
ನವದೆಹಲಿ: ರಾಷ್ಟ್ರ ರಾಜಧಾನಿಯ ಛತ್ರಸಾಲ್ ಕ್ರೀಡಾಂಗಣದಲ್ಲಿ ಕುಸ್ತಿಪಟು ಸಾಗರ್ ಧನಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಲಿಂಪಿಕ್ ಕುಸ್ತಿಪಟು ಸುಶೀಲ್ ಕುಮಾರ್ ಅವರಿಗೆ ನೀಡಲಾಗಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ಬುಧವಾರ ರದ್ದುಗೊಳಿಸಿದೆ.ಒಂದು ವಾರದೊಳಗೆ ಶರಣಾಗುವಂತೆ ಕುಸ್ತಿಪಟುವಿಗೆ ನ್ಯಾಯಾಲಯ ಸೂಚಿಸಿದೆ.
ಸುಶೀಲ್ ಕುಮಾರ್ ಅವರಿಗೆ ಜಾಮೀನು ನೀಡಿ ದೆಹಲಿ ಹೈಕೋರ್ಟ್ ಮಾರ್ಚ್ 4 ರಂದು ಹೊರಡಿಸಿದ್ದ ಆದೇಶವನ್ನು ನ್ಯಾಯಾಧೀಶರಾದ ಸಂಜಯ್ ಕರೋಳ್ ಮತ್ತು ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನೊಳಗೊಂಡ ನ್ಯಾಯಪೀಠ ರದ್ದುಪಡಿಸಿದೆ.
ಆಸ್ತಿ ವಿವಾದದ ಹಿನ್ನೆಲೆಯಲ್ಲಿ 2021 ರ ಮೇ ತಿಂಗಳಲ್ಲಿ ಕುಮಾರ್ ಮತ್ತು ಇತರರು ಧನಕರ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಹಲ್ಲೆಯಲ್ಲಿ ಧನಕರ್ ಅವರ ಇಬ್ಬರು ಸ್ನೇಹಿತರು ಕೂಡ ಗಾಯಗೊಂಡಿದ್ದರು. ಮಾರಕಾಸ್ತ್ರಗಳಿಂದ ಹೊಡೆದ್ದರಿಂದ ಧಂಕರ್ ಅವರ ಮೆದುಳಿನ ಹಾನಿಯಾಗಿದೆ ಎಂಬುದು ಮರಣೋತ್ತರ ಪರೀಕ್ಷೆಯಲ್ಲಿ ದೃಢಪಟ್ಟಿತ್ತು.
Advertisement