ನವದೆಹಲಿ: ಇಂಡಿಯಾ ಬಣದ ಸಂಸದರಿಗೆ ನಾಳೆ ಖರ್ಗೆ 'ಭೋಜನಕೂಟ' ಆಯೋಜನೆ!

'ಚುನಾವಣೆ ವಂಚನೆ' ವಿಷಯದ ಕುರಿತು ವಿರೋಧ ಪಕ್ಷದ ನಾಯಕರು ಮತ್ತು ಸಂಸದರು ಸೋಮವಾರ ಸಂಸತ್ತಿನಿಂದ ಚುನಾವಣಾ ಆಯೋಗದ ಕಚೇರಿಗೆ ಪ್ರತಿಭಟನಾ ಮೆರವಣಿಗೆಯನ್ನು ನಡೆಸಲಿದ್ದಾರೆ.
Mallikarjuna Kharge
ಮಲ್ಲಿಕಾರ್ಜುನ ಖರ್ಗೆ
Updated on

ನವದೆಹಲಿ: ಸದ್ಯ ನಡೆಯುತ್ತಿರುವ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಬಿಹಾರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಮತ್ತು ಚುನಾವಣಾ ಅಕ್ರಮ ಆರೋಪದ ವಿರುದ್ಧ ವಿರೋಧ ಪಕ್ಷಗಳು ಸಂಘಟಿತ ಹೋರಾಟ ನಡೆಸುತ್ತಿರುವಂತೆಯೇ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ ಇಂಡಿಯಾ ಬಣದ ಸಂಸದರಿಗೆ ಭೋಜನಕೂಟ ಆಯೋಜಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

'ಚುನಾವಣೆ ವಂಚನೆ' ವಿಷಯದ ಕುರಿತು ವಿರೋಧ ಪಕ್ಷದ ನಾಯಕರು ಮತ್ತು ಸಂಸದರು ಸೋಮವಾರ ಸಂಸತ್ತಿನಿಂದ ಚುನಾವಣಾ ಆಯೋಗದ ಕಚೇರಿಗೆ ಪ್ರತಿಭಟನಾ ಮೆರವಣಿಗೆಯನ್ನು ನಡೆಸಲಿದ್ದಾರೆ.

ಅದೇ ದಿನ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಖರ್ಗೆ ಅವರು ಚಾಣಕ್ಯಪುರಿಯಲ್ಲಿರುವ ಹೋಟೆಲ್ ತಾಜ್ ಪ್ಯಾಲೇಸ್ ನಲ್ಲಿ ಇಂಡಿಯಾ ಬಣದ ಸಂಸದರಿಗೆ ಆತಿಥ್ಯ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನಿವಾಸದಲ್ಲಿ ಇತ್ತೀಚಿಗೆ ಡಿನ್ನರ್ ಪಾರ್ಟಿ ನಡೆದಿತ್ತು. ಅದರಲ್ಲಿ ಪಾಲ್ಗೊಂಡಿದ್ದ ಇಂಡಿಯಾ ಬಣದ ನಾಯಕರು ಬಿಹಾರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ವಿರುದ್ಧ ಒಗ್ಗಡಿನ ಹೋರಾಟಕ್ಕೆ ಪಣ ತೊಟ್ಟಿದ್ದರು. ಇದಾದ ಕೆಲವೇ ದಿನಗಳಲ್ಲಿ ಇದೀಗ ಖರ್ಗೆ ಅವರು ಭೋಜನ ಕೂಟ ಆಯೋಜಿಸುತ್ತಿದ್ದಾರೆ.

Mallikarjuna Kharge
SIR ಮೂಲಕ ಮತಕಳ್ಳತನ 'ಸಾಂಸ್ಥೀಕರಣಗೊಳಿಸಲು' ECI-ಬಿಜೆಪಿ ಪಿತೂರಿ: Video ಮೂಲಕ ರಾಹುಲ್ ಗಾಂಧಿ ಆರೋಪ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನಿವಾಸದಲ್ಲಿ ಇತ್ತೀಚಿಗೆ ಡಿನ್ನರ್ ಪಾರ್ಟಿ ನಡೆದಿತ್ತು. ಅದರಲ್ಲಿ ಪಾಲ್ಗೊಂಡಿದ್ದ ಇಂಡಿಯಾ ಬಣದ ನಾಯಕರು ಬಿಹಾರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ವಿರುದ್ಧ ಒಗ್ಗಡಿನ ಹೋರಾಟಕ್ಕೆ ಪಣ ತೊಟ್ಟಿದ್ದರು. ಇದಾದ ಕೆಲವೇ ದಿನಗಳಲ್ಲಿ ಇದೀಗ ಖರ್ಗೆ ಅವರು ಭೋಜನ ಕೂಟ ಆಯೋಜಿಸುತ್ತಿದ್ದಾರೆ.

Follow KannadaPrabha channel on WhatsApp

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com