
ಮೇದಿನಿನಗರ (ಜಾರ್ಖಂಡ್): ಜಾರ್ಖಂಡ್‌ನ ಪಲಾಮು ಜಿಲ್ಲೆಯಲ್ಲಿ 22 ವರ್ಷದ ಮಹಿಳೆ ಮೇಲೆ ಆಕೆಯ ತಂಗಿಯ ಮುಂದೆಯೇ ಇಬ್ಬರು ವ್ಯಕ್ತಿಗಳು ಅತ್ಯಾಚಾರ ಎಸಗಿದ್ದು, ಆರೋಪಿಗಳಿಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಪಂಜಾಬ್‌ಗೆ ಹೋಗಲು ರೈಲಿಗಾಗಿ ತಾನು ಮತ್ತು ತನ್ನ ಸಹೋದರಿ ಡಾಲ್ಟನ್‌ಗಂಜ್ ನಿಲ್ದಾಣದಲ್ಲಿ ಕಾಯುತ್ತಿದ್ದೆವು. ಆಗ ಪೊಲೀಸರಂತೆ ನಟಿಸಿದ ಇಬ್ಬರು ವ್ಯಕ್ತಿಗಳು ತಮ್ಮನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು, ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಮಹಿಳೆ ಸೋಮವಾರ ಪೊಲೀಸರಿಗೆ ದೂರು ನೀಡಿರುವುದಾಗಿ ಪಲಮು ಪೊಲೀಸ್ ವರಿಷ್ಠಾಧಿಕಾರಿ ರೀಷ್ಮಾ ರಮೇಶನ್ ಹೇಳಿದ್ದಾರೆ.
'ಇಬ್ಬರೂ ಸೋದರಿಯರನ್ನು ಚೈನ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ನಿರ್ಜನ ಸ್ಥಳಕ್ಕೆ ಕರೆದೊಯ್ಯಲಾಗಿದ್ದು, ಅಲ್ಲಿ ಇಬ್ಬರು ವ್ಯಕ್ತಿಗಳು ಅಕ್ಕನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ' ಎಂದು ಎಸ್ಪಿ ಹೇಳಿದರು.
ಕೃತ್ಯದ ನಂತರ, ಇಬ್ಬರು ಆರೋಪಿಗಳು ಸೋದರಿಯರನ್ನು ತಮ್ಮ ಮೋಟಾರ್ ಸೈಕಲ್‌ನಲ್ಲಿ ಕರೆದೊಯ್ಯುತ್ತಿದ್ದಾಗ, ತಂಗಿ ದ್ವಿಚಕ್ರ ವಾಹನದಿಂದ ಹಾರಿದ್ದಾರೆ ಮತ್ತು ಕಿರುಚಲು ಪ್ರಾರಂಭಿಸಿದ್ದಾರೆ. ಆಗ ಸ್ಥಳೀಯರು ಆರೋಪಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ' ಎಂದು ರಮೇಶ್ ಹೇಳಿದರು.
ದೂರುದಾರರನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ. ಆರೋಪಿಗಳನ್ನು ಸ್ಥಳೀಯ ನ್ಯಾಯಾಲಯದ ಮುಂದೆ ಹಾಜರುಪಡಿಸಿ, ಜೈಲಿಗೆ ಕಳುಹಿಸಲಾಗಿದೆ ಎಂದು ಎಸ್ಪಿ ಹೇಳಿದರು.
Advertisement