
ನವದೆಹಲಿ: ಬಿಹಾರ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(ಎಸ್ಐಆರ್) ವಿರುದ್ಧ ಮತ್ತು "ಮತ ಚೋರಿ ವಿರುದ್ಧದ ಹೋರಾಟ"ವನ್ನು ಸಾಮೂಹಿಕ ಆಂದೋಲನವನ್ನಾಗಿ ಮಾಡಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬಿಹಾರದ ಇಂಡಿಯಾ ಬ್ಲಾಕ್ ನಾಯಕರೊಂದಿಗೆ ಆಗಸ್ಟ್ 17 ರಿಂದ ರಾಜ್ಯಾದ್ಯಂತ 'ಮತ ಅಧಿಕಾರ ಯಾತ್ರೆ' ಕೈಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಬುಧವಾರ ತಿಳಿಸಿದೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು X ನಲ್ಲಿ ಮತ ಯಾತ್ರೆಯನ್ನು ಘೋಷಿಸಿದ್ದು, ತಮ್ಮ ಪ್ರಜಾಪ್ರಭುತ್ವವನ್ನು ರಕ್ಷಿಸುವ ಹೋರಾಟ ಬೀದಿಗಳಲ್ಲಿ ನಡೆಯಲಿದೆ ಎಂದು ಹೇಳಿದ್ದಾರೆ.
"ಆಗಸ್ಟ್ 17 ರಿಂದ, LOP ರಾಹುಲ್ ಗಾಂಧಿ ಮತ್ತು ಇಂಡಿಯಾ ಬ್ಲಾಕ್ ಪಕ್ಷಗಳು ಬಿಹಾರದಾದ್ಯಂತ ಬೃಹತ್ ಮತ ಅಧಿಕಾರ ಯಾತ್ರೆಯನ್ನು ಕೈಗೊಳ್ಳಲಿದ್ದಾರೆ. ಈ ಮೂಲಕ ಅಪಾಯಕಾರಿ SIR ವಿರುದ್ಧ ಮತ್ತು ವೋಟ್ ಚೋರಿ ವಿರುದ್ಧದ ಹೋರಾಟವನ್ನು ಸಾಮೂಹಿಕ ಆಂದೋಲನವನ್ನಾಗಿ ಮಾಡಲಾಗುವುದು!" ಎಂದು ತಿಳಿಸಿದ್ದಾರೆ.
ಆಗಸ್ಟ್ 17 ರಿಂದ ಆರಂಭವಾಗುವ ಈ ಯಾತ್ರೆ ಸೆಪ್ಟೆಂಬರ್ 1 ರಂದು ಪಾಟ್ನಾದ ಗಾಂಧಿ ಮೈದಾನದಲ್ಲಿ ಬೃಹತ್ ರ್ಯಾಲಿಯೊಂದಿಗೆ ಮುಕ್ತಾಯಗೊಳ್ಳಲಿದೆ.
Advertisement