಕುರಿತು ವಿವರ ಕೋರಿ ನೋಟಿಸ್ ಜಾರಿ ಮಾಡಿದೆ.

ಎರಡೆರಡು ಮತದಾರರ ಗುರುತಿನ ಚೀಟಿಗಳನ್ನು ಹೊಂದಿದ್ದು, ಎರಡು ಸ್ಥಳಗಳಲ್ಲಿ ಮತದಾರರಾಗಿ ನೋಂದಾಯಿಸಿಕೊಂಡಿದ್ದಾರೆ ಎಂಬ ಆರೋಪದ ಮೇಲೆ ಬಿಹಾರದ ಉಪಮುಖ್ಯಮಂತ್ರಿ ಮತ್ತು ಹಿರಿಯ ಬಿಜೆಪಿ ನಾಯಕ ವಿಜಯ್ ಕುಮಾರ್ ಸಿನ್ಹಾ ಅವರಿಗೆ ನೋಟಿಸ್ ನೀಡಲಾಗಿದೆ ಎಂದು ತಿಳಿದುಬಂದಿದೆ.

ಕಾಂಗ್ರೆಸ್‌ನ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ನಕಲಿ ಮತದಾರರ ಕುರಿತಾದ ದೊಡ್ಡ ರಾಜಕೀಯ ವಿವಾದದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದಿಂದ ಈ ನೋಟಿಸ್ ಬಂದಿದೆ.

Bihar Deputy Chief Minister In Double Voter ID Row
'ರಾಜ್ಯದ ಉಪಮುಖ್ಯಮಂತ್ರಿಗಳೇ ಎರಡೆರಡು VOTER ID ಹೊಂದಿದ್ದಾರೆ': Tejashwi Yadav

ಬಿಹಾರದ ಕಾಂಗ್ರೆಸ್ ಮುಖ್ಯಸ್ಥ ರಾಜೇಶ್ ಕುಮಾರ್ ಶನಿವಾರ X ನಲ್ಲಿ ಪೋಸ್ಟ್‌ನಲ್ಲಿ ಡಿಸಿಎಂ ಸಿನ್ಹಾ ಅವರ ವಿಧಾನಸಭಾ ಕ್ಷೇತ್ರವಾದ ಲಖಿಸರೈ ಮತ್ತು ಪಾಟ್ನಾದ ಬಂಕಿಪುರದಲ್ಲಿ ಮತದಾರರಾಗಿ ಅವರ ಹೆಸರನ್ನು ಹೊಂದಿರುವ ಕರಡು ಮತದಾರರ ಪಟ್ಟಿಯ ಸ್ಕ್ರೀನ್‌ಶಾಟ್‌ಗಳನ್ನು ಹಂಚಿಕೊಂಡಿದ್ದರು.

ಇದೇ ವಿಚಾರವಾಗಿ ಬಂಕಿಪುರ ವಿಧಾನಸಭಾ ಕ್ಷೇತ್ರದ ಚುನಾವಣಾ ನೋಂದಣಿ ಅಧಿಕಾರಿ ಈಗ ಎರಡು ವಿಭಿನ್ನ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಪಟ್ಟಿ ಮಾಡಿದ್ದಕ್ಕಾಗಿ ವಿವರಣೆಯನ್ನು ಕೋರಿ ನೋಟಿಸ್ ಕಳುಹಿಸಿದ್ದಾರೆ. ಆಗಸ್ಟ್ 14 ರಂದು ಸಂಜೆ 5 ಗಂಟೆಯೊಳಗೆ ಈ ಕುರಿತು ಪ್ರತಿಕ್ರಿಯಿಸಲು ಅವರನ್ನು ಕೇಳಲಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com