
ಬಲರಾಂಪುರ: ಉತ್ತರ ಪ್ರದೇಶದ ಬಲರಾಂಪುರ ಜಿಲ್ಲೆಯಲ್ಲಿ ಮಾನಸಿಕ ಅಸ್ವಸ್ಥ, ಕಿವುಡ ಮತ್ತು ಮೂಗ ಮಹಿಳೆಯೊಬ್ಬಳನ್ನು ನಿರ್ಜನ ರಸ್ತೆಯಲ್ಲಿ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಭಯಾನಕ ಘಟನೆಯು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇಬ್ಬರು ಶಂಕಿತರನ್ನು ಗುರುತಿಸಿ, ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಇಬ್ಬರು ಆರೋಪಿಗಳಾದ ಅಂಕುರ್ ವರ್ಮಾ ಮತ್ತು ಹರ್ಷಿತ್ ಪಾಂಡೆ ಅವರನ್ನು ಪೊಲೀಸ್ ಎನ್‌ಕೌಂಟರ್ ನಂತರ ಬಂಧಿಸಲಾಯಿತು ಮತ್ತು ಪ್ರಾಥಮಿಕ ವಿಚಾರಣೆಯ ಸಮಯದಲ್ಲಿ ಅವರು ಕೃತ್ಯವನ್ನು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ವಿಕಾಶ್ ಕುಮಾರ್ ತಿಳಿಸಿದ್ದಾರೆ.
16 ಸೆಕೆಂಡುಗಳ ಸಿಸಿಟಿವಿ ದೃಶ್ಯಾವಳಿಯಲ್ಲಿ, ಮಹಿಳೆ ಬರಿಗಾಲಿನಲ್ಲಿ ಮಂದ ಬೆಳಕಿನ ನಿರ್ಜನ ರಸ್ತೆಯಲ್ಲಿ ಓಡುತ್ತಿದ್ದು, ಪುರುಷರು ಬೈಕ್ ನಲ್ಲಿ ಅವಳನ್ನು ಬೆನ್ನಟ್ಟುತ್ತಿರುವುದು ಸೆರೆಯಾಗಿದೆ.
21 ವರ್ಷದ ಮಹಿಳೆಯ ಸಹೋದರ ಎರಡು ದಿನಗಳ ಹಿಂದೆ ಕೊಟ್ವಾಲಿ ದೇಹತ್ ಪೊಲೀಸ್ ಠಾಣೆಯಲ್ಲಿ ತನ್ನ ಕಿವುಡ-ಮೂಗ ಮತ್ತು ಮಾನಸಿಕ ಅಸ್ವಸ್ಥ ಸಹೋದರಿ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಆರೋಪಿಸಿ ದೂರು ನೀಡಿದ ನಂತರ ಈ ಘಟನೆ ಬೆಳಕಿಗೆ ಬಂದಿದೆ.
ಈ ಸಂಬಂಧ ಸೋಮವಾರ ಎಫ್‌ಐಆರ್ ದಾಖಲಿಸಲಾಗಿದ್ದು, ತಕ್ಷಣದ ತನಿಖೆ ಆರಂಭಿಸಲಾಗಿದೆ ಎಂದು ಎಸ್‌ಪಿ ಕುಮಾರ್ ಮಾಹಿತಿ ನೀಡಿದ್ದಾರೆ.
"ಯುವತಿ ನಡೆದುಕೊಂಡು ಹೋದ ರಸ್ತೆಯನ್ನು ಸಂಪೂರ್ಣವಾಗಿ ಪರಿಶೀಲಿಸಲಾಯಿತು ಮತ್ತು ಸಿಸಿಟಿವಿ ದೃಶ್ಯಾವಳಿಗಳು ಶಂಕಿತರನ್ನು ಗುರುತಿಸಲು ಸಹಾಯ ಮಾಡಿದವು" ಎಂದು ಕುಮಾರ್ ಹೇಳಿದ್ದಾರೆ.
ದೂರಿನ ಪ್ರಕಾರ, ಮಹಿಳೆ ತನ್ನ ಮಾವನ ಮನೆಯಿಂದ ತನ್ನ ಮನೆಗೆ ಹೋಗುತ್ತಿದ್ದಾಗ, ಕೆಲವು ಅಪರಿಚಿತ ವ್ಯಕ್ತಿಗಳು ಅವಳನ್ನು ಬಲವಂತವಾಗಿ ಮೋಟಾರ್ ಸೈಕಲ್‌ನಲ್ಲಿ ಕರೆದೊಯ್ದು, ಅತ್ಯಾಚಾರ ಎಸಗಿದ್ದಾರೆ. ಆರೋಪಿಗಳು ಹತ್ತಿರದ ಪ್ರತ್ಯೇಕ ಸ್ಥಳದಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.
Advertisement